ETV Bharat / bharat

Mann ki Baat : ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನಿ ಮೌನ ಪ್ರಶ್ನಿಸಿದ ಪ್ರತಿಪಕ್ಷಗಳು.. ರೇಡಿಯೋ ಒಡೆದು ಪ್ರತಿಭಟನೆ - ರೆಡಿಯೋ ಒಡೆದು ಪ್ರತಿಭಟನೆ

ಮನ್​ ಕಿ ಬಾತ್​ನಲ್ಲಿ ಮಣಿಪುರ ಹಿಂಸಾಚಾರದ ಕುರಿತು ಮೌನ ವಹಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್​ ನೇತೃತ್ವದ ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ.

manipur-violence-jairam-ramesh
Mann ki Baat : ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನಿ ಮೌನ ಪ್ರಶ್ನಿಸಿದ ಪ್ರತಿಪಕ್ಷಗಳು..ರೆಡಿಯೋ ಒಡೆದು ಪ್ರತಿಭಟನೆ
author img

By

Published : Jun 18, 2023, 7:54 PM IST

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಮೌನ ವಹಿಸಿರುವುದಕ್ಕೆ ಕಾಂಗ್ರೆಸ್​ ನೇತೃತ್ವದ ಪ್ರತಿಪಕ್ಷಗಳು ಪ್ರಶ್ನೆ ಮಾಡಿವೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಜೈರಾಮ್​ ರಮೇಶ್​​, ಇನ್ನೊಂದು ಮನ್​ ಕಿ ಬಾತ್​. ಆದರೆ ಮಣಿಪುರ ಹಿಂಸಾಚಾರದ ಬಗ್ಗೆ ಮೌನ ಎಂದು ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ವಿಪತ್ತು ನಿರ್ವಹಣೆಗಳ ಸಾಮರ್ಥ್ಯದ ಬಗ್ಗೆ ಬೆನ್ನು ತಟ್ಟಿಕೊಳ್ಳುತ್ತಾರೆ. ಆದರೆ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾಕೆ ಮೌನ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಅವರು ಇನ್ನೂ ಜನರಲ್ಲಿ ಶಾಂತಿಗಾಗಿ ಮನವಿ ಮಾಡಿಲ್ಲ. ಆಡಿಟ್​ ಮಾಡಲಾಗದ ಪಿಎಂ ಕೇರ್ಸ್​ ಫಂಡ್​ ಇದೆ. ಆದರೆ ಪ್ರಧಾನಿಗೆ ಮಣಿಪುರದ ಬಗ್ಗೆ ಕಾಳಜಿ ಇಲ್ಲವೇ ಎಂಬುದು ಪ್ರಮುಖ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

  • So one more Mann ki Baat but Maun on Manipur. The PM patted himself on the back for India's great capabilities in disaster management. What about the entirely man-made (actually self-inflicted) humanitarian disaster that is confronting Manipur. Still no appeal for peace from him.…

    — Jairam Ramesh (@Jairam_Ramesh) June 18, 2023 " class="align-text-top noRightClick twitterSection" data=" ">

ಈ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ತೃಣಮೂಲ ಕಾಂಗ್ರೆಸ್​​, ಈಗ ಮನ್​ ಕಿ ಬಾತ್​ ಅಲ್ಲ. ಮಣಿಪುರ ಕಿ ಬಾತ್​ನ ಸಮಯವಾಗಿದೆ ಎಂದು ಟೀಕಿಸಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಟಿಎಂಸಿ ಲೋಕಸಭಾ ಸದಸ್ಯ ಮಹುವಾ ಮೊಯಿತ್ರಾ " ಮನ್ ಕಿ ಬಾತ್ ಸಾಕು. ಈಗ ಮಣಿಪುರ ಕಿ ಬಾತ್‌ನ ಸಮಯವಾಗಿದೆ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ ಎಂದು ಹೇಳಿದ್ದಾರೆ.

ಮಣಿಪುರ್​ ಹಿಂಸಾಚಾರ ಹಿನ್ನೆಲೆ ಕಾಂಗ್ರೆಸ್​ ಮತ್ತು ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿವೆ. ಶನಿವಾರ ರಾತ್ರಿ ಮಣಿಪುರದ ರಾಜಧಾನಿ ಇಂಫಾಲ್​ನ ಹಿಂಸಾಚಾರ ನಡೆದಿರುವ ಪ್ರದೇಶದಲ್ಲಿ ಭಾರತೀಯ ಸೇನೆ ಫ್ಲಾಗ್ ಮಾರ್ಚ್ ನಡೆಸಿದೆ.

ಪಶ್ಚಿಮ ಇಂಫಾಲ್​ನಲ್ಲಿ ರೇಡಿಯೋ ಒಡೆದು ಪ್ರತಿಭಟನೆ: ಪ್ರಧಾನಿ ನರೇಂದ್ರ ಮೋದಿ ಅವರು ಮನ್​ ಕಿ ಬಾತ್​ನಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಮೌನ ವಹಿಸಿರುವುದಕ್ಕೆ ಜನರು ರೆಡಿಯೋ ಒಡೆದುಹಾಕಿ ತಮ್ಮ ಆಕ್ರೋಶ ಹೊರಹಾಕಿದರು. ಇಂದು ಪ್ರಸಾರವಾದ ಮನ್​ ಕಿ ಬಾತ್​ ಕಾರ್ಯಕ್ರಮದಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಮೌನ ವಹಿಸಿರುವುದನ್ನು ಖಂಡಿಸಿ ಜನರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರು ತಮ್ಮ ಟ್ವಿಟ್ಟರ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮಣಿಪುರದ ಜನರು ತಮ್ಮ ಮನ್ ಕಿ ಬಾತ್​​ನ ರುಚಿಯನ್ನು ಮೋದಿಗೆ ನೀಡಿದ್ದಾರೆ" ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಕೆಲವು ಪುರುಷರು ಮತ್ತು ಮಹಿಳೆಯರು ಪಶ್ಚಿಮ ಇಂಫಾಲ್​ನ ರಸ್ತೆ ಮಧ್ಯದಲ್ಲೇ ರೇಡಿಯೋಗಳನ್ನು ಒಡೆದು ಹಾಕುವುದು ಮತ್ತು 'ಮನ್ ಕಿ ಬಾತ್' ವಿರುದ್ಧ ಘೋಷಣೆಗಳನ್ನು ಕೂಗುವುದನ್ನು ಕಾಣಬಹುದು.

ಮಣಿಪುರ ​ಹಿಂಸಾಚಾರ : ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟಿ​​ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಗುಡ್ಡಗಾಡು ಪ್ರದೇಶದ ಜಿಲ್ಲೆಗಳಲ್ಲಿ ಬುಡಕಟ್ಟು ಸಮುದಾಯದ ಕುಕಿಗಳು 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿದ್ದರು. ಈ ಸಂಬಂಧ ಮೇ 3ರಂದು ಸಮುದಾಯಗಳ ನಡುವೆ ಘರ್ಷಣೆಗಳು ಪ್ರಾರಂಭವಾದವು. ಘರ್ಷಣೆಯಲ್ಲಿ ನೂರಕ್ಕೂ ಅಧಿಕ ಜನರು ಮೃತಪಟ್ಟಿದ್ದರು.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೀಟಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರಾದ ನಾಗಾಗಳು ಮತ್ತು ಕುಕಿಗಳು ಜನಸಂಖ್ಯೆಯ ಶೇ. 40 ರಷ್ಟಿದ್ದು, ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಕೇಂದ್ರ ಸಚಿವರ ಮನೆಗೆ ಬೆಂಕಿ : ಕಳೆದ ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌.ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ದುಷ್ಕರ್ಮಿಗಳ ಗುಂಪೊಂದು ಬೆಂಕಿ ಹಚ್ಚಿತ್ತು ಎಂದು ಮಣಿಪುರ ಸರ್ಕಾರ ಮಾಹಿತಿ ನೀಡಿತ್ತು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಿಂಗ್, ಯಾರೋ ದುಷ್ಕರ್ಮಿಗಳು ರಾತ್ರಿ ಇಂಫಾಲ್ ಮನೆ ಮೇಲೆ ದಾಳಿ ನಡೆಸಿದ್ದರು. ಅವರೆಲ್ಲ ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು. ದಾಳಿಯಲ್ಲಿ ನನ್ನ ಮನೆಯ ನೆಲ ಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ ಎಂದು ತಿಳಿಸಿದ್ದರು.

ಅಲ್ಲದೆ ಇಂಫಾಲ್ ವೆಸ್ಟ್‌ನಲ್ಲಿರುವ ಮಣಿಪುರ ಸಚಿವ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ನಿವಾಸಕ್ಕೂ ಬೆಂಕಿ ಹಚ್ಚುವ ಪ್ರಯತ್ನ ನಡೆದಿತ್ತು. ಘಟನೆಯಲ್ಲಿ ಅವರ ಮನೆ ಭಾಗಶಃ ಸುಟ್ಟು ಕರಕಲಾಗಿತ್ತು.

ಇದನ್ನೂ ಓದಿ : ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಚರ್ಚ್​​​ನಲ್ಲಿ ಗುಂಡಿನ ದಾಳಿ, 9 ಮಂದಿ ದಾರುಣ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.