ETV Bharat / bharat

ರಷ್ಯಾ- ಉಕ್ರೇನ್​ ಯುದ್ಧ: ಸೇನಾ ಪಡೆಗಳ ಮುಖ್ಯಸ್ಥರನ್ನು ಭೇಟಿ ಮಾಡಿದ ಮೋದಿ

ರಷ್ಯಾ-ಉಕ್ರೇನ್ ಸಮಸ್ಯೆಯ ಕುರಿತು ನಡೆಯುತ್ತಿರುವ ಜಾಗತಿಕ ಬಿಕ್ಕಟ್ಟಿನ ನಡುವೆಯೇ ದೇಶದ ಭದ್ರತಾ ಸನ್ನದ್ಧತೆಯ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮೂರು ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಿದ್ದಾರೆ.

ಮೂರು ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಿದ ಮೋದಿ
ಮೂರು ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಿದ ಮೋದಿ
author img

By

Published : Mar 14, 2022, 9:21 AM IST

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಭದ್ರತಾ ಸನ್ನದ್ಧತೆ ಮತ್ತು ಜಾಗತಿಕ ಪರಿಸ್ಥಿತಿ ಕುರಿತು ಚರ್ಚಿಸಲು ಭಾನುವಾರ ಸಂಪುಟ ಸಮಿತಿ ಸಭೆ ನಡೆಸಿದ್ದು, ಮೂರು ಸೇನಾ ಮುಖ್ಯಸ್ಥರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ರಷ್ಯಾ ಮತ್ತು ಉಕ್ರೇನ್ ಉದ್ಧದ ನಡುವೆ ದೇಶದ ಭದ್ರತಾ ಸನ್ನಿವೇಶ ಮತ್ತು ಜಾಗತಿಕ ಪರಿಸ್ಥಿತಿ ಕುರಿತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ಸೇರಿದಂತೆ ಇತರ ಹಿರಿಯ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು ಪ್ರಧಾನ ಮಂತ್ರಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಇದಕ್ಕೂ ಮುನ್ನ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎನ್‌ಎಸ್‌ಎ ಅಜಿತ್ ದೋವಲ್ ಭಾಗವಹಿಸಿದ್ದು, ಇದರ ಅಧ್ಯಕ್ಷತೆಯನ್ನು ಮೋದಿ ವಹಿಸಿದ್ದರು. ಸಭೆಯಲ್ಲಿ ಅವರು ಇತ್ತೀಚಿನ ಬೆಳವಣಿಗೆಗಳು ಮತ್ತು ಗಡಿ ಪ್ರದೇಶಗಳಲ್ಲಿ ಮತ್ತು ಸಮುದ್ರ ಮತ್ತು ವಾಯು ಡೊಮೇನ್‌ನಲ್ಲಿ ಭಾರತದ ಭದ್ರತಾ ಸನ್ನದ್ಧತೆಯ ವಿವಿಧ ಅಂಶಗಳನ್ನು ವಿವರಿಸಿದರು ಎಂದು ಪ್ರಧಾನಿ ಕಾರ್ಯಾಲಯವು ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

ಉಕ್ರೇನ್‌ನಿಂದ ಭಾರತದ ನೆರೆಯ ರಾಷ್ಟ್ರಗಳ ಕೆಲವು ನಾಗರಿಕರೊಂದಿಗೆ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಆಪರೇಷನ್ ಗಂಗಾ ಕಾರ್ಯಾಚರಣೆ ವಿವರಗಳನ್ನು ಒಳಗೊಂಡಂತೆ ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಪ್ರಧಾನಿಗೆ ವಿವರಿಸಲಾಯಿತು. ಖಾರ್ಕಿವ್‌ನಲ್ಲಿ ಸಾವನ್ನಪ್ಪಿದ ನವೀನ್ ಶೇಖರಪ್ಪ ಅವರ ಪಾರ್ಥಿವ ಶರೀರವನ್ನು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ ಎಂದು ಪಿಎಂಒ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಉಕ್ರೇನ್​ ಮತ್ತು ರಷ್ಯಾ ಎರಡೂ ಕಡೆಯವರು ಭಾರತದೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವುದರಿಂದ ಇದು ದೇಶದ ಮೇಲೆ ನೇರ ಮತ್ತು ಪರೋಕ್ಷ ಪರಿಣಾಮ ಬೀರುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಟ್ರಕ್ ​- ಟ್ರ್ಯಾಕ್ಟರ್​ ಮಧ್ಯೆ ಭೀಕರ ಅಪಘಾತ: ವಿಠ್ಠಲನ ಪಾದ ಸೇರಿದ 7 ಭಕ್ತರು, 40ಕ್ಕೂ ಹೆಚ್ಚು ಜನರಿಗೆ ಗಾಯ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.