ನವದೆಹಲಿ : ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ಸಚಿವಾರದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಭೆ ನಡೆಸಿದ್ದಾರೆ.
ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟವನ್ನು ಪುನರ್ ರಚನೆ ಮಾಡ್ತಾರೆ. ಹೀಗಾಗಿ, ಇದರ ಸಾಧಕ-ಬಾಧಕಗಳ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ಶುಕ್ರವಾರವೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೂ ಇದೇ ವಿಚಾರವಾಗಿ ಸಭೆ ನಡೆಸಿದ್ದರು. ಸಚಿವ ಸಂಪುಟ ಪುನರ್ ರಚನೆ ಸಂಬಂಧ ಪ್ರಧಾನಿ ಇಂದು ನಡೆಸಿರುವುದು 5ನೇ ಸಭೆ ಎನ್ನಲಾಗಿದೆ.
ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಈ ರಾಜ್ಯದಲ್ಲಿ ನಾಯಕರಿಗೆ ಕ್ಯಾಬಿನೆಟ್‌ನಲ್ಲಿ ಸ್ಥಾನ ಕಲ್ಪಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಪ್ರಧಾನಿ ಮೋದಿ ಅವರ ಸಚಿವ ಸಂಪುಟ ಸೇರುವ ಆಕ್ಷಾಂಕ್ಷಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಜೊತೆಗೆ ಬಿಹಾರದ ಮಾಜಿ ಡಿಸಿಎಂ ಸುಶೀಲ್ ಮೋದಿ ಅವರಿಗೂ ಕೇಂದ್ರ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.