ನವದೆಹಲಿ: ರೈತರ ಏಳ್ಗೆಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಪ್ರಧಾನಿ ಮೋದಿ ಹೊಗಳಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮನ್ ನಿಧಿ ಸೇರಿ ಇತರ ಯೋಜನೆಗಳು ದೇಶಾದ್ಯಂತ ಕೋಟ್ಯಂತರ ರೈತರಿಗೆ ಹೊಸ ಶಕ್ತಿ ತಂಬಿದೆ. ರೈತರ ಕಲ್ಯಾಣವು ಸಮೃದ್ಧ ದೇಶದ ಪ್ರಮುಖ ಅಂಶ ಎಂದು ಅವರು ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
-
हमारे किसान भाई-बहनों पर देश को गर्व है। ये जितना सशक्त होंगे, नया भारत भी उतना ही समृद्ध होगा। मुझे खुशी है कि पीएम किसान सम्मान निधि और कृषि से जुड़ी अन्य योजनाएं देश के करोड़ों किसानों को नई ताकत दे रही हैं। pic.twitter.com/xMSrBrbLT5
— Narendra Modi (@narendramodi) April 10, 2022 " class="align-text-top noRightClick twitterSection" data="
">हमारे किसान भाई-बहनों पर देश को गर्व है। ये जितना सशक्त होंगे, नया भारत भी उतना ही समृद्ध होगा। मुझे खुशी है कि पीएम किसान सम्मान निधि और कृषि से जुड़ी अन्य योजनाएं देश के करोड़ों किसानों को नई ताकत दे रही हैं। pic.twitter.com/xMSrBrbLT5
— Narendra Modi (@narendramodi) April 10, 2022हमारे किसान भाई-बहनों पर देश को गर्व है। ये जितना सशक्त होंगे, नया भारत भी उतना ही समृद्ध होगा। मुझे खुशी है कि पीएम किसान सम्मान निधि और कृषि से जुड़ी अन्य योजनाएं देश के करोड़ों किसानों को नई ताकत दे रही हैं। pic.twitter.com/xMSrBrbLT5
— Narendra Modi (@narendramodi) April 10, 2022
ಕೃಷಿಕ ಸಹೋದರ, ಸಹೋದರಿಯರ ಬಗ್ಗೆ ದೇಶ ಹೆಮ್ಮೆ ಪಡುತ್ತದೆ. ರೈತರು ಸಬಲರಾದಷ್ಟು ನವಭಾರತ ಮತ್ತಷ್ಟು ಸಮೃದ್ಧವಾಗಲಿದೆ. ಕೃಷಿ ಸಂಬಂಧಿತ ಅನೇಕ ಯೋಜನೆಗಳು ರೈತರಿಗೆ ಹೊಸ ಶಕ್ತಿ ತಂಬಿರುವುದಕ್ಕೆ ನನಗೆ ಸಂತೋಷವಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ 11.3 ಕೋಟಿ ರೈತರು ನೇರ ಲಾಭವನ್ನು ಪಡೆಯುತ್ತಿದ್ದಾರೆ. ರೈತರ ಬ್ಯಾಂಕ್ ಖಾತೆಗಳಿಗೆ 1.82 ಲಕ್ಷ ಕೋಟಿ ರೂ. ನೇರವಾಗಿ ಜಮೆ ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ವಾರ್ಷಿಕ 6 ಸಾವಿರ ರೂ.ದಂತೆ 1.30 ಲಕ್ಷ ಕೋಟಿ ರೈತರ ಖಾತೆಗಳಿಗೆ ಜಮೆಯಾಗಿದೆ. ಇದರ ಲಾಭ ವಿಶೇಷವಾಗಿ ಸಣ್ಣ ರೈತರಿಗೆ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಅಲ್ಲದೇ, ಕೃಷಿ ಮೂಲಸೌಕರ್ಯ ನಿಧಿಯಡಿ 1 ಲಕ್ಷ ಕೋಟಿ ಸಾಲದ ಸೌಲಭ್ಯ ಒದಗಿಸಲಾಗುತ್ತದೆ. ಇದರಡಿ 11,632 ಯೋಜನೆಗಳಿಗೆ 8,585 ಕೋಟಿ ರೂ. ಸಾಲ ನೀಡಲಾಗಿದೆ. ಕೃಷಿ ಸರಕುಗಳಿಗಾಗಿ ಆನ್ಲೈನ್ ಮಾರಾಟಕ್ಕಾಗಿ ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇ-ನಾಮ್) ವ್ಯವಸ್ಥೆ ಜಾರಿಗೆ ತರಲಾಗಿದೆ. ಇದುವರೆಗೆ ಇ-ನಾಮ್ ಅಡಿ 1.73 ಕೋಟಿ ರೈತರು ನೋಂದಣಿ ಮಾಡಿಕೊಂಡಿದ್ದು, ಒಟ್ಟಾರೆ 1.87 ಲಕ್ಷ ಕೋಟಿ ರೂ. ವ್ಯವಹಾರವಾಗಿದೆ ಎಂದು ಪ್ರಧಾನಿ ವಿವರಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ- ಆರ್ಎಸ್ಎಸ್ ಮುಖ್ಯಸ್ಥ ಭಾಗವತ್ ಬಗ್ಗೆ ಆಕ್ಷೇಪಾರ್ಹ ಚಿತ್ರಗಳ ಫೋಸ್ಟ್