ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ಹೆಚ್ಚಾಗುತ್ತಿದೆ. ಇದರ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿದರು. ಸಾರ್ವಜನಿಕ ಆರೋಗ್ಯದ ಸನ್ನದ್ಧತೆಯ ಬಗ್ಗೆಯೂ ಪ್ರಧಾನಿ ಅವಲೋಕನ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕೋವಿಡ್: 1,134 ಸೋಂಕಿತರು ಪತ್ತೆ; 7 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಹೊಸದಾಗಿ 1,134 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಸಕ್ರಿಯ ಪ್ರಕರಣಗಳು 7,026ಕ್ಕೆ ಏರಿಕೆಯಾಗಿದೆ. ಅಲ್ಲದೇ, ಐದು ಸಾವುಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟಾರೆ ಸಾವಿನ ಸಂಖ್ಯೆ 5,30,813ಕ್ಕೆ ತಲುಪಿದೆ. ಛತ್ತೀಸ್‌ಗಢ, ದೆಹಲಿ, ಗುಜರಾತ್, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿದೆ.
-
#WATCH | Delhi: Prime Minister Narendra Modi held a high-level meeting today to review the Covid-related situation and public health preparedness. pic.twitter.com/857Lfj08ec
— ANI (@ANI) March 22, 2023 " class="align-text-top noRightClick twitterSection" data="
">#WATCH | Delhi: Prime Minister Narendra Modi held a high-level meeting today to review the Covid-related situation and public health preparedness. pic.twitter.com/857Lfj08ec
— ANI (@ANI) March 22, 2023#WATCH | Delhi: Prime Minister Narendra Modi held a high-level meeting today to review the Covid-related situation and public health preparedness. pic.twitter.com/857Lfj08ec
— ANI (@ANI) March 22, 2023
ಕೋವಿಡ್ ಪ್ರಕರಣಗಳ ಉಲ್ಬಣದ ಹಿನ್ನೆಲೆಯಲ್ಲಿ ಮಾರ್ಚ್ 19ರಂದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಜೊತೆಗೆ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳಿಗೆ ಪರೀಕ್ಷೆ, ಟ್ರ್ಯಾಕ್, ಚಿಕಿತ್ಸೆ ಮತ್ತು ಲಸಿಕೆಗಳ ಐದು ಪಟ್ಟು ಹೆಚ್ಚು ಮಾಡುವಂತೆ ಕೇಂದ್ರ ಸರ್ಕಾರ ಪತ್ರ ಬರೆದಿತ್ತು.
ಇದನ್ನೂ ಓದಿ: ಕೇರಳದಲ್ಲಿ ಕೋವಿಡ್ ಉಲ್ಬಣ, ಹೈ ಅಲರ್ಟ್.. ಕರ್ನಾಟಕಕ್ಕೆ ಎಚ್ಚರಿಕೆ ಗಂಟೆ