ನವದೆಹಲಿ: 3ನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕರಿಸುತ್ತಿರುವ ಮಮತಾ ಬ್ಯಾನರ್ಜಿಗೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ ಪಶ್ಚಿಮ ಬಂಗಾಳದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಮಮತಾ ದೀದಿಗೆ ಅಭಿನಂದನೆಗಳು ಎಂದಿದ್ದಾರೆ. ಇದಕ್ಕೂ ಮೊದಲು ರಾಜ್ಯಪಾಲ ಜಗದೀಪ್ ಧನ್ಕರ್ ಮಮತಾ ಬ್ಯಾನರ್ಜಿಗೆ ಪ್ರಮಾಣ ವಚನ ಬೋಧಿಸಿದ್ದರು.
-
Congratulations to Mamata Didi on taking oath as West Bengal’s Chief Minister. @MamataOfficial
— Narendra Modi (@narendramodi) May 5, 2021 " class="align-text-top noRightClick twitterSection" data="
">Congratulations to Mamata Didi on taking oath as West Bengal’s Chief Minister. @MamataOfficial
— Narendra Modi (@narendramodi) May 5, 2021Congratulations to Mamata Didi on taking oath as West Bengal’s Chief Minister. @MamataOfficial
— Narendra Modi (@narendramodi) May 5, 2021
ಪ್ರಮಾಣ ವಚನ ಬೋಧಿಸಿದ ಬಳಿಕ ಮಾತನಾಡಿದ ರಾಜ್ಯಪಾಲ ಜಗದೀಪ್ ಧನ್ಕರ್, ಮಮತಾ ಜಿ ಅವರ 3ನೇ ಅವಧಿಯ ಆಡಳಿತಕ್ಕೆ ನಾನು ಅಭಿನಂದಿಸುತ್ತೇನೆ. ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡುತ್ತಿರುವ ಈ ಗಲಭೆಯನ್ನ ಕೊನೆಗೊಳಿಸುವುದು ನಮ್ಮ ಆದ್ಯತೆಯಾಗಿದೆ. ಕಾನೂನು ನಿಯಮಾವಳಿ ಪುನಃಸ್ಥಾಪಿಸುವಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ ಇದೆ ಎಂದಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿಯನ್ನು ಮಣಿಸಿ ಟಿಎಂಸಿ 213 ಸ್ಥಾನಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿತ್ತು. ಈ ಮೂಲಕ ಟಿಎಂಸಿ ಮತ್ತೆ ಆಡಳಿತ ಚುಕ್ಕಾಣಿ ಹಿಡಿದಿದೆ. ಇದರ ಜೊತೆಗೆ ಮಮತಾ ಬ್ಯಾನರ್ಜಿ ಕೂಡ ಸತತ ಮೂರನೇ ಬಾರಿಗೆ ಸಿಎಂ ಗಾದಿಗೇರಿದ್ದಾರೆ.
ಇದನ್ನೂ ಓದಿ: 3ನೇ ಬಾರಿಗೆ ಸಿಎಂ ಆಗಿ ಮಮತಾ ಪ್ರಮಾಣ; ದೀದಿ ಈಗ ದೇಶದ ಏಕೈಕ ಮಹಿಳಾ ಸಿಎಂ