ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನಗಳ(ಜೂನ್ 21 ರಿಂದ 24 ರವರೆಗೆ) ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಇದು ಅವರ ಐತಿಹಾಸಿಕ ಪ್ರವಾಸವಾಗಲಿದ್ದು, ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ.
- ಮೋದಿ ಅವರಿಗೆ ಅಮೆರಿಕ ಸರ್ಕಾರವೇ ಈ ಸಲ ಭೇೆಟಿಗೆ ಆಹ್ವಾನ ನೀಡಿದೆ.
- ಅಮೆರಿಕ ಆಹ್ವಾನಿತರಾಗಿ ಅಲ್ಲಿಗೆ ಭೇಟಿ ನೀಡುತ್ತಿರುವ ಭಾರತದ 2ನೇ ಪ್ರಧಾನಿ ಎಂಬ ಹೆಗ್ಗಳಿಕೆ ಮೋದಿ ಪಾತ್ರರಾಗಲಿದ್ದಾರೆ.
- ಜತೆಗೆ ಜೋ ಬೈಡನ್ ಅವರ ಆಹ್ವಾನದ ಮೇರೆಗೆ ಅಮೆರಿಕಕ್ಕೆ ಭೇೆಟಿ ನೀಡುತ್ತಿರುವ ವಿಶ್ವದ 3ನೇ ನಾಯಕ ಎನಿಸಿಕೊಳ್ಳಲಿದ್ದಾರೆ.
-
Prime Minister @narendramodi emplanes for the USA visit. He will be attending programmes in New York City and Washington DC. pic.twitter.com/gleEHiw0AC
— PMO India (@PMOIndia) June 20, 2023 " class="align-text-top noRightClick twitterSection" data="
">Prime Minister @narendramodi emplanes for the USA visit. He will be attending programmes in New York City and Washington DC. pic.twitter.com/gleEHiw0AC
— PMO India (@PMOIndia) June 20, 2023Prime Minister @narendramodi emplanes for the USA visit. He will be attending programmes in New York City and Washington DC. pic.twitter.com/gleEHiw0AC
— PMO India (@PMOIndia) June 20, 2023
-
ದೆಹಲಿಯಿಂದ ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿರ್ಗಮನ ಸಂದೇಶದಲ್ಲಿ, ತಮ್ಮ ಭೇಟಿಯು ಅಮೆರಿಕ ಜೊತೆಗಿನ ಬಾಂಧವ್ಯವನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿ ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ ಒಳಗೊಂಡಿರಲಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಪ್ರಧಾನಿ ಮಾತುಕತೆ ನಡೆಸಲಿದ್ದಾರೆ. ಅಮೆರಿಕ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಉದ್ಯಮಿಗಳನ್ನು, ಅನಿವಾಸಿ ಭಾರತೀಯರನ್ನು ಮೋದಿ ಭೇಟಿಯಾಗಲಿದ್ದಾರೆ. ವ್ಯಾಪಾರ, ವಾಣಿಜ್ಯ, ತಂತ್ರಜ್ಞಾನ, ನಾವೀನ್ಯತೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಬಲವರ್ಧನೆಯಾಗಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
-
Leaving for USA, where I will attend programmes in New York City and Washington DC. These programmes include Yoga Day celebrations at the @UN HQ, talks with @POTUS @JoeBiden, address to the Joint Session of the US Congress and more. https://t.co/gRlFeZKNXR
— Narendra Modi (@narendramodi) June 20, 2023 " class="align-text-top noRightClick twitterSection" data="
">Leaving for USA, where I will attend programmes in New York City and Washington DC. These programmes include Yoga Day celebrations at the @UN HQ, talks with @POTUS @JoeBiden, address to the Joint Session of the US Congress and more. https://t.co/gRlFeZKNXR
— Narendra Modi (@narendramodi) June 20, 2023Leaving for USA, where I will attend programmes in New York City and Washington DC. These programmes include Yoga Day celebrations at the @UN HQ, talks with @POTUS @JoeBiden, address to the Joint Session of the US Congress and more. https://t.co/gRlFeZKNXR
— Narendra Modi (@narendramodi) June 20, 2023
ಮೋದಿ ಕಾರ್ಯಕ್ರಮದ ವಿವರ: ಪ್ರಧಾನಿ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಅಮೆರಿಕದ ಪ್ರಥಮ ಮಹಿಳೆ ಜಿಲ್ಲ್ ಬೈಡನ್ ಆಹ್ವಾನ ನೀಡಿದ್ದರು. ಅಮೆರಿಕ ಪ್ರವಾಸದ ಮೊದಲ ಭಾಗವಾಗಿ ನಾಳೆ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆ ಕೇಂದ್ರ ಕಚೇರಿಯಿರುವ ನ್ಯೂಯಾರ್ಕ್ ನಗರದಲ್ಲಿ ಮೊದಲ ಕಾರ್ಯಕ್ರಮದಲ್ಲಿ ಪ್ರಧಾನಿಗಳು ಪಾಲ್ಗೊಳ್ಳಲಿದ್ದಾರೆ.
ನಂತರ ಪ್ರಧಾನ ಮಂತ್ರಿ ವಾಷಿಂಗ್ಟನ್ ಡಿಸಿಗೆ ತೆರಳಲಿದ್ದಾರೆ. ಅಲ್ಲಿ ಜೂನ್ 22ರಂದು ಶ್ವೇತಭವನದಲ್ಲಿ ಪ್ರಧಾನಿಯವರಿಗೆ ಸಾಂಪ್ರದಾಯಿಕ ಸ್ವಾಗತ ದೊರಕಲಿದೆ. ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡಿ ಉನ್ನತ ಮಟ್ಟದ ಮಾತುಕತೆ ನಡೆಸಲಿದ್ದಾರೆ. ಅಮೆರಿಕ ಅಧ್ಯಕ್ಷರು ಪ್ರಧಾನಿ ಮೋದಿಯವರಿಗೆ ಔತಣ ಕೂಟ ಏರ್ಪಡಿಸಿದ್ದಾರೆ. ಜೂನ್ 22ರಂದು ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
-
#WATCH | Prime Minister Narendra Modi leaves from Delhi for his first official State visit to the United States.
— ANI (@ANI) June 20, 2023 " class="align-text-top noRightClick twitterSection" data="
He will attend Yoga Day celebrations at the UN HQ in New York and hold talks with US President Joe Biden & address to the Joint Session of the US Congress in… pic.twitter.com/y6avSoPpkd
">#WATCH | Prime Minister Narendra Modi leaves from Delhi for his first official State visit to the United States.
— ANI (@ANI) June 20, 2023
He will attend Yoga Day celebrations at the UN HQ in New York and hold talks with US President Joe Biden & address to the Joint Session of the US Congress in… pic.twitter.com/y6avSoPpkd#WATCH | Prime Minister Narendra Modi leaves from Delhi for his first official State visit to the United States.
— ANI (@ANI) June 20, 2023
He will attend Yoga Day celebrations at the UN HQ in New York and hold talks with US President Joe Biden & address to the Joint Session of the US Congress in… pic.twitter.com/y6avSoPpkd
ಐತಿಹಾಸಿಕ ಭಾಷಣ ಮಾಡಲಿರುವ ಪಿಎಂ: ಅಮೆರಿಕ ಸಂಸತ್ತಿನ ಉಭಯ ಸದನಗಳಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ ಮತ್ತು ಸೆನೆಟ್ನ ಸದಸ್ಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ ಮಾಡಲಿದ್ದಾರೆ. ಅಮೆರಿಕ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಎರಡು ಬಾರಿ ಮಾತನಾಡುವ ಮೊಟ್ಟ ಮೊದಲ ಭಾರತದ ಪ್ರಧಾನಿ ಎಂಬ ಹೆಗ್ಗಳಿಕೆ ನರೇಂದ್ರ ಮೋದಿ ಪಾತ್ರರಾಗಲಿದ್ದಾರೆ.
