ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಗುಜರಾತ್ ಪ್ರವಾಸದಲ್ಲಿರುವ ಮೋದಿ, ತಾಯಿಯನ್ನ ಭೇಟಿ ಮಾಡಿ ಆಶೀರ್ವಾದ ಪಡೆಯಲು ಅವರ ನಿವಾಸಕ್ಕೆ ಆಗಮಿಸಿದ್ದಾರೆ.
ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲದೆ, ಅಮ್ಮನ ಜನ್ಮದಿನಕ್ಕೆ ಮೋದಿ ಉಡುಗೊರೆ ಸಹ ನೀಡಿದ್ದಾರೆ ಎನ್ನಲಾಗಿದೆ. ಜೊತೆಗೆ ವಡಾನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 18, 1923 ರಂದು ಜನಿಸಿದ ಹೀರಾಬೆನ್ ಅವರು ತಮ್ಮ ಕಿರಿ ಮಗ, ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಜೊತೆ ಗಾಂಧಿನಗರ ನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ವಾಸವಾಗಿದ್ದಾರೆ.
ಇದನ್ನೂ ಓದಿ: ಜೂನ್ 18ರಂದು 100ನೇ ವಸಂತಕ್ಕೆ ಕಾಲಿಡಲಿದ್ದಾರೆ ಪ್ರಧಾನಿ ಮೋದಿ ತಾಯಿ ಹೀರಾಬೆನ್