ETV Bharat / bharat

'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲಿನಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ - ವಂದೇ ಭಾರತ್ ರೈಲು

ಪ್ರಧಾನಿ ಮೋದಿ ಅವರು ಗಾಂಧಿನಗರದಿಂದ ಅಹಮದಾಬಾದ್‌ಗೆ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲಿನಲ್ಲಿ ಪ್ರಯಾಣಿಸಿದರು.

PM Narendra Modi travels onboard Vande Bharat Express
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿ ಪ್ರಧಾನಿ ಮೋದಿ
author img

By

Published : Sep 30, 2022, 12:00 PM IST

ಗಾಂಧಿನಗರ (ಗುಜರಾತ್): ಗಾಂಧಿನಗರ-ಮುಂಬೈ ಸೆಂಟ್ರಲ್ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಚಾಲನೆ ನೀಡಿದರು. ಬಳಿಕ ರೈಲ್ವೆ ಸಿಬ್ಬಂದಿ, ಮಹಿಳಾ ಉದ್ಯಮಿಗಳು ಮತ್ತು ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರದಿಂದ ಅಹಮದಾಬಾದ್‌ಗೆ ರೈಲಿನಲ್ಲಿ ಪ್ರಯಾಣಿಸಿದರು ಎಂದು ಪಿಎಂಒ ಹೇಳಿದೆ.

  • PM @narendramodi is on board the Vande Bharat Express from Gandhinagar to Ahmedabad. People from different walks of life, including those from the Railways family, women entrepreneurs and youngsters are his co-passengers on this journey. pic.twitter.com/DzwMq5NSXr

    — PMO India (@PMOIndia) September 30, 2022 " class="align-text-top noRightClick twitterSection" data=" ">

ಇದು ದೇಶದ ಮೂರನೇ ವಂದೇ ಭಾರತ್ ರೈಲು. ಈ ರೈಲು ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸಲಿದ್ದು, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳ ರಾಜಧಾನಿಗಳನ್ನು ಸಂಪರ್ಕಿಸುತ್ತದೆ. ಭಾನುವಾರ ಹೊರತುಪಡಿಸಿ ವಾರದಲ್ಲಿ 6 ದಿನ ರೈಲು ಸಂಚರಿಸಲಿದೆ.

ಸಂಚಾರ ಸಮಯ: ವಂದೇ ಭಾರತ್ ರೈಲು 20901, ಮುಂಬೈ ಸೆಂಟ್ರಲ್‌ನಿಂದ ಬೆಳಗ್ಗೆ 6.10 ಕ್ಕೆ ಹೊರಟು ಮಧ್ಯಾಹ್ನ 12.30 ಕ್ಕೆ ಗಾಂಧಿನಗರ ತಲುಪಲಿದೆ. ಮುಂಬೈಗೆ ಹಿಂತಿರುಗುವ ರೈಲು- 20902 ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ಮಧ್ಯಾಹ್ನ 2.05 ಕ್ಕೆ ಹೊರಟು ರಾತ್ರಿ 8.35 ಕ್ಕೆ ಮುಂಬೈ ಸೆಂಟ್ರಲ್ ತಲುಪಲಿದೆ. 16 ಕೋಚ್‌ಗಳನ್ನು ಹೊಂದಿರುವ ಈ ರೈಲು 1,128 ಪ್ರಯಾಣಿಕರ ಆಸನ ಸಾಮರ್ಥ್ಯವನ್ನು ಹೊಂದಿದೆ ಮತ್ತು ಗಾಂಧಿನಗರ ರಾಜಧಾನಿ ನಿಲ್ದಾಣವನ್ನು ತಲುಪುವ ಮೊದಲು ಸೂರತ್, ವಡೋದರಾ ಮತ್ತು ಅಹಮದಾಬಾದ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ: ಹೊಸ ವಂದೇ ಭಾರತ್ ರೈಲುಗಳು ಒರಗುವ ಆಸನಗಳು, ಸ್ವಯಂಚಾಲಿತ ಅಗ್ನಿ ಸಂವೇದಕಗಳು, ಸಿಸಿಟಿವಿ ಕ್ಯಾಮರಾಗಳು, ವೈಫೈ ಸೌಲಭ್ಯದೊಂದಿಗೆ, ಮೂರು ಗಂಟೆಗಳ ಬ್ಯಾಟರಿ ಬ್ಯಾಕಪ್ ಮತ್ತು ಜಿಪಿಎಸ್ ವ್ಯವಸ್ಥೆಗಳು ಸೇರಿದಂತೆ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದ್ದು, ಪ್ರಯಾಣವನ್ನು ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕವಾಗಿಸುತ್ತದೆ. ಚೆನ್ನೈನಲ್ಲಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF) ಆಗಸ್ಟ್ 2023 ರ ವೇಳೆಗೆ 75 ವಂದೇ ಭಾರತ್ ರೈಲುಗಳನ್ನು ತಯಾರಿಸುವ ಗುರಿ ಹೊಂದಿದೆ.

ರೈಲುಗಳು ಗಾಳಿಯ ಶುದ್ಧೀಕರಣಕ್ಕಾಗಿ ರೂಫ್-ಮೌಂಟೆಡ್ ಪ್ಯಾಕೇಜ್ ಘಟಕದಲ್ಲಿ (RMPU) ಫೋಟೋಕ್ಯಾಟಲಿಟಿಕ್ ನೇರಳಾತೀತ ಗಾಳಿ ಶುದ್ಧೀಕರಣ ವ್ಯವಸ್ಥೆಯನ್ನೂ ಸಹ ಹೊಂದಿದೆ. ಚಂಡೀಗಢದ ಸೆಂಟ್ರಲ್ ಸೈಂಟಿಫಿಕ್ ಇನ್‌ಸ್ಟ್ರುಮೆಂಟ್ಸ್ ಆರ್ಗನೈಸೇಶನ್ (CSIO), ಶಿಫಾರಸು ಮಾಡಲ್ಪಟ್ಟಂತೆ, ತಾಜಾ ಗಾಳಿ ಮತ್ತು ಹಿಂತಿರುಗುವ ಗಾಳಿಯ ಮೂಲಕ ಬರುವ ಸೂಕ್ಷ್ಮಜೀವಿಗಳು, ಬ್ಯಾಕ್ಟೀರಿಯಾಗಳು, ವೈರಸ್‌ಗಳು ಇತ್ಯಾದಿಗಳಿಂದ ಗಾಳಿಯನ್ನು ಫಿಲ್ಟರ್ ಮಾಡಲು ಮತ್ತು ಸ್ವಚ್ಛಗೊಳಿಸಲು ವ್ಯವಸ್ಥೆ ವಿನ್ಯಾಸಗೊಳಿಸಲಾಗಿದೆ

ಹಳೆಯ ರೈಲುಗಳಿಗಿಂತ ಹಗುರ: ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎರಡು ರೈಲುಗಳಿಗೆ ಹೋಲಿಸಿದರೆ ಹೊಸ ರೈಲುಗಳಲ್ಲಿ ಪ್ರಯಾಣಿಸುವುದು ಹೆಚ್ಚು ಆರಾಮದಾಯಕವಾಗಿದೆ. ಹೊಸ ರೈಲುಗಳ ಬೋಗಿಗಳು ಹಳೆಯ ರೈಲುಗಳಿಗಿಂತ ಹಗುರವಾಗಿರುವುದು ಕಾರಣ. ಕಡಿಮೆ ತೂಕದ ಕಾರಣ, ಪ್ರಯಾಣಿಕರು ಹೆಚ್ಚಿನ ವೇಗದಲ್ಲಿಯೂ ಸಹ ಹೆಚ್ಚು ಆರಾಮದಾಯಕವಾಗಿ ಪ್ರಯಾಣಿಸಬಹುದಾಗಿದೆ.

"ವಂದೇ ಭಾರತ್ ಎಕ್ಸ್‌ಪ್ರೆಸ್ ಅಸಂಖ್ಯಾತ ಉನ್ನತ ಸೌಕರ್ಯಗಳನ್ನು ಒದಗಿಸುತ್ತದೆ. ಇದು ಪ್ರಯಾಣಿಕರಿಗೆ ಪ್ರಯಾಣದ ಅನುಭವ ಮತ್ತು ಸುಧಾರಿತ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳಾದ ಕವಚ್ ತಂತ್ರಜ್ಞಾನ - ದೇಶೀಯವಾಗಿ ಅಭಿವೃದ್ಧಿಪಡಿಸಿದ ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥ" ಎಂದು ಪಶ್ಚಿಮ ರೈಲ್ವೆ ವಲಯದ ಸಿಪಿಆರ್​ಒ ಸುಮಿತ್ ಠಾಕೂರ್ ಹೇಳಿದರು.

ಇದನ್ನೂ ಓದಿ: ಇಂದು 'ವಂದೇ ಭಾರತ್ ಎಕ್ಸ್‌ಪ್ರೆಸ್'​ಗೆ ಪ್ರಧಾನಿ ಮೋದಿ ಚಾಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.