ETV Bharat / bharat

ಸರ್ಕಾರ ಮತ್ತು ಸಂಘಟನೆಯಲ್ಲಿ ಬದಲಾವಣೆ: ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ.. ಕರ್ನಾಟಕ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚೆ! - ಗೃಹ ಸಚಿವ ಅಮಿತ್ ಶಾ

ಸರ್ಕಾರ ಮತ್ತು ಸಂಘಟನೆಯಲ್ಲಿನ ಬದಲಾವಣೆ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ನವದೆಹಲಿಯಲ್ಲಿ ಸಭೆ ನಡೆಸಿದರು. ಆದರೆ, ಈ ಸಭೆಯ ಬಗ್ಗೆ ಪಕ್ಷದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

modi
ಮೋದಿ
author img

By

Published : Jun 29, 2023, 10:16 AM IST

ನವದೆಹಲಿ : ಈ ವರ್ಷಾಂತ್ಯದ ಬಳಿಕ ನಡೆಯಲಿರುವ ಮಹತ್ವದ ವಿಧಾನಸಭಾ ಚುನಾವಣೆ ಹಾಗೂ 2024 ರ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಪಕ್ಷದ ಉನ್ನತ ನಾಯಕರು ಬುಧವಾರ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಭೆ ನಡೆಸಿ ಸರ್ಕಾರ ಮತ್ತು ಸಂಘಟನೆಯಲ್ಲಿ ಬದಲಾವಣೆಯ ಕುರಿತು ಚರ್ಚಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಶಾ, ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರು ಸಾಂಸ್ಥಿಕ ಮತ್ತು ರಾಜಕೀಯ ವಿಷಯಗಳ ಕುರಿತು ಆಗಾಗ ಸಭೆಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಈ ಸಭೆ ನಡೆದಿದೆ. ಮಾಧ್ಯಮ ವರದಿಗಳ ಪ್ರಕಾರ, ಸಭೆಯಲ್ಲಿ ಬಿಜೆಪಿಯ ಸಂಘಟನೆ ಮತ್ತು ಸರ್ಕಾರದ ಬದಲಾವಣೆಯ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸಭೆ ನಡೆದಿದ್ದು, ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಪರಿಗಣಿಸಲಾಗಿದೆ. ಈ ಬೆನ್ನಲ್ಲೇ, ಗುಜರಾತ್ ಮತ್ತು ಕರ್ನಾಟಕದಲ್ಲಿ ಬಿಜೆಪಿ ಹೊಸ ರಾಜ್ಯಾಧ್ಯಕ್ಷರನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ. ಇದಲ್ಲದೆ, ಮೇರಾ ಬೂತ್ ಸಬ್ಸೆ ಶಕ್ತಿ ಕಾರ್ಯಕ್ರಮದ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

ಇದನ್ನೂ ಓದಿ : ಮುಸ್ಲಿಂ ಬಹುಸಂಖ್ಯಾತ ದೇಶಗಳಲ್ಲಿ ತ್ರಿವಳಿ ತಲಾಖ್ ಕಾನೂನು ಪದ್ಧತಿ ಇಲ್ಲ : ಪ್ರಧಾನಿ ಮೋದಿ

ಮಾಹಿತಿ ಪ್ರಕಾರ, ಸಭೆಯಲ್ಲಿ ಕೈಗೊಂಡ ಬದಲಾವಣೆಗಳ ಬಗ್ಗೆ ಅಮಿತ್ ಶಾ, ಜೆಪಿ ನಡ್ಡಾ ಮತ್ತು ಬಿಎಲ್ ಸಂತೋಷ್ ಬಹಳ ಸಮಯ ತಮ್ಮತಮ್ಮಲ್ಲೇ ಚರ್ಚೆ ನಡೆಸಿದ್ದು, ಪ್ರಧಾನಿ ಮೋದಿಯವರ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಈ ಬದಲಾವಣೆಗಳನ್ನು ಜೂನ್ 30 ರ ನಂತರ ಯಾವಾಗ ಬೇಕಾದರೂ ಘೋಷಿಸಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ : PM Modi : ಭ್ರಷ್ಟಾಚಾರ, ಹಗರಣವೇ ಪ್ರತಿಪಕ್ಷಗಳ 'ಗ್ಯಾರಂಟಿ' ; ಪ್ರತಿಪಕ್ಷ ನಾಯಕರಿಗೆ ತಿವಿದ ಪ್ರಧಾನಿ ಮೋದಿ

ಇನ್ನು ಇದೇ ಜೂನ್​ 27 ರಂದು ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್‌ನಲ್ಲಿ ನಡೆದ ಬಿಜೆಪಿಯ ಮೇರಾ ಬೂತ್ ಸಬ್ಸೆ ಮಜ್ಬೂತ್ ಕಾರ್ಯಕ್ರಮದಲ್ಲಿ ಕೆಲ ಯುವಕರು ಸಾಕಷ್ಟು ಕೋಲಾಹಲ ಉಂಟು ಮಾಡಿದ್ದರು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಕಾರ್ಯಕರ್ತರು ಯುವಕನೊಬ್ಬನಿಗೆ ತೀವ್ರವಾಗಿ ಥಳಿಸಿದ್ದರು. ಅದೇ ದಿನದಂದು ಮೇರಾ ಬೂತ್ ಸಬ್ಸೆ ಮಜ್ಬೂತ್ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

ಇದನ್ನೂ ಓದಿ : BJP workers clash : ಮೇರಾ ಬೂತ್ ಸಬ್ಸೆ ಮಜ್ಬೂತ್ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರ ಗಲಾಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.