ETV Bharat / bharat

ನವೀನ್ ಪಾರ್ಥಿವ ಶರೀರ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಿ: ಅಧಿಕಾರಿಗಳಿಗೆ ಮೋದಿ ಸೂಚನೆ - ಭದ್ರತಾ ಸನ್ನದ್ಧತೆ ಮತ್ತು ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶದ ಬಗ್ಗೆ ಮೋದಿ ಚರ್ಚೆ

ಉಕ್ರೇನ್ - ರಷ್ಯಾ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಭದ್ರತಾ ಸನ್ನದ್ಧತೆ ಮತ್ತು ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಉಕ್ರೇನ್​ನಿಂದ ವಿದ್ಯಾರ್ಥಿ ನವೀನ್​ ಪಾರ್ಥಿವ ಶರೀರ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನವೀನ್ ಪಾರ್ಥಿವ ಶರೀರ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಬೇಕು ಎಂದ ಮೋದಿ

author img

By

Published : Mar 13, 2022, 4:28 PM IST

ನವದೆಹಲಿ: ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಬೆನ್ನಲ್ಲೇ ಭಾರತದ ಭದ್ರತಾ ಸನ್ನದ್ಧತೆ ಮತ್ತು ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆಯ ಸಂಪುಟ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಅಧಿಕೃತ ಹೇಳಿಕೆಯ ಪ್ರಕಾರ, ಗಡಿ ಪ್ರದೇಶಗಳಲ್ಲಿ ಹಾಗೂ ಕಡಲ ಮತ್ತು ವಾಯು ಡೊಮೇನ್‌ನಲ್ಲಿ ಭಾರತದ ಭದ್ರತಾ ಸನ್ನದ್ಧತೆಯ ಇತ್ತೀಚಿನ ಬೆಳವಣಿಗೆಗಳು ಮತ್ತು ವಿವಿಧ ಅಂಶಗಳನ್ನು ಪ್ರಧಾನಿ ಮೋದಿ ಅವರಿಗೆ ವಿವರಿಸಲಾಗಿದೆ.

ಉಕ್ರೇನ್‌ನಿಂದ ಭಾರತದ ನೆರೆಯ ರಾಷ್ಟ್ರಗಳ ಕೆಲವು ನಾಗರಿಕರೊಂದಿಗೆ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಆಪರೇಷನ್ ಗಂಗಾದ ವಿವರಗಳನ್ನು ಒಳಗೊಂಡಂತೆ ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಅವರಿಗೆ ತಿಳಿಸಲಾಗಿದೆ.

ಕರ್ನಾಟಕದ ವಿದ್ಯಾರ್ಥಿ ಬಗ್ಗೆಯೂ ಚರ್ಚೆ: ಖಾರ್ಕಿವ್‌ನಲ್ಲಿ ನಿಧನರಾದ ನವೀನ್ ಶೇಖರಪ್ಪ ಅವರ ಪಾರ್ಥಿವ ಶರೀರವನ್ನು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ. ಉಕ್ರೇನ್‌ನಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿ ಕನ್ನಡಿಗ ನವೀನ್​ ಶೆಲ್ ದಾಳಿಯಿಂದ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ : ಮೋರಿಗೆ ಕಾರು ಡಿಕ್ಕಿಯಾಗಿ ಐವರ ದುರ್ಮರಣ!

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಭೆಯಲ್ಲಿ ಭಾಗವಹಿಸಿದ್ದರು. ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.