ETV Bharat / bharat

ಅಫ್ಘಾನಿಸ್ತಾನದ ತಕ್ಷಣದ ಆದ್ಯತೆಗಳ ಮೇಲೆ ಗಮನಕೊಡಿ:  ಜೈಶಂಕರ್, ದೋವಲ್​​​ಗೆ ಪ್ರಧಾನಿ ಮೋದಿ ಸೂಚನೆ

author img

By

Published : Aug 31, 2021, 3:45 PM IST

ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಂಡಕ್ಕೆ ಅಫ್ಘಾನಿಸ್ತಾನದಲ್ಲಿ ಭಾರತದ ತಕ್ಷಣದ ಆದ್ಯತೆಗಳ ಮೇಲೆ ಕೇಂದ್ರೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ತಂಡವು ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

ಜೈಶಂಕರ್, ದೋವಲ್ ತಂಡಕ್ಕೆ ಪ್ರಧಾನಿ ಮೋದಿ ಕರೆ
ಜೈಶಂಕರ್, ದೋವಲ್ ತಂಡಕ್ಕೆ ಪ್ರಧಾನಿ ಮೋದಿ ಕರೆ

ನವದೆಹಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಂಡಕ್ಕೆ ಅಫ್ಘಾನಿಸ್ತಾನದಲ್ಲಿ ಭಾರತದ ತಕ್ಷಣದ ಆದ್ಯತೆಗಳ ಮೇಲೆ ಕೇಂದ್ರೀಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಫ್ಘಾನಿಸ್ತಾನದ ಬಿಕ್ಕಟ್ಟಿನ ಮಧ್ಯೆ ಈ ತಂಡ ಕಳೆದ ಕೆಲವು ದಿನಗಳಿಂದ ನಿಯಮಿತವಾಗಿ ಸಭೆ ನಡೆಸುತ್ತಿದೆ.

ಮೂಲಗಳ ಪ್ರಕಾರ, ಆಫ್ಘನ್​ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಹಿಂದಿರುಗಿಸುವುದು, ಆಫ್ಘನ್ ಪ್ರಜೆಗಳು, ವಿಶೇಷವಾಗಿ ಅಲ್ಪಸಂಖ್ಯಾತರು ಭಾರತಕ್ಕೆ ಪ್ರಯಾಣಿಸುವುದು ಮತ್ತು ಅಫ್ಘಾನಿಸ್ತಾನದ ಪ್ರದೇಶವನ್ನು ಭಾರತದ ವಿರುದ್ಧ ಭಯೋತ್ಪಾದನೆಗೆ ಯಾವುದೇ ರೀತಿಯಲ್ಲಿ ಬಳಸುವುದಿಲ್ಲ ಎಂದು ಭರವಸೆ ನೀಡಲಾಗಿದೆ. ಈ ತಂಡವು ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

"ಅಫ್ಘಾನಿಸ್ತಾನದಲ್ಲಿ ವಿಕಸಿಸುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, EAM, NSA ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಂಡ ಭಾರತದ ತಕ್ಷಣದ ಆದ್ಯತೆಗಳ ಮೇಲೆ ಕೇಂದ್ರೀಕರಿಸುವಂತೆ ಪ್ರಧಾನ ಮಂತ್ರಿ ಮೋದಿ ಇತ್ತೀಚೆಗೆ ನಿರ್ದೇಶಿಸಿದ್ದಾರೆ" ಎಂದು ಮೂಲಗಳು ತಿಳಿಸಿವೆ.

ಭಾರತದ ಅಧ್ಯಕ್ಷತೆಯಲ್ಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಫ್ಘಾನಿಸ್ತಾನದ ಕುರಿತು ನಿರ್ಣಯ ಅಂಗೀಕರಿಸಿದೆ. ಇದರಲ್ಲಿ ಸದಸ್ಯ ರಾಷ್ಟ್ರಗಳು ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನೆ ಎದುರಿಸುವ ಮಹತ್ವವನ್ನು ಪುನರುಚ್ಚರಿಸಿತು ಮತ್ತು ತಾಲಿಬಾನ್‌ನ ಸಂಬಂಧಿತ ಬದ್ಧತೆಗಳನ್ನು ತೀರಾ ಹತ್ತಿರದಿಂದ ಗಮನಿಸುತ್ತಿವೆ.

ತಾಲಿಬಾನ್ ಅಫ್ಘಾನಿಸ್ತಾನವನ್ನು ತೊರೆಯಲು ಬಯಸುವ ಜನರಿಗೆ ಸುರಕ್ಷಿತ ಮಾರ್ಗವನ್ನು ಒದಗಿಸಲು, ಮಾನವತಾವಾದಿಗಳಿಗೆ ದೇಶವನ್ನು ಪ್ರವೇಶಿಸಲು ಅವಕಾಶ ಮಾಡಿಕೊಡಲು ಮತ್ತು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಾನವ ಹಕ್ಕುಗಳನ್ನು ಎತ್ತಿ ಹಿಡಿಯಲು ಈ ನಿರ್ಣಯವು ಕರೆ ನೀಡಿದೆ.

ಶುಕ್ರವಾರ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಂ ಬಾಗ್ಚಿ ಅವರು ಭಾರತವು ಅಫ್ಘಾನಿಸ್ತಾನದ ಪರಿಸ್ಥಿತಿ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಇತರ ದೇಶಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದರು.

ಕಾಬೂಲ್ ಅಥವಾ ತಜಕೀಸ್ತಾನದ ರಾಜಧಾನಿ ದುಶಾನ್‌ಬೆಯಿಂದ ಭಾರತವು 650ಕ್ಕೂ ಹೆಚ್ಚು ಜನರನ್ನು ವಿಮಾನಗಳಲ್ಲಿ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿವೆ. ಅದರಲ್ಲಿ 260 ಕ್ಕೂ ಹೆಚ್ಚು ಭಾರತೀಯರಿದ್ದಾರೆ.

ಓದಿ: ಐಸಿಸ್​ - ಕೆಯಲ್ಲೂ ಇದ್ದಾರೆ ಭಾರತೀಯರು: ಕಮಾಂಡರ್​ ಹೇಳಿಕೆಯಿಂದ ಬಹಿರಂಗವಾದ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.