ETV Bharat / bharat

ಪ್ರಧಾನಿಯಿಂದ ನಾಳೆ ದೆಹಲಿ - ಮುಂಬೈ ಎಕ್ಸ್‌ಪ್ರೆಸ್‌ವೇ ಮೊದಲ ಹಂತದ ಮಾರ್ಗ ಉದ್ಘಾಟನೆ

author img

By

Published : Feb 11, 2023, 10:52 PM IST

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ 246 ಕಿ.ಮೀ. ದೆಹಲಿ-ದೌಸಾ-ಲಾಲ್ಸೋಟ್ ಮೊದಲ ಹಂತದ ಮಾರ್ಗ ಉದ್ಘಾಟನೆಗೆ ಸಿದ್ಧ - ನಾಳೆ ಭಾನುವಾರ ಈ ಮೊದಲ ಹಂತದ ಮಾರ್ಗವನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ.

National Highway Project
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ

ನವದೆಹಲಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ 246 ಕಿಮೀ ದೆಹಲಿ-ದೌಸಾ-ಲಾಲ್ಸೋಟ್ ಮೊದಲ ಹಂತದ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಿಂದ ಜೈಪುರಕ್ಕೆ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಹೊಸ ಮಾರ್ಗವನ್ನು ನಿಗದಿಪಡಿಸಲಾಗಿದೆ. ಐದು ಗಂಟೆಗಳ ಪ್ರಯಾಣವನ್ನು ಸುಮಾರು ಮೂರೂವರೆ ಗಂಟೆಗಳಿಗೆ ಇಳಿಕೆ ಮಾಡಲು ಸಾಧ್ಯವಾಗುತ್ತದೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ: ಈ ಮಾರ್ಗವನ್ನು 12,150 ಕೋಟಿ ರೂಪಾಯಿಗಿಂತ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ, ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಈ ಮೊದಲ ಹಂತದ ಕಾರ್ಯ ಪೂರ್ಣಗೊಂಡಿದೆ. ಈ ಯೊಜನೆಯಿಂದ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಉತ್ತೇಜನ ನೀಡುತ್ತದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ. ಮೋದಿ ಅವರು ನಾಳೆ ಭಾನುವಾರ ದೌಸಾದಿಂದ 18,100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಏರೋ ಇಂಡಿಯಾ 2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲು ಸೋಮವಾರ ಅವರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ 1,386 ಕಿಮೀ ಉದ್ದ ಹೊಂದಿದ್ದು, ಭಾರತದ ಅತಿ ಉದ್ದದ ಮಾರ್ಗವಾಗಿದೆ. ಇದು ದೆಹಲಿ ಮತ್ತು ಮುಂಬೈ ನಡುವಿನ ಪ್ರಯಾಣದ ದೂರವನ್ನು 1,424 ಕಿಮೀಗಳಿಂದ 1,242 ಕಿಮೀಗೆ ಇಳಿಕೆಯಾಗಿದ್ದು, ಶೇಕಡಾ 12 ರಷ್ಟು ಕಡಿಮೆ ಮಾಡುತ್ತದೆ. ಆದರೆ, ಪ್ರಯಾಣದ ಸಮಯವನ್ನು ಪ್ರಸ್ತುತ 24 ಗಂಟೆಗಳಿಂದ 12 ಗಂಟೆಗಳವರೆಗೆ ಅಂದ್ರೆ ಶೇಕಡಾ 50 ರಷ್ಟು ಕಡಿತಗೊಳಿಸಲಾಗುವುದು ಎಂದು ಹೇಳಿದೆ.

ಹಲವು ಪ್ರಮುಖ ನಗರಗಳಿಗೆ ಸಂಪರ್ಕ: ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಆರು ರಾಜ್ಯಗಳ ಮೂಲಕ ಹಾದುಹೋಗುತ್ತದೆ ಮತ್ತು ಕೋಟಾ, ಇಂದೋರ್, ಜೈಪುರ, ಭೋಪಾಲ್, ವಡೋದರಾ ಮತ್ತು ಸೂರತ್‌ನಂತಹ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ.

13 ಬಂದರುಗಳು, ಎಂಟು ಪ್ರಮುಖ ವಿಮಾನ ನಿಲ್ದಾಣಗಳು ಮತ್ತು ಎಂಟು ಬಹು - ಮಾದರಿ ಲಾಜಿಸ್ಟಿಕ್ಸ್ ಪಾರ್ಕ್‌ಗಳ ಜೊತೆಗೆ ಮುಂಬರುವ ಹೊಸ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳಾದ ಜೆವಾರ್ ಏರ್‌ಪೋರ್ಟ್, ನವಿ ಮುಂಬೈ ಏರ್‌ಪೋರ್ಟ್ ಮತ್ತು ಜೆಎನ್​ಪಿಟಿ ಪೋರ್ಟ್‌ಗಳಿಗೂ ಸಹ ಈ ಮಾರ್ಗದಿಂದ ಉಪಯೋಗವಾಗಲಿದೆ.

ಈ ಮಾರ್ಗದಿಂದ ಎಲ್ಲಾ ಅಕ್ಕಪಕ್ಕದ ಪ್ರದೇಶಗಳ ಅಭಿವೃದ್ಧಿಯ ವೇಗವನ್ನೆ ಪಡೆಯಲಿವೆ. ದೇಶದ ಆರ್ಥಿಕ ಪರಿವರ್ತನೆಯಲ್ಲಿ ಪ್ರಮುಖ ಕೊಡುಗೆ ನೀಡುತ್ತದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ: ಈ ಕಾರ್ಯಕ್ರಮದಲ್ಲಿ 5,940 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ 247 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಯನ್ನೂ ಮೋದಿ ನೆರವೇರಿಸಲಿದ್ದಾರೆ. ಬೆಂಗಳೂರಿನಲ್ಲಿನ ಏರೋ ಇಂಡಿಯಾ - 2023ರ ಕಾರ್ಯಕ್ರಮವು "ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್" ಎಂಬ ಮೋದಿಯವರ ಆಶಯದ ಹಿನ್ನೆಲೆ ಸ್ವದೇಶಿ ಉಪಕರಣಗಳು, ತಂತ್ರಜ್ಞಾನಗಳನ್ನು ಪ್ರದರ್ಶನ ಮತ್ತು ವಿದೇಶಿ ಕಂಪನಿಗಳೊಂದಿಗೆ ಪಾಲುದಾರಿಕೆಯನ್ನು ರೂಪಿಸಲು ಕೇಂದ್ರೀಕರಿಸುತ್ತದೆ.

ಭಾರತೀಯ ರಕ್ಷಣಾ ವಲಯದಲ್ಲಿ ಸ್ವಾವಲಂಬನೆಗೆ ಪ್ರಧಾನ ಮಂತ್ರಿ ನೀಡಿರುವ ಉತ್ತೇಜನವನ್ನೂ ಸಹ ಪ್ರದರ್ಶಿಸಲ್ಪಡುತ್ತದೆ. ದೇಶದ ಪ್ರಗತಿ, ಯುಎವಿಗಳ ವಲಯದಲ್ಲಿನ ಬೆಳವಣಿಗೆ, ರಕ್ಷಣಾ ಬಾಹ್ಯಾಕಾಶ ಮತ್ತು ಭವಿಷ್ಯದ ತಂತ್ರಜ್ಞಾನಗಳನ್ನು ಪ್ರದರ್ಶನ ನಡೆಯಲಿದೆ ಎಂದು ಪಿಎಂ ಕಚೇರಿ ತಿಳಿಸಿದೆ.

ಇದನ್ನೂ ಓದಿ:ತ್ರಿಪುರಾ ದಕ್ಷಿಣ ಏಷ್ಯಾದ