ETV Bharat / bharat

ವಲ್ಲಭಭಾಯಿ ಪಟೇಲ್ ಜನ್ಮದಿನ , ಏಕತಾ ಪ್ರತಿಮೆಗೆ ಮೋದಿ ಗೌರವಾರ್ಪಣೆ

author img

By

Published : Oct 31, 2022, 9:40 AM IST

ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ನಿಮಿತ್ತ ದೇಶಾದ್ಯಂತ ಏಕತಾ ದಿವಸ್ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗುಜರಾತ್ ದಲ್ಲಿ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಇಬ್ಬರು ವಿಭಿನ್ನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ವಲ್ಲಭಭಾಯಿ ಪಟೇಲ್ ರ ಏಕತಾ ಪ್ರತಿಮೆಗೆ ಮೋದಿ ಗೌರವಾರ್ಪಣೆ
pm modi pays tribute to sardar vallabh bhai patel

ಕೆವಾಡಿಯಾ( ಗುಜರಾತ್): ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147ನೇ ಜನ್ಮದಿನದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೆವಾಡಿಯಾದಲ್ಲಿ ಏಕತಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ, ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾವಿಧಿ ಬೋಧಿಸಿ ಮೆರವಣಿಗೆಯ ಗೌರವ ವಂದನೆ ಸ್ವೀಕರಿಸಿದರು. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಗೃಹ ಸಚಿವ ಅಮಿತ್ ಶಾ ಏಕತೆಯ ಓಟಕ್ಕೆ ಚಾಲನೆ ನೀಡಿದರು.

ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಕ್ಟೋಬರ್ 31 ರ ಜನ್ಮದಿನವನ್ನು ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಕಾರ್ಯಕ್ರಮದಡಿ ಪ್ರಧಾನಿ ಮೋದಿ ಗುಜರಾತ್‌ನಲ್ಲಿದ್ದರೆ, ದೇಶದ ಗೃಹ ಸಚಿವ ಅಮಿತ್ ಶಾ ದೆಹಲಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನಿ ಮೋದಿ ಎರಡು ದಿನಗಳ ಗುಜರಾತ್​ ಭೇಟಿಯಲ್ಲಿದ್ದು, ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಗುಜರಾತ್ ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಪಿಎಂ ಮೋದಿ ವಡೋದರಾ ಭೇಟಿ :ವಡೋದರದಲ್ಲಿ ನಡೆದ ಭಾರತೀಯ ವಾಯುಪಡೆಯ ಸಾರಿಗೆ ವಿಮಾನ ತಯಾರಿಕಾ ಘಟಕದ ಶಂಕುಸ್ಥಾಪನೆ ಪ್ರಧಾನಿ ಮೋದಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬನಸ್ಕಾಂತ ಜಿಲ್ಲೆಯ ಬುಡಕಟ್ಟು ಸಮುದಾಯದ ಮಕ್ಕಳ ಸಂಗೀತ ತಂಡವು ಪ್ರಧಾನ ಮಂತ್ರಿಯವರ ಮುಂದೆ ಪ್ರದರ್ಶನಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.