ನವದಹೆಲಿ: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಭಾರಿ ಮಳೆಯಿಂದ ಮನೆ ಕುಸಿದು 7 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಇದೇ ವೇಳೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಕಚೇರಿ, ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ದುಃಖಕರವಾಗಿದೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಅವರ ಕಚೇರಿ ಮೂಲಗಳು ತಿಳಿಸಿವೆ.
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಬುಧವಾರ ರಾತ್ರಿ 7 ಮಂದಿ ಮೃತಪಟ್ಟಿದ್ದು, ಅವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದರು.