ನವದೆಹಲಿ: ಪಂಜಾಬ್ನಲ್ಲಿ ಇಂದಿನಿಂದ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಶ್ರೀ ಭಗವಂತ್ ಮಾನ್ ಜೀ ನಿಮಗೆ ಅಭಿನಂದನೆಗಳು. ಪಂಜಾಬ್ ರಾಜ್ಯದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ.
-
Congratulations to Shri @BhagwantMann Ji on taking oath as Punjab CM. Will work together for the growth of Punjab and welfare of the state’s people.
— Narendra Modi (@narendramodi) March 16, 2022 " class="align-text-top noRightClick twitterSection" data="
">Congratulations to Shri @BhagwantMann Ji on taking oath as Punjab CM. Will work together for the growth of Punjab and welfare of the state’s people.
— Narendra Modi (@narendramodi) March 16, 2022Congratulations to Shri @BhagwantMann Ji on taking oath as Punjab CM. Will work together for the growth of Punjab and welfare of the state’s people.
— Narendra Modi (@narendramodi) March 16, 2022
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ಪ್ರಮಾಣ ವಚನದ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು. ಆಪ್ ಪಕ್ಷದ ನಾಯಕ ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದು, ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದರು.
ಇದನ್ನೂ ಓದಿ: ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಆಪ್ನ ಭಗವಂತ್ ಮಾನ್
ಕಳೆದ ಕೆಲ ದಿನಗಳ ಹಿಂದೆ ನಡೆದ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬರೋಬ್ಬರಿ 92 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್ ಕೇವಲ 18 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಕಳೆದುಕೊಂಡಿದೆ.