ETV Bharat / bharat

2024ರ ಲೋಕಸಭೆಯ ಹ್ಯಾಟ್ರಿಕ್ ಗೆಲುವಿಗೆ ಗ್ಯಾರಂಟಿ ಸಿಕ್ಕಿದೆ : ಪ್ರಧಾನಿ ಮೋದಿ ವಿಶ್ವಾಸ

Assembly elections results 2023 : ಚುನಾವಣೆ ಫಲಿತಾಂಶದ ಬಳಿಕ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಚೇರಿಗೆ ಆಗಮಿಸಿದ್ದು, ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.

pm-modi-arrives-at-bjp-headquarters-in-delhi-after-partys-victory-in-assembly-elections
ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು : ಪಕ್ಷದ ಕಚೇರಿಗೆ ಮೋದಿ ಆಗಮನ, ಭರ್ಜರಿ ಸ್ವಾಗತ
author img

By PTI

Published : Dec 3, 2023, 7:22 PM IST

Updated : Dec 3, 2023, 8:13 PM IST

ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದರು. ಬಳಿಕ ಚುನಾವಣಾ ಫಲಿತಾಂಶ ಮತ್ತು ಇದಕ್ಕಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯ ಗೆಲುವು ಐತಿಹಾಸಿಕ ಮತ್ತು ಅಭೂತಪೂರ್ವ ಗೆಲುವು. ಸಬ್ಕಾ ಸಾಥ್​ ಸಬ್ಕಾ ವಿಕಾಸ್​ ಎಂಬ ಭಾವನೆ ಇಂದು ಗೆದ್ದಿದೆ. ಈ ಗೆಲುವು ಸ್ವಾವಲಂಬಿ ಭಾರತದ ಗೆಲುವು, ಆತ್ಮನಿರ್ಭರ ಭಾರತದ ಗೆಲುವು, ಪಾರದರ್ಶಕತೆ, ಉತ್ತಮ ಆಡಳಿತದ ಗೆಲುವಾಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿಯ ಮೇಲೆ ಪ್ರೀತಿಯ ಸುರಿಮಳೆಗೈದಿದ್ದಕ್ಕಾಗಿ ಧನ್ಯವಾದಗಳು. ಜೊತೆಗೆ ತೆಲಂಗಾಣದಲ್ಲೂ ಬಿಜೆಪಿಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಕೆಲವರು ಜಾತಿ ಆಧಾರದ ಮೇಲೆ ದೇಶವನ್ನು ವಿಭಜಿಸಲು ಮುಂದಾಗಿದ್ದರು. ನನ್ನ ಪ್ರಕಾರ ಮಹಿಳೆ, ಯುವಜನ, ರೈತರು ಮತ್ತು ಬಡವರು ಎಂಬ ನಾಲ್ಕು ಜಾತಿಗಳಿವೆ. ಇವರ ಸಬಲೀಕರಣವು ದೇಶವನ್ನು ಬಲಪಡಿಸುತ್ತದೆ. ಈ ನಾಲ್ಕು ಜಾತಿಯ ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಪ್ರತಿಯೊಬ್ಬ ಬಡವನಿಗೂ ತಾನು ಗೆದ್ದಿದ್ದೇನೆ ಎಂಬ ಭಾವನೆ ಇದೆ ಎಂದು ತಿಳಿಸಿದರು.

ಮಹಿಳಾ ಸಬಲೀಕರಣವು ಬಿಜೆಪಿಯ ಮಾದರಿ ಅಭಿವೃದ್ಧಿಯಲ್ಲಿ ಪ್ರಮುಖ ಆಧಾರಸ್ಥಂಬವಾಗಿದೆ. ತಮ್ಮ ಭದ್ರತೆ, ಸುರಕ್ಷತೆ ಬಗ್ಗೆ ಬಿಜೆಪಿ ಮಾತ್ರ ಭರವಸೆ ನೀಡುತ್ತದೆ ಎಂದು ಮಹಿಳೆಯರು ನಂಬಿದ್ದಾರೆ. ಮಹಿಳಾ ಮತದಾರರರು ಬಿಜೆಪಿಗೆ ಭರಪೂರ ಆಶೀರ್ವಾದ ಮಾಡಿದ್ದಾರೆ. ಮಹಿಳೆಯರಿಗೆ ನೀಡಿರುವ ಎಲ್ಲಾ ಆಶ್ವಾಸನೆಗಳನ್ನು ಪೂರೈಸುವ ಭರವಸೆಯನ್ನು ನೀಡುತ್ತೇನೆ ಎಂದರು.

ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣದಲ್ಲಿ ಅಧಿಕಾರದಲ್ಲಿದ್ದ ಪಕ್ಷವನ್ನು ಜನರು ನಿರ್ಲಕ್ಷಿಸಿದ್ದಾರೆ. ಯುವಜನರು ಕೆಲ ಸರ್ಕಾರಗಳ ಆಡಳಿತಾವಧಿಯಲ್ಲಿ ನಡೆದಿರುವ ಹಗರಣಗಳ ವಿರುದ್ಧ ಮತ ಚಲಾಯಿಸಿದ್ದಾರೆ. ಜನರು ಬಲಿಷ್ಠ ಮತ್ತು ಸುಸ್ಥಿರ ಸರ್ಕಾರಕ್ಕಾಗಿ ಮತ ಚಲಾಯಿಸುತ್ತಾರೆ ಎಂಬುದಕ್ಕೆ ಇಡೀ ಜಗತ್ತು ಇಂದು ಸಾಕ್ಷಿಯಾಗಿದೆ. ಈ ಹ್ಯಾಟ್ರಿಕ್ ಗೆಲುವು 2024ರ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವಿಗೆ ಗ್ಯಾರಂಟಿ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಇದು ಬಿಜೆಪಿಯ ಉತ್ತಮ ಆಡಳಿತದ ಪರ ಜನರಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ನಾವು ಜನತಾ ಜನಾರ್ದನನಿಗೆ ನಮಸ್ಕರಿಸುತ್ತೇವೆ. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಚುನಾವಣಾ ಫಲಿತಾಂಶಗಳು ಭಾರತದ ಜನತೆ ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ರಾಜಕೀಯದೊಂದಿಗೆ ದೃಢವಾಗಿ ನಿಂತಿದ್ದಾರೆ ಎಂಬುದನ್ನು ಸೂಚಿಸುತ್ತವೆ. ಬಿಜೆಪಿ ಅಭಿವೃದ್ಧಿಪರ ನಿಲ್ಲುವ ಪಕ್ಷ ಎಂದು ತಿಳಿಸಿದರು. ಈ ರಾಜ್ಯಗಳ ಜನತೆಯ ಬೆಂಬಲಕ್ಕಾಗಿ ನಾನು ಧನ್ಯವಾದವನ್ನು ಅರ್ಪಿಸುತ್ತೇನೆ. ಜೊತೆಗೆ ಜನತೆಯ ಯೋಗಕ್ಷೇಮಕ್ಕಾಗಿ ಅವಿರತ ಶ್ರಮಿಸುವ ಭರವಸೆ ನೀಡುತ್ತೇನೆ. ಚುನಾವಣೆಯಲ್ಲಿ ದುಡಿದ ಪಕ್ಷದ ಕಾರ್ಯಕರ್ತರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸಿದರು.

  • VIDEO | "Today's hattrick (BJP's win in three states) has given the guarantee of hattrick in 2024 (General elections)," says PM Modi while addressing party workers at BJP headquarters in Delhi after the party's victory in assembly elections. pic.twitter.com/gXeJjpTVCs

    — Press Trust of India (@PTI_News) December 3, 2023 " class="align-text-top noRightClick twitterSection" data=" ">

ತೆಲಂಗಾಣದಲ್ಲೂ ಬಿಜೆಪಿ ಒಂಬತ್ತು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ತೆಲಂಗಾಣದಲ್ಲಿ ಸರ್ಕಾರ ರಚಿಸಲು ಮುಂದಾಗಿದೆ. ತೆಲಂಗಾಣದಲ್ಲೂ ಬಿಜೆಪಿಗೆ ಬೆಂಬಲ ನೀಡಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ನನ್ನ ಪ್ರೀತಿಯ ತೆಲಂಗಾಣದ ಸಹೋದರ, ಸಹೋದರಿಯರೇ ಬಿಜೆಪಿಗೆ ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು. ಕಳೆದ ಕೆಲವು ವರ್ಷಗಳಿಂದ ಬೆಂಬಲ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುತ್ತದೆ. ತೆಲಂಗಾಣದೊಂದಿಗಿನ ನಮ್ಮ ಬಾಂಧವ್ಯ ಮುರಿಯಲಾಗದು. ನಾವು ಜನರಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ : ವಿಧಾನಸಭೆ ಚುನಾವಣೆಯಲ್ಲಿ ನಾವು ತಾತ್ಕಾಲಿಕ ಹಿನ್ನಡೆ ಅನುಭವಿಸಿದ್ದೇವೆ : ಕಾಂಗ್ರೆಸ್​ ಅಧ್ಯಕ್ಷ ಖರ್ಗೆ

Last Updated : Dec 3, 2023, 8:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.