ನವಹೆಹಲಿ: ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ಮೋದಿ ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಬೆಳಗ್ಗೆ 10.14ಕ್ಕೆ ಪ್ರಮಾಣವಚನ ಸ್ವೀಕರಿಸಿದ್ದರು. ಈ ಮೂಲಕ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ಇದನ್ನೂ ಓದಿ: ಭಾರತದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು