ನವದೆಹಲಿ: ರಾಷ್ಟ್ರ ರಾಮನವಮಿ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶದ ಪ್ರಜೆಗಳಿಗೆ ರಾಮ ನವಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ದೇಶದ ಜನತೆಗೆ ರಾಮನವಮಿಯ ಶುಭಾಶಯಗಳು. ಭಗವಂತ ಶ್ರೀರಾಮನ ಕೃಪೆಯಿಂದ ಪ್ರತಿಯೊಬ್ಬರೂ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಪಡೆಯಲಿ. ಜೈ ಶ್ರೀರಾಮ್ ಎಂದು ಶುಭಾಶಯ ಕೋರಿದ್ದಾರೆ.
ರಾಮನವಮಿ ಹಬ್ಬದ ದಿನದಂದೇ ಅಂದರೆ ಇಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ಅವರು ಗುಜರಾತ್‌ನ ಜುನಾಗಢ್‌ನ ಗಥಿಲಾದಲ್ಲಿರುವ ಉಮಿಯಾ ಮಾತಾ ದೇವಾಲಯದ 14ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಡೆಯುವ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಾಲ್ಗೊಂಡು ಮಾತನಾಡಲಿದ್ದಾರೆ. ಪ್ರಧಾನಿ ಮೋದಿ 2008ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ದೇವಾಲಯವನ್ನು ಉದ್ಘಾಟಿಸಿದ್ದರು.
-
देशवासियों को रामनवमी की ढेरों शुभकामनाएं। भगवान श्रीराम की कृपा से हर किसी को जीवन में सुख, शांति और समृद्धि प्राप्त हो। जय श्रीराम!
— Narendra Modi (@narendramodi) April 10, 2022 " class="align-text-top noRightClick twitterSection" data="
">देशवासियों को रामनवमी की ढेरों शुभकामनाएं। भगवान श्रीराम की कृपा से हर किसी को जीवन में सुख, शांति और समृद्धि प्राप्त हो। जय श्रीराम!
— Narendra Modi (@narendramodi) April 10, 2022देशवासियों को रामनवमी की ढेरों शुभकामनाएं। भगवान श्रीराम की कृपा से हर किसी को जीवन में सुख, शांति और समृद्धि प्राप्त हो। जय श्रीराम!
— Narendra Modi (@narendramodi) April 10, 2022
2008ರಲ್ಲಿ ಮೋದಿಯವರು ನೀಡಿದ ಸಲಹೆಗಳ ಆಧಾರದ ಮೇಲೆ, ದೇವಸ್ಥಾನದ ಟ್ರಸ್ಟ್ ತನ್ನ ವ್ಯಾಪ್ತಿಯಲ್ಲಿ ವಿವಿಧ ಸಾಮಾಜಿಕ ಮತ್ತು ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗಳನ್ನು ಕೈಗೊಂಡಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೋಗಿಗಳಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮತ್ತು ಆಯುರ್ವೇದ ಔಷಧಿಗಳನ್ನು ಪೂರೈಸುವ ಕೆಲಸವನ್ನು ಮಾಡುತ್ತದೆ. ಉಮಿಯಾ ದೇವಿಯನ್ನು ಕಡವ ಪಾಟಿದಾರ ಸಮಯದಾಯ ಕುಲದೇವತೆ ಎಂದು ಪರಿಗಣಿಸಲಾಗುತ್ತದೆ.
ಇದನ್ನೂ ಓದಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಟ್ವಿಟರ್ ಖಾತೆ ಹ್ಯಾಕ್