ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್' ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಇದು ಮಾಸಿಕ ಕಾರ್ಯಕ್ರಮದ 93ನೇ ಸಂಚಿಕೆಯಾಗಿದೆ.
ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನ, ಎಐಆರ್ ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲೂ ನೇರ ಪ್ರಸಾರವಿರಲಿದೆ. ಹಿಂದಿ ಭಾಷೆಯಲ್ಲಿ ಪ್ರಸಾರದ ನಂತರ ತಕ್ಷಣ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಪ್ರಸಾರ ಮಾಡುತ್ತದೆ.
ಕಳೆದ ಬಾರಿಯ ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?: ಆ.28,2022ರಂದು 'ಮನ್ ಕಿ ಬಾತ್' ಕಾರ್ಯಕ್ರಮದ 92ನೇ ಆವೃತ್ತಿಯಲ್ಲಿ, ಪ್ರಧಾನಿ ಮೋದಿ ದೇಶದ ಜನರೊಂದಿಗೆ ಸರ್ಕಾರ ಮತ್ತು ತಮ್ಮ ಆಶಯಗಳನ್ನು ಹಂಚಿಕೊಂಡಿದ್ದರು ಮತ್ತು 'ಸ್ವರಾಜ್' ಧಾರಾವಾಹಿಯನ್ನು ವೀಕ್ಷಿಸಲು ಜನರಲ್ಲಿ ಮನವಿ ಮಾಡಿದ್ದರು. ವಿದ್ಯಾರ್ಥಿಗಳು ತಮ್ಮ ಸಂಸ್ಥೆಗಳಲ್ಲಿ ವಿಶೇಷ ಕಾರ್ಯಕ್ರಮವನ್ನು ರಚಿಸುವಂತೆ ಅವರು ಸೂಚಿಸಿದ್ದರು.
ಇದನ್ನೂ ಓದಿ: ತ್ರಿವರ್ಣ ಧ್ವಜವನ್ನು ಸಾಮಾಜಿಕ ಮಾಧ್ಯಮಗಳ ಡಿಪಿಯಾಗಿ ಬಳಸಿ: ಪ್ರಧಾನಿ ಮೋದಿ ಕರೆ