ನವದೆಹಲಿ: ಸೆಪ್ಟೆಂಬರ್ 23 ರಿಂದ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಭಾರತಕ್ಕೆ ಮರಳಿದ್ದಾರೆ. ದೆಹಲಿಯ ಪಾಲಂ ತಾಂತ್ರಿಕ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವರು ಸ್ವಾಗತಿಸಿದರು.
ಅಮೆರಿಕದಲ್ಲಿ ಜೋ ಬೈಡನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಸೆಪ್ಟೆಂಬರ್ 23 ರಂದು ಅಮೆರಿಕಕ್ಕೆ ತೆರಳಿದ್ದ ಅವರು ಅಂದು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಕಮಲಾ ಹ್ಯಾರಿಸ್ಗೆ ಅವರ ತಾತ ಗೋಪಾಲನ್ ಅವರಿಗೆ ಸಂಬಂಧಪಟ್ಟ ಅಧಿಸೂಚನೆಯನ್ನು ಉಡುಗೊರೆಯಾಗಿ ಕೊಟ್ಟಿದ್ದರು.
ಎರಡನೇ ದಿನ (ಸೆಪ್ಟೆಂಬರ್ 24) ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇದು ಅಮೆರಿಕ, ಭಾರತ, ಆಸ್ಟ್ರೇಲಿಯಾ, ಜಪಾನ್ ದೇಶಗಳನ್ನೊಂಡ ಸಂಘಟನೆಯಾಗಿದ್ದು, ನಾಲ್ಕೂ ರಾಷ್ಟ್ರಗಳ ನಾಯಕರು ಭಾಗವಹಿಸಿ, ಜಾಗತಿಕ ಶಾಂತಿ ಸ್ಥಾಪನೆ ಬಗ್ಗೆ ಚರ್ಚಿಸಿದರು. ಅದರಲ್ಲೂ ಮುಖ್ಯವಾಗಿ ಇಂಡೋ-ಫೆಸಿಪಿಕ್ ಪ್ರದೇಶದ ಅಭಿವೃದ್ಧಿ, ಶಾಂತಿ ಸ್ಥಾಪನೆಯ ಬಗ್ಗೆ ಮಾತುಕತೆ ನಡೆಸಿದರು.
ಇದನ್ನೂ ಓದಿ: ಮನಮೋಹನ್ ಸಿಂಗ್ ಜನ್ಮದಿನ.. ರಾಹುಲ್ ಗಾಂಧಿ, ಪೈಲಟ್, ಗೆಹ್ಲೋಟ್ರಿಂದ ಶುಭಾಶಯ