ಪುಣೆ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (NCP) ಅಧ್ಯಕ್ಷ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದಾರೆ.
ಪುಣೆಯಲ್ಲಿ ಮರಾಠಿ ದೈನಿಕ 'ಲೋಕಸತ್ತಾ' ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಮೋದಿ ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಕೆಲಸಗಳನ್ನು ಮಾಡಲು ಸಾಕಷ್ಟು ಸಮಯವನ್ನು ನೀಡುತ್ತಾರೆ. ಅವರ ಮನೋಧರ್ಮ ಹೇಗಿದೆಯೆಂದರೆ, ಯಾವುದೇ ಕೆಲಸವನ್ನು ಒಮ್ಮೆ ಕೈಗೆತ್ತಿಕೊಂಡರೆ ಅದು ಮುಕ್ತಾಯಕ್ಕೆ ಬರುವವರೆಗೂ ಅವರು ವಿರಮಿಸುವುದಿಲ್ಲ. ಅವರು ಆಡಳಿತದಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ' ಎಂದು ಹೇಳಿದರು.
ತಮ್ಮ ಸರ್ಕಾರದ ನೀತಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಡಳಿತ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಹೇಗೆ ಒಗ್ಗೂಡಬಹುದು ಎಂಬುದಕ್ಕೆ ಪ್ರಧಾನಿ ಒತ್ತು ನೀಡುತ್ತಾರೆ. ಅಲ್ಲದೇ ತಮ್ಮ ಸಹೋದ್ಯೋಗಿಗಳನ್ನು ಕರೆದುಕೊಂಡು ಹೋಗಲು ವಿಭಿನ್ನ ವಿಧಾನ ಅನುಸರಿಸುತ್ತಾರೆ ಎಂದರು.
ಇದನ್ನೂ ಓದಿ: ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಲಿಚರಣ್ ಮಹಾರಾಜ್ ಬಂಧನ