ETV Bharat / bharat

ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿಗೆ ಕೊಲೆ ಬೆದರಿಕೆ..!

ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಚಾರ ಮುನ್ನೆಲೆಗೆ ಬಂದಿದೆ. ಈ ಸಂಬಂಧ ನೋಯ್ಡಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

pm narendra modi cm yogi adityanath
ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯೋಗಿಗೆ ಕೊಲೆ ಬೆದರಿಕೆ
author img

By

Published : Apr 5, 2023, 7:49 PM IST

ನೋಯ್ಡಾ/ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆಯೊಡ್ಡಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಇ-ಮೇಲ್‌ನಲ್ಲಿ ಮಾಹಿತಿ ಪಡೆದ ಖಾಸಗಿ ಸುದ್ದಿ ವಾಹಿನಿಯ ಸಿಇಓ ನೋಯ್ಡಾದ ಸೆಕ್ಟರ್-20 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ವೇಳೆ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕಾರಿಗಳಿಂದ ಈವರೆಗೆ ಯಾವುದೇ ಹೇಳಿಕೆ ಹೊರಬಿದ್ದಿಲ್ಲ. ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅವರನ್ನು ಕೊಲ್ಲುವ ಬೆದರಿಕೆಯನ್ನು ಯುವಕನೊಬ್ಬ ಖಾಸಗಿ ಸುದ್ದಿ ವಾಹಿನಿಯ ಸಿಇಓಗೆ ಇ-ಮೇಲ್ ಮಾಡಿದ್ದಾನೆ.

ಇ-ಮೇಲ್ ಮೂಲಕ ಬಂತು ಬೆದರಿಕೆ ಪತ್ರ: ಪೊಲೀಸ್ ಠಾಣೆ ಸೆಕ್ಟರ್-20ರಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಾರ್ತಿಕ್ ಸಿಂಗ್ ಎಂಬ ಯುವಕ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದಿದೆ. ಈ ಕುರಿತು ಖಾಸಗಿ ಸುದ್ದಿ ವಾಹಿನಿಯ ಸಿಇಓ ನೀಡಿದ ದೂರಿನ ಆಧಾರದ ಮೇಲೆ ನೋಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಪೊಲೀಸರು ಎರಡು ತಂಡಗಳಾಗಿ ಆರೋಪಿ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.

ಸಿಇಓ ನೀಡಿದ ದೂರಿನ ಆಧಾರದ ಮೇಲೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಠಾಣೆ ಸೆಕ್ಟರ್ 20ರ ಪ್ರಭಾರಿ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು. ಕಸ್ಟಡಿಯಲ್ಲಿರುವ ಕೆಲವರನ್ನು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 'ಸುದೀಪ್​ಗೆ ಬೆದರಿಕೆ ವಿಚಾರದಲ್ಲಿ ಸರ್ಕಾರ ಸುಮ್ಮನೆ ಕೂರಲ್ಲ': ಡಾ. ಸುಧಾಕರ್

ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ: ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ ಅವರಿಗೆ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿರುವ ಪ್ರಕರಣದ ಹಿನ್ನೆಲೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಮಾ.10ರಂದು ಬಂದ ಅನಾಮಧೇಯ ಪತ್ರಗಳಲ್ಲಿ ನಟ ಸುದೀಪ್ ಹಾಗೂ ಅವರ ಕುಟುಂಬ ಸದಸ್ಯರ ಹೆಸರುಗಳನ್ನು ಉಲ್ಲೇಖ ಮಾಡಿ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ಖಾಸಗಿ ವಿಡಿಯೋ ರಿಲೀಸ್ ಮಾಡೋದಾಗಿಯೂ ಎಂದು ಬೆದರಿಕೆ ಹಾಕಲಾಗಿದೆ. ಈ ಕುರಿತು ಪುಟ್ಟೇನಹಳ್ಳಿ ಠಾಣೆಗೆ ಸುದೀಪ್​ ಆಪ್ತ ಜಾಕ್ ಮಂಜು ದೂರು ಕೊಟ್ಟಿದ್ದಾರೆ.

ಸುದೀಪ್​ಗೆ ಅನಾಮಧೇಯ ಪತ್ರಗಳಿಂದ ಅವಾಚ್ಯವಾಗಿ ನಿಂದಿಸಿ ಮಾನಸಿಕ ಕಿರುಕುಳ ನೀಡಲಾಗಿದೆ. ನಟ ಸುದೀಪ್​ ಕುಟುಂಬವು ಸಮಾಜದಲ್ಲಿ ಗೌರವಾನ್ವಿತ ಕುಟುಂಬವಾಗಿದೆ. ಈ ರೀತಿ ಸಂಚು ರೂಪಿಸಿ ಬೆದರಿಕೆ ಪತ್ರ ಕಳುಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಾಕ್​ ಮಂಜು ಠಾಣೆಗೆ ನೀಡಿದ್ದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ನಟ ಸುದೀಪ್‌ ಬೆಂಬಲ: ಕೇಸರಿ ಪಕ್ಷದ ಲೆಕ್ಕಾಚಾರವೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.