ETV Bharat / bharat

ಪ್ರಧಾನಿ ಮೋದಿ ಸೂಪರ್ ಹ್ಯೂಮನ್, ದೇವರ ಲಕ್ಷಣಗಳಿವೆ: ಮಧ್ಯಪ್ರದೇಶ ಸಿಎಂ - ಗೋವಾದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಪ್ರಚಾರ

ನಾನು ಮುಖ್ಯಮಂತ್ರಿ ಅಥವಾ ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ನಾನು ಇದನ್ನು ಹೇಳುತ್ತಿಲ್ಲ. ನನ್ನ ಹೃದಯದಲ್ಲಿ ಅನ್ನಿಸಿದ್ದನ್ನು ನಾನು ಹೇಳುತ್ತಿದ್ದೇನೆ. ನರೇಂದ್ರ ಮೋದಿಯಂತಹ ಪ್ರಧಾನಿಯನ್ನು ದೇಶವು ಹೊಂದಿರುವುದು ಅದೃಷ್ಟ ಎಂದು ಶಿವರಾಜ ಸಿಂಗ್ ಚೌಹಾಣ್ ಪಿಎಂ ಅವರನ್ನು ಹೊಗಳಿದ್ದಾರೆ..

'PM Modi has traces of God in him' says Shivraj Singh Chouhan
ಪ್ರಧಾನಿ ಮೋದಿ ಸೂಪರ್ ಹ್ಯೂಮನ್, ದೇವರ ಲಕ್ಷಣಗಳಿವೆ: ಮಧ್ಯಪ್ರದೇಶ ಸಿಎಂ
author img

By

Published : Feb 2, 2022, 1:23 PM IST

Updated : Feb 2, 2022, 1:36 PM IST

ಪಣಜಿ(ಗೋವಾ) : ಪ್ರಧಾನಿ ನರೇಂದ್ರ ಮೋದಿ ಸೂಪರ್ ಹ್ಯೂಮನ್. ಅವರಲ್ಲಿ ದೇವರ ಲಕ್ಷಣಗಳಿವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗೋವಾದ ದಾಬೋಲಿಮ್ ವಿಧಾನಸಭಾ ಕ್ಷೇತ್ರದಲ್ಲಿ ಮೋದಿಯನ್ನು ಬಣ್ಣಿಸಿದ್ದಾರೆ.

ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ನಾನು ನರೇಂದ್ರ ಮೋದಿಯವರಲ್ಲಿ ದೇವರನ್ನು ಕಾಣುತ್ತಿದ್ದೇನೆ. ಅವರಲ್ಲಿ ಅಗಾಧವಾದ ಶಕ್ತಿಯಿದೆ. ಒಬ್ಬ ವ್ಯಕ್ತಿ ಅಷ್ಟೊಂದು ಕೆಲಸವನ್ನು ಹೇಗೆ ಮಾಡಲು ಸಾಧ್ಯ? ಇದಕ್ಕೂ ಮೊದಲು ವರ್ಷಗಟ್ಟಲೆ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿದೆ. ಅಭಿವೃದ್ಧಿ ಕಾರ್ಯಗಳು ನಡೆದಿವೆಯೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ನಾನು ಮುಖ್ಯಮಂತ್ರಿ ಅಥವಾ ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ನಾನು ಇದನ್ನು ಹೇಳುತ್ತಿಲ್ಲ. ನನ್ನ ಹೃದಯದಲ್ಲಿ ಅನ್ನಿಸಿದ್ದನ್ನು ನಾನು ಹೇಳುತ್ತಿದ್ದೇನೆ. ನರೇಂದ್ರ ಮೋದಿ ಅವರಂತಹ ಪ್ರಧಾನಿಯನ್ನು ದೇಶವು ಹೊಂದಿರುವುದು ಅದೃಷ್ಟ ಎಂದು ಶಿವರಾಜ ಸಿಂಗ್ ಚೌಹಾಣ್ ಅವರು ಪ್ರಧಾನಿ ಮೋದಿಯನ್ನು ಹೊಗಳಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ನಾವು ಭಾರತದಿಂದ ಬಂದಿದ್ದೇವೆ ಎಂದು ಬೇರೆ ದೇಶಗಳಲ್ಲಿ ಹೇಳಿದ್ದರೆ, ಅವರು ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದರು. ಗೌರವದಿಂದ ನೋಡುತ್ತಿರಲಿಲ್ಲ. ಭಾರತದಲ್ಲಿ ಭ್ರಷ್ಟಾಚಾರದ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುತ್ತಿತ್ತು. ಈಗ ಬೇರೆ ರಾಷ್ಟ್ರಗಳಲ್ಲಿಯೂ ಪ್ರಧಾನಿ ಮೋದಿ ಭಾರತಕ್ಕೆ ಹೆಮ್ಮೆಯನ್ನು ತಂದಿದ್ದಾರೆ ಎಂದು ಶಿವರಾಜ್​ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್​ ಬೇಹುಗಾರಿಕೆ ಆರೋಪ.. ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್​ ಪ್ರತಿಭಟನೆ

Last Updated : Feb 2, 2022, 1:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.