ETV Bharat / bharat

ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಭಾಗಿ.. ಈ ವಿಚಾರಗಳ ಕುರಿತು ಮಾತನಾಡಲಿರುವ ನಮೋ..!

author img

By

Published : Jun 12, 2021, 4:49 PM IST

ಜೂನ್ 11 ರಿಂದ 13 ರವರೆಗೆ ನಡೆಯುತ್ತಿರುವ ಜಿ -7 ಶೃಂಗಸಭೆಯಲ್ಲಿ ಭಾಗವಹಿಸುವಂತೆ ಯುಕೆ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರು ಪ್ರಧಾನಿಯನ್ನು ಆಹ್ವಾನಿಸಿದ್ದರು. ಆದರೆ, ಭಾರತದಲ್ಲಿ ಕೋವಿಡ್ ಹೆಚ್ಚುತ್ತಿರುವ ಕಾರಣ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಖುದ್ದಾಗಿ ಭಾಗವಹಿಸುವುದಿಲ್ಲ. ವರ್ಚುಯಲ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

PM Modi
ಪ್ರಧಾನಿ ಮೋದಿ

ನವದೆಹಲಿ: ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ನೇತೃತ್ವದಲ್ಲಿ ಜಿ-7 ಶೃಂಗಸಭೆ ಶುರುವಾಗಿದೆ. ಭಾರತ, ಆಸ್ಟ್ರೇಲಿಯಾ, ಕೊರಿಯಾ ಗಣತಂತ್ರ ಮತ್ತು ದಕ್ಷಿಣ ಆಫ್ರಿಕಾಗಳನ್ನು ಜಿ-7 ಶೃಂಗಕ್ಕೆ ಅತಿಥಿ ರಾಷ್ಟ್ರಗಳನ್ನಾಗಿ ಆಹ್ವಾನಿಸಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ‘ಬಿಲ್ಡಿಂಗ್​ ಬ್ಯಾಕ್​ ಸ್ಟ್ರಾಂಗ್, ಬಿಲ್ಡಿಂಗ್​ ಬ್ಯಾಕ್​​​ ಟುಗೆದರ್ ಮತ್ತು ಬಿಲ್ಡಿಂಗ್ ಬ್ಯಾಕ್ ಗ್ರೀನರ್’ ಎಂಬ ವಿಷಯಗಳನ್ನು ಕುರಿತು ಮಾತನಾಡಲಿದ್ದಾರೆ.

ಜೂನ್ 11 ರಿಂದ 13 ರವರೆಗೆ ನಡೆಯುತ್ತಿರುವ ಜಿ- 7 ಶೃಂಗಸಭೆಯಲ್ಲಿ ಭಾಗವಹಿಸುವಂತೆ ಯುಕೆ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರು ಪ್ರಧಾನಿ ಅವರನ್ನು ಆಹ್ವಾನಿಸಿದ್ದರು. ಆದರೆ, ಭಾರತದಲ್ಲಿ ಕೋವಿಡ್ ಹೆಚ್ಚುತ್ತಿರುವ ಕಾರಣ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಖುದ್ದಾಗಿ ಭಾಗವಹಿಸುವುದಿಲ್ಲ. ವರ್ಚುಯಲ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ ಎರಡನೇ ಬಾರಿಗೆ ಜಿ-7 ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ. 2019 ರಲ್ಲಿ ಫ್ರೆಂಚ್ ಅಧ್ಯಕ್ಷತೆಯಲ್ಲಿ ನಡೆದ ಜಿ.7 ರ ಬಿರಿಽಟ್ಜ್ ಸಮಿತಿಯಲ್ಲಿ ಸದ್ಭಾವನಾ ಪಾಲುದಾರನಾಗಿ ಪಾಲ್ಗೊಳ್ಳಲು ಭಾರತಕ್ಕೆ ಆಹ್ವಾನ ನೀಡಲಾಗಿತ್ತು ಮತ್ತು ಪ್ರಧಾನ ಮಂತ್ರಿ ಅವರು ವಾತಾವರಣ, ಜೀವ ವೈವಿಧ್ಯ ಮತ್ತು ಸಾಗರಗಳು ಹಾಗೂ ಡಿಜಿಟಲ್ ಪರಿವರ್ತನೆ ಅಧಿವೇಶನಗಳಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಕೋವಿಡ್​ ಸಂಬಂಧಿತ ವೈದ್ಯಕೀಯ ಉಪಕರಣಗಳ ಮೇಲಿನ ತೆರಿಗೆ ಕಡಿತ: ಸೀತಾರಾಮನ್ ಘೋಷಣೆ

ಜೋ ಬೈಡನ್ ಅಮೆರಿಕ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ 8 ದಿನಗಳ ಕಾಲ ವಿದೇಶ ಪ್ರವಾಸ ಮಾಡುತ್ತಿದ್ದಾರೆ. ಮೂರು ದಿನಗಳ ಕಾಲ ಜಿ-7 ಶೃಂಗಸಭೆ ನಡೆಯಲಿದ್ದು, ವಿಶ್ವ ನಾಯಕರು ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ರಾಷ್ಟ್ರಗಳಿಗೆ ಲಸಿಕೆಯ 100 ಕೋಟಿ ಡೋಸ್‌ಗಳನ್ನು ಒದಗಿಸುವುದಾಗಿ ವಾಗ್ದಾನ ಮಾಡುವ ನಿರೀಕ್ಷೆಯಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.