ಏಳು ವರ್ಷಗಳ ಹಿಂದೆ ಇದೇ ರೀತಿ ಅಮೆರಿಕ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಅವರು ಭಾಷಣ ಮಾಡಿದ್ದರು. ಇದು ಉಭಯ ದೇಶಗಳ ನಡುವಿನ ಸಂಬಂಧ ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ. ಅಮೆರಿಕ ಭೇಟಿಯ ನಂತರ ಮೋದಿಯವರು ಜೂನ್ 24 ಮತ್ತು 25ರಂದು ಈಜಿಪ್ಟ್ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರಧಾನಿಯವರ ನಿರ್ಗಮನ ಹೇಳಿಕೆಯ ಪೂರ್ಣ ಪ್ರತಿ ಇಲ್ಲಿದೆ:
- ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಡಾ. ಜಿಲ್ ಬೈಡನ್ ಅವರ ಆಹ್ವಾನದ ಮೇರೆಗೆ ನಾನು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಕ್ಕೆ ರಾಜ್ಯ ಭೇಟಿಗೆ ಪ್ರಯಾಣಿಸುತ್ತಿದ್ದೇನೆ. ಈ ವಿಶೇಷ ಆಹ್ವಾನವು ನಮ್ಮ ಪ್ರಜಾಪ್ರಭುತ್ವಗಳ ನಡುವಿನ ಪಾಲುದಾರಿಕೆ ಮತ್ತು ಚೈತನ್ಯದ ಪ್ರತಿಬಿಂಬವಾಗಿದೆ.
- ನಾನು ನ್ಯೂಯಾರ್ಕ್‌ನಲ್ಲಿ ನನ್ನ ಭೇಟಿಯನ್ನು ಪ್ರಾರಂಭಿಸುತ್ತೇನೆ. ಜೂನ್ 21 ರಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಯುನ್ ನಾಯಕತ್ವ ಮತ್ತು ಅಂತರರಾಷ್ಟ್ರೀಯ ಸಮುದಾಯದ ಸದಸ್ಯರೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತೇನೆ. ಡಿಸೆಂಬರ್ 2014 ರಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಗುರುತಿಸುವ ಭಾರತದ ಪ್ರಸ್ತಾಪವನ್ನು ಬೆಂಬಲಿಸಿದ ಸ್ಥಳದಲ್ಲಿಯೇ ನಾನು ಈ ವಿಶೇಷ ಆಚರಣೆಯನ್ನು ಎದುರು ನೋಡುತ್ತಿದ್ದೇನೆ.
- ಬಳಿಕ ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸುತ್ತೇನೆ.
- ಭಾರತ-ಯುಎಸ್ ಬಾಂಧವ್ಯಗಳು ಬಹುಮುಖಿಯಾಗಿದ್ದು, ವಲಯಗಳಾದ್ಯಂತ ಗಾಢವಾದ ಸಂಬಂಧ ಹೊಂದಿವೆ. ಯುಎಸ್ಎ ಸರಕು ಮತ್ತು ಸೇವೆಗಳಲ್ಲಿ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ. ನಾವು ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಆರೋಗ್ಯ, ರಕ್ಷಣೆ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ನಿಕಟವಾಗಿ ಸಹಕರಿಸುತ್ತೇವೆ. ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಉಪಕ್ರಮವು ರಕ್ಷಣಾ ಕೈಗಾರಿಕಾ ಸಹಕಾರ, ಬಾಹ್ಯಾಕಾಶ, ಟೆಲಿಕಾಂ, ಕ್ವಾಂಟಮ್, ಕೃತಕ ಬುದ್ಧಿಮತ್ತೆ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಿಗೆ ಹೊಸ ಆಯಾಮಗಳನ್ನು ನೀಡಿದೆ.
- ಅಧ್ಯಕ್ಷ ಬೈಡನ್ ಮತ್ತು ಇತರ ಹಿರಿಯ ಯುಎಸ್ ನಾಯಕರೊಂದಿಗಿನ ನನ್ನ ಚರ್ಚೆಗಳು ನಮ್ಮ ದ್ವಿಪಕ್ಷೀಯ ಸಹಕಾರವನ್ನು ಮತ್ತು G20, Quad ಮತ್ತು IPEF ನಂತಹ ಬಹುಪಕ್ಷೀಯ ವೇದಿಕೆಗಳಲ್ಲಿ ಕ್ರೋಢೀಕರಿಸಲು ಅವಕಾಶವನ್ನು ಒದಗಿಸುತ್ತದೆ.
- ಅಧ್ಯಕ್ಷ ಬೈಡನ್ ಮತ್ತು ಪ್ರಥಮ ಮಹಿಳೆ ಡಾ. ಜಿಲ್ ಬೈಡನ್ ಅವರೊಂದಿಗೆ ರಾಜ್ಯ ಔತಣಕೂಟಕ್ಕೆ ಹಲವಾರು ಗಣ್ಯರೊಂದಿಗೆ ಸೇರಲು ನಾನು ಸಂತೋಷಪಡುತ್ತೇನೆ.
- ಭಾರತ-ಯುಎಸ್ ಬಾಂಧವ್ಯಕ್ಕೆ ಯುಎಸ್ ಕಾಂಗ್ರೆಸ್ ಯಾವಾಗಲೂ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ನೀಡಿದೆ. ನನ್ನ ಭೇಟಿಯ ಸಮಯದಲ್ಲಿ, ಕಾಂಗ್ರೆಷನಲ್ ನಾಯಕತ್ವದ ಆಹ್ವಾನದ ಮೇರೆಗೆ ನಾನು ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತೇನೆ.
- ನಮ್ಮ ದೇಶಗಳ ನಡುವೆ ನಂಬಿಕೆಯನ್ನು ಬೆಳೆಸುವಲ್ಲಿ ಜನರ ಸಂಪರ್ಕ ಪ್ರಮುಖವಾಗಿವೆ. ನಮ್ಮ ಅತ್ಯುತ್ತಮ ಸಮಾಜಗಳನ್ನು ಪ್ರತಿನಿಧಿಸುವ ರೋಮಾಂಚಕ ಭಾರತೀಯ-ಅಮೆರಿಕನ್ ಸಮುದಾಯವನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ.
- ನಮ್ಮ ವ್ಯಾಪಾರ ಮತ್ತು ಹೂಡಿಕೆ ಸಂಬಂಧವನ್ನು ಉನ್ನತೀಕರಿಸಲು ಮತ್ತು ಚೇತರಿಸಿಕೊಳ್ಳುವ ಜಾಗತಿಕ ಪೂರೈಕೆ ಸರಪಳಿಗಳನ್ನು ನಿರ್ಮಿಸಲು ಅವಕಾಶಗಳನ್ನು ಚರ್ಚಿಸಲು ನಾನು ಕೆಲವು ಪ್ರಮುಖ ಸಿಇಒಗಳನ್ನು ಭೇಟಿ ಮಾಡುತ್ತೇನೆ.
- ನನ್ನ ಅಮೆರಿಕ ಭೇಟಿಯು ಪ್ರಜಾಪ್ರಭುತ್ವ, ವೈವಿಧ್ಯತೆ ಮತ್ತು ಸ್ವಾತಂತ್ರ್ಯದ ಹಂಚಿಕೆಯ ಮೌಲ್ಯಗಳ ಆಧಾರದ ಮೇಲೆ ನಮ್ಮ ಸಂಬಂಧಗಳನ್ನು ಬಲಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ನಾವು ಒಟ್ಟಾಗಿ ನಿಲ್ಲುತ್ತೇವೆ.
- ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ನಾನು ವಾಷಿಂಗ್ಟನ್ ಡಿಸಿಯಿಂದ ಕೈರೋಗೆ ಪ್ರಯಾಣಿಸುತ್ತೇನೆ. ನಾನು ಮೊದಲ ಬಾರಿಗೆ ನಿಕಟ ಮತ್ತು ಸ್ನೇಹಪರ ದೇಶಕ್ಕೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ.
ಜೂನ್ 24 ರಂದು ಈಜಿಪ್ಟ್ ಪ್ರವಾಸ ಪ್ರಧಾನಿ ನರೇಂದ್ರ ಮೋದಿ ಎರಡು ರಾಷ್ಟ್ರಗಳ ವಿದೇಶ ಪ್ರವಾಸ ಸಂದರ್ಭದಲ್ಲಿ ಅಮೆರಿಕ ನಂತರ ಈಜಿಪ್ಟ್ಗೆ ಭೇಟಿ ನೀಡಲಿದ್ದಾರೆ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಮೋದಿ ಇದೇ ಮೊದಲ ಬಾರಿಗೆ ಈಜಿಪ್ಟ್ಗೆ ಭೇಟಿ ನೀಡುತ್ತಿದ್ದಾರೆ.
ಜೂನ್ 24 ರಿಂದ 25ಕ್ಕೆ ಪ್ರಧಾನಿ ಮೋದಿ ಕೈರೋಗೆ ಪ್ರಯಾಣಿಸಲಿದ್ದಾರೆ. ಜನವರಿಯಲ್ಲಿ ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಫತ್ತಾಹ್ ಎಲ್ – ಸಿಸಿ ತಮ್ಮ ದೇಶಕ್ಕೆ ಆಗಮಿಸುವಂತೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದರು. ಅಧ್ಯಕ್ಷ ಸಿಸಿ ಅವರೊಂದಿಗಿನ ಮಾತುಕತೆ ಹೊರತಾಗಿ ಈಜಿಪ್ಟ್ ಸರ್ಕಾರದ ಹಿರಿಯ ಗಣ್ಯರು, ಕೆಲವು ಪ್ರಮುಖ ವ್ಯಕ್ತಿಗಳು ಮತ್ತು ಈಜಿಪ್ಟ್‌ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಪ್ರಧಾನಿ ಮೋದಿ ಸಂವಹನ ನಡೆಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ನಮ್ಮ ನಾಗರಿಕತೆಯ ಮತ್ತು ಬಹುಮುಖಿ ಪಾಲುದಾರಿಕೆಗೆ ಮತ್ತಷ್ಟು ವೇಗವನ್ನು ನೀಡಲು ಅಧ್ಯಕ್ಷ ಸಿಸಿ ಮತ್ತು ಈಜಿಪ್ಟ್ ಸರ್ಕಾರದ ಹಿರಿಯ ಸದಸ್ಯರೊಂದಿಗೆ ನನ್ನ ಚರ್ಚೆಗಳನ್ನು ನಾನು ಎದುರು ನೋಡುತ್ತಿದ್ದೇನೆ. ಈಜಿಪ್ಟ್‌ನಲ್ಲಿರುವ ರೋಮಾಂಚಕ ಭಾರತೀಯ ವಲಸಿಗರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶವಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಇದನ್ನೂ ಓದಿ: Modi US visit: ಇಂದಿನಿಂದ ಪ್ರಧಾನಿ ಮೋದಿ ಅಮೆರಿಕ, ಈಜಿಪ್ಟ್ ಪ್ರವಾಸ: ಕಾರ್ಯಕ್ರಮಗಳು ಹೀಗಿವೆ..