ETV Bharat / bharat

'ನಾವು ಒಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ' - ಕಲ್ಯಾಣ್ ಸಿಂಗ್​​ಗೆ ಅಂತಿಮ ನಮನ ಸಲ್ಲಿಸಿ ಮೋದಿ ಕಂಬನಿ - ಪ್ರಧಾನಿ ನರೇಂದ್ರ ಮೋದಿ

ಉತ್ತರ ಪ್ರದೇಶದ ಲಖನೌಗೆ ತೆರಳಿದ ಪಿಎಂ ಮೋದಿ, ಕಲ್ಯಾಣ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

PM Modi pays last respects to Kalyan Singh in Lucknow
ಕಲ್ಯಾಣ್ ಸಿಂಗ್​​ಗೆ ಅಂತಿಮ ನಮನ ಸಲ್ಲಿಸಿದ ಪಿಎಂ ಮೋದಿ
author img

By

Published : Aug 22, 2021, 12:37 PM IST

ಲಖನೌ (ಉತ್ತರ ಪ್ರದೇಶ): ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದ್ದಾರೆ.

ಕಲ್ಯಾಣ್ ಸಿಂಗ್​​ಗೆ ಅಂತಿಮ ನಮನ ಸಲ್ಲಿಸಿದ ಪಿಎಂ ಮೋದಿ

ಉತ್ತರ ಪ್ರದೇಶದ ಲಖನೌದಲ್ಲಿರುವ ಕಲ್ಯಾಣ್ ಸಿಂಗ್ ನಿವಾಸದಲ್ಲಿ ಅಂತಿಮಿ ದರ್ಶನಕ್ಕೆ ಏರ್ಪಾಡು ಮಾಡಲಾಗಿದ್ದು, ಪಿಎಂ ಮೋದಿ ಇಲ್ಲಿಗೆ ಆಗಮಿಸಿ ಅಂತಿಮ ಗೌರವ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನಾವು ಒಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿದ್ದೇವೆ. ಅವರ ಮೌಲ್ಯ ಹಾಗೂ ಸಂಕಲ್ಪಗಳನ್ನು ನಾವು ತೆಗೆದುಕೊಳ್ಳಲು ಗರಿಷ್ಠ ಪ್ರಯತ್ನಗಳನ್ನು ಮಾಡಬೇಕು. ಅವರ ಕನಸುಗಳನ್ನು ಈಡೇರಿಸುವಲ್ಲಿ ನಾವು ಯಾವುದೇ ರೀತಿ ಅಡ್ಡಿಪಡಿಸಬಾರದು" ಎಂದು ಹೇಳಿದರು.

ಇದನ್ನೂ ಓದಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್​ ವಿಧಿವಶ

ಇದಕ್ಕೂ ಮುನ್ನ ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದ ಪಿಎಂ ಮೋದಿ, ಕಲ್ಯಾಣ್ ಸಿಂಗ್ ಜೀ ಅವರು ಜನ ಕಲ್ಯಾಣವನ್ನೇ ತಮ್ಮ ಜೀವನದ ಮಂತ್ರವಾಗಿಸಿಕೊಂಡಿದ್ದರು. ಉತ್ತರ ಪ್ರದೇಶ ಹಾಗೂ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದರು. ಅವರು ಪ್ರಾಮಾಣಿಕತೆ ಮತ್ತು ಉತ್ತಮ ಆಡಳಿತಕ್ಕೆ ಸಮನಾದವರು ಎಂದು ಬಣ್ಣಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.