ಪಾಲ್ಘರ್ (ಮಹಾರಾಷ್ಟ್ರ): ಬೆಂಕಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮಹಾರಾಷ್ಟ್ರ ಸರ್ಕಾರ ಘೋಷಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇದೊಂದು ದೊಡ್ಡ ಆಘಾತ. ಇದರ ಹೊಣೆಗಾರರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸರ್ಕಾರ ತಲಾ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ ಎಂದು ಮಹಾರಾಷ್ಟ್ರ ಸಚಿವ ಏಕನಾಥ ಶಿಂಧೆ ಹೇಳಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿರುವ ಪಿಎಂ ಮೋದಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಆಸ್ಪತ್ರೆ ಅಗ್ನಿ ದುರಂತದಲ್ಲಿ 13 ಮಂದಿ ಬಲಿ: ಇದೇನು ರಾಷ್ಟ್ರಮಟ್ಟದ ಸುದ್ದಿಯಲ್ಲ ಎಂದ 'ಮಹಾ' ಆರೋಗ್ಯ ಸಚಿವ!
ಮುಂಬೈನ ವಿರಾರ್‌ನ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ರೋಗಿಗಳು ಸಾವನ್ನಪ್ಪಿದ ಸುದ್ದಿ ತೀವ್ರ ದುಃಖ ತಂದಿದೆ. ಈ ಹೃದಯ ವಿದ್ರಾವಕ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವನಗಳನ್ನು ತಿಳಿಸುವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
-
विरार, मुंबई के कोविड अस्पताल में आग लगने से मरीज़ों के हताहत होने के समाचार से बहुत दुःख हुआ है। इस हृदय विदारक हादसे में अपने प्रियजनों को खोने वाले परिवारों के प्रति मेरी हार्दिक संवेदनाएं। मैं सभी अन्य मरीज़ों के शीघ्र स्वस्थ होने की कामना करता हूँ।
— President of India (@rashtrapatibhvn) April 23, 2021 " class="align-text-top noRightClick twitterSection" data="
">विरार, मुंबई के कोविड अस्पताल में आग लगने से मरीज़ों के हताहत होने के समाचार से बहुत दुःख हुआ है। इस हृदय विदारक हादसे में अपने प्रियजनों को खोने वाले परिवारों के प्रति मेरी हार्दिक संवेदनाएं। मैं सभी अन्य मरीज़ों के शीघ्र स्वस्थ होने की कामना करता हूँ।
— President of India (@rashtrapatibhvn) April 23, 2021विरार, मुंबई के कोविड अस्पताल में आग लगने से मरीज़ों के हताहत होने के समाचार से बहुत दुःख हुआ है। इस हृदय विदारक हादसे में अपने प्रियजनों को खोने वाले परिवारों के प्रति मेरी हार्दिक संवेदनाएं। मैं सभी अन्य मरीज़ों के शीघ्र स्वस्थ होने की कामना करता हूँ।
— President of India (@rashtrapatibhvn) April 23, 2021
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಿರಾರ್‌ನ ವಿಜಯ್ ವಲ್ಲಭ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಬೆಂಕಿ ಕಾಣಿಸಿಕೊಂಡು 13 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.