ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಯೆಟ್ನಾಂ ಪ್ರಧಾನಿ ನ್ಗುಯೆನ್ ಕ್ಸುವಾನ್ ಫುಕ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಶೃಂಗಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಪ್ರಕಟಣೆ ಹೊರಡಿಸಿದೆ.
ಸಭೆಯಲ್ಲಿ ಉಭಯ ನಾಯಕರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಉಭಯ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಭವಿಷ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಲಿದ್ದಾರೆ ಎಂದು ಎಂಇಎ ತಿಳಿಸಿದೆ.
ಭಾರತ ಮತ್ತು ವಿಯೆಟ್ನಾಂ ದೇಶಗಳು ತಮ್ಮ ಸಂಬಂಧವನ್ನು 2016 ರಲ್ಲಿ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಮಟ್ಟಕ್ಕೆ ಕರೆದೊಯ್ದಿತ್ತು. ದ್ವಿಪಕ್ಷೀಯ ಮಾತುಕತೆಯಲ್ಲಿ ರಕ್ಷಣಾ ವಲಯದಲ್ಲಿನ ಸಹಕಾರ ಕೂಡ ಒಂದಾಗಿದೆ.
ಇದನ್ನೂ ಓದಿ: 'ಭಾರತ ನಮ್ಮ ನಿಜವಾದ ಗೆಳೆಯ': 1971ರ ಯುದ್ಧದ ವರ್ಚುವಲ್ ಶೃಂಗಸಭೆಯಲ್ಲಿ ಶೇಖ್ ಹಸೀನಾ
ಕಳೆದ ಏಪ್ರಿಲ್ 13 ರಂದು ಕೋವಿಡ್ ಸಾಂಕ್ರಾಮಿಕದಿಂದ ಉಂಟಾದ ಪರಿಸ್ಥಿತಿ ಕುರಿತು ಪಿಎಂ ಮೋದಿ ಹಾಗೂ ಕ್ಸುವಾನ್ ಫುಕ್ ದೂರವಾಣಿ ಸಂಭಾಷಣೆ ನಡೆಸಿದ್ದರು. ಆಗಸ್ಟ್ 25 ರಂದು ಉಭಯ ದೇಶಗಳ ವಿದೇಶಾಂಗ ಸಚಿವರ ನೇತೃತ್ವದಲ್ಲಿ 17 ನೇ ಆವೃತ್ತಿಯ ಜಂಟಿ ಆಯೋಗದ ವರ್ಚುವಲ್ ಸಭೆ ನಡೆದಿತ್ತು. ನವೆಂಬರ್ 27 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಯೆಟ್ನಾಂನ ರಕ್ಷಣಾ ಸಚಿವರ ಜೊತೆ ವರ್ಚುವಲ್ ಸಭೆ ನಡೆಸಿದ್ದರು.