ETV Bharat / bharat

ಸೋಮನಾಥ ದೇವಾಲಯ ಟ್ರಸ್ಟ್​ನ ಅಧ್ಯಕ್ಷರಾಗಿ ಮೋದಿ: ಈ ಹುದ್ದೆ ಅಲಂಕರಿಸಿದ 2ನೇ ಪ್ರಧಾನಿ! - ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯ

ಸೋಮನಾಥ ದೇವಾಲಯದ ಟ್ರಸ್ಟ್​ನ ಟ್ರಸ್ಟಿಗಳಲ್ಲಿ ಒಬ್ಬರಾಗಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Somnath temple trust
Somnath temple trust
author img

By

Published : Jan 19, 2021, 2:23 AM IST

ಅಹಮದಾಬಾದ್​: ವಿಶ್ವ ಪ್ರಸಿದ್ಧ ಸೋಮನಾಥ ದೇವಾಲಯ ಟ್ರಸ್ಟ್​ನ ಅಧ್ಯಕ್ಷರಾಗಿ ಪ್ರಧಾನಿ ನರೇಂದ್ರ ಮೋದಿ ಆಯ್ಕೆಯಾಗಿದ್ದು, ಈ ಹುದ್ದೆ ಅಲಂಕರಿಸಿದ ದೇಶದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Somnath temple trust
ಪ್ರಧಾನಿ ನರೇಂದ್ರ ಮೋದಿ

ಈ ಹಿಂದೆ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಈ ದೇವಾಲಯದ ಟ್ರಸ್ಟ್​ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಇದೀಗ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಅಕ್ಟೋಬರ್​​ನಲ್ಲಿ ಗುಜರಾತ್​ನ ಮಾಜಿ ಮುಖ್ಯಮಂತ್ರಿ ಕೇಶುಭಾಯ್​ ಪಟೇಲ್​ ಅವರ ನಿಧನದ ನಂತರ ಸೋಮನಾಥ ಟ್ರಸ್ಟ್​ನ ಅಧ್ಯಕ್ಷ ಹುದ್ದೆ ಖಾಲಿಯಾಗಿತ್ತು. ಪಟೇಲ್​ 16 ವರ್ಷಗಳ ಕಾಲ(2004-2020) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

  • प्रधानमंत्री श्री @narendramodi जी को सोमनाथ मंदिर ट्रस्ट के अध्यक्ष बनने पर हृदयपूर्वक बधाई देता हूँ। सोमनाथ तीर्थ क्षेत्र के विकास के प्रति मोदी जी का समर्पण अद्भुत रहा है।

    मुझे पूर्ण विश्वास है कि मोदी जी की अध्यक्षता में ट्रस्ट, सोमनाथ मंदिर की गरिमा व भव्यता को और बढ़ाएगा। pic.twitter.com/2uJSqJxyKf

    — Amit Shah (@AmitShah) January 18, 2021 " class="align-text-top noRightClick twitterSection" data=" ">

ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ 1.11 ಲಕ್ಷ ರೂ. ದೇಣಿಗೆ ನೀಡಿದ ದಿಗ್ವಿಜಯ್​​ ಸಿಂಗ್​!

ಇದಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ,ಪಿಎಂ ಮೋದಿ ನೇತೃತ್ವದ ಈ ಟ್ರಸ್ಟ್​ ಸೋಮನಾಥ ದೇವಾಲಯದ ಘನತೆ ಮತ್ತು ಭವ್ಯತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ಟ್ರಸ್ಟ್​ನ ಟ್ರಸ್ಟಿಗಳಲ್ಲಿ ಒಬ್ಬರಾಗಿದ್ದು, ಸೋಮವಾರ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಕಾರ್ಯದರ್ಶಿ ಪಿ.ಕೆ ಲಾಹೇರಿ ಹೇಳಿದ್ದಾರೆ.

ದೇವಾಲಯದ ಟ್ರಸ್ಟಿಗಳಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್​.ಕೆ ಅಡ್ವಾಣಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಮೂಲದ ವಿದ್ವಾಂಸ ಜೆ.ಡಿ ಪರ್ಮರ್​ ಮತ್ತು ಉದ್ಯಮಿ ಹರ್ಷವರ್ಧನ್​ ನಿಯೋಟಿಯಾ ಸೇರಿದ್ದಾರೆ. ದಾಖಲೆ ಪ್ರಕಾರ ಮಾಜಿ ಪ್ರಧಾನಿ ದೇಸಾಯಿ 1967 ಮತ್ತು 1995ರ ನಡುವೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.