ETV Bharat / bharat

Cyclone Biparjoy: ಬಿಪರ್‌ಜೋಯ್ ಚಂಡಮಾರುತದ ಪರಿಸ್ಥಿತಿ ಬಗ್ಗೆ ಸಭೆ ನಡೆಸಿದ ಪ್ರಧಾನಿ ಮೋದಿ - ಗುಜರಾತ್‌ ಕರಾವಳಿ

ಬಿಪರ್‌ಜೋಯ್ ಚಂಡಮಾರುತದ ಪರಿಸ್ಥಿತಿ ಮತ್ತು ಸನ್ನದ್ಧತೆಯ ಸ್ಥಿತಿ ಕುರಿತು ಪ್ರಧಾನಿ ಮೋದಿ ಇಂದು ಉನ್ನತ ಮಟ್ಟದ ಸಭೆ ನಡೆಸಿದರು. ಮತ್ತೊಂದೆಡೆ, ಗುಜರಾತ್‌ನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಸುಮಾರು 1,300 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

PM Modi reviews situation as Cyclone Biparjoy barrels through Mumbai, disrupts flight operations
ಬಿಪರ್‌ಜೋಯ್ ಚಂಡಮಾರುತದ ಪರಿಸ್ಥಿತಿ ಬಗ್ಗೆ ಸಭೆ ನಡೆಸಿದ ಪ್ರಧಾನಿ ಮೋದಿ
author img

By

Published : Jun 12, 2023, 5:35 PM IST

ನವದೆಹಲಿ: ಬಿಪರ್‌ಜೋಯ್ ಚಂಡಮಾರುತವು ಗುರುವಾರದ ವೇಳೆಗೆ ತೀವ್ರ ಸ್ವರೂಪ ಪಡೆದು ಗುಜರಾತ್‌ಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಬಿಪರ್‌ಜೋಯ್ ಚಂಡಮಾರುತದ ಪರಿಸ್ಥಿತಿ ಮತ್ತು ಸನ್ನದ್ಧತೆಯ ಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಭೆ ನಡೆಸಿ ಅವಲೋಕಿಸಿದರು.

ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ, ಅತ್ಯಂತ ತೀವ್ರವಾದ ಚಂಡಮಾರುತವು ಉತ್ತರ ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ. ಜೂನ್ 15 ಮಧ್ಯಾಹ್ನದ ವೇಳೆಗೆ ಗುಜರಾತ್​ನ ಸೌರಾಷ್ಟ್ರ, ಕಚ್ ಮತ್ತು ಮಾಂಡ್ವಿ ಹಾಗೂ ಪಾಕಿಸ್ತಾನದ ಕರಾಚಿ ನಡುವೆ ಪಾಕಿಸ್ತಾನದ ಪಕ್ಕದ ಕರಾವಳಿ ಕರಾವಳಿಯನ್ನು ದಾಟುವ ನಿರೀಕ್ಷೆ ಇದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಕಚೇರಿಯ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ, ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ, ಭೂ ವಿಜ್ಞಾನ ಕಾರ್ಯದರ್ಶಿ ಎಂ. ರವಿಚಂದ್ರನ್, ಭಾರತೀಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಮಲ್ ಕಿಶೋರ್, ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ್ ಮಹಾಪಾತ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಭೆಯಲ್ಲಿ ಮಂಡಿಸಿದ ಪ್ರಸ್ತುತಿಯ ಪ್ರಕಾರ, ಕಚ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್‌ನಗರ್, ರಾಜ್‌ಕೋಟ್, ಜುನಾಗಢ್ ಮತ್ತು ಮೊರ್ಬಿಯಲ್ಲಿ ಬಿರುಗಾಳಿಯ ಪರಿಸ್ಥಿತಿ ಇರುತ್ತದೆ. ಜೂನ್ 15ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಗಂಟೆಗೆ 125-135 ಕಿ.ಮೀ ವೇಗದಲ್ಲಿ 145 ಕಿ.ಮೀ ವೇಗದವರೆಗೂ ಗಾಳಿ ಬೀಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಸಮುದ್ರದ ತೀರದ ಜನರ ಸ್ಥಳಾಂತರ: ಈಗಾಗಲೇ ಗುಜರಾತ್‌ನ ದಕ್ಷಿಣ ಮತ್ತು ಉತ್ತರ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಬಿಪರ್‌ಜೋಯ್ ಚಂಡಮಾರುತವು ಸೌರಾಷ್ಟ್ರ - ಕಚ್ ಕರಾವಳಿಯಲ್ಲಿ ಅತ್ಯಂತ ತೀವ್ರವಾದ ಚಂಡಮಾರುತವಾಗಿ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆ ಇದೆ. ಇದೇ ಕಾರಣದಿಂದ ಅಧಿಕಾರಿಗಳು ಸಮುದ್ರದ ತೀರದ ಜಿಲ್ಲೆಗಳಲ್ಲಿ ಜನರನ್ನು ಸ್ಥಳಾಂತರಿಸುತ್ತಿದ್ದಾರೆ. ಇದುವರೆಗೆ ಸುಮಾರು 1,300 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಕರಾವಳಿ ದೇವಭೂಮಿ ದ್ವಾರಕಾ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಲ್ಲೂ ಅಲರ್ಟ್​: ಈ ಬಿಪರ್‌ಜೋಯ್ ಚಂಡಮಾರುತವು ರಕ್ಕಸ ರೂಪ ತಾಳುವ ಸಾಧ್ಯತೆಯೂ ಇದೆ. ಹೀಗಾಗಿ ಮಹಾರಾಷ್ಟ್ರದ ಮುಂಬೈನಲ್ಲೂ ಹೈ-ಅಲರ್ಟ್​ ಘೋಷಿಸಲಾಗಿದೆ. ಮುಂಬೈ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಚಂಡಮಾರುತದ ಪರಿಣಾಮ ಜೋರಾದ ಗಾಳಿ ಮತ್ತು ಭಾರಿ ಮಳೆ ಕಾರಣದಿಂದ ವಿಮಾನ ಹಾರಾಟ ರದ್ದತಿ ಹಾಗೂ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆ ಉಂಟಾಗಿದೆ.

ಮುಂಬೈ ವಿಮಾನ ನಿಲ್ದಾಣವು ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತೆ ಆಗಿದೆ. ಮರು ನಿಗದಿಗೊಳಿಸಿದ ವಿಮಾನಗಳು ಮತ್ತು ಪರ್ಯಾಯ ಆಯ್ಕೆಗಳ ಬಗ್ಗೆ ವಿಮಾನಯಾನ ಸಂಸ್ಥೆಯಿಂದ ಸ್ಪಷ್ಟ ಮಾಹಿತಿ ಕೊರತೆಯು ಅನಾನುಕೂಲತೆ ಹೆಚ್ಚಿಸಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ವಿಮಾನಗಳು ತಡವಾದ ಅಥವಾ ರದ್ದುಗೊಂಡ ಪರಿಣಾಮ ಪ್ರಯಾಣಿಕರು ದೀರ್ಘ ಕಾಲ ಕಾಯಬೇಕಾಯಿತು.

ಇದನ್ನೂ ಓದಿ: Effect of cyclone: ಮುಂಬೈ, ಗುಜರಾತ್ ಕರಾವಳಿಯಲ್ಲಿ 'ಬಿಪೊರ್‌ಜಾಯ್‌' ಆರ್ಭಟ: ಭೋರ್ಗರೆದ ಬೃಹತ್‌ ಅಲೆಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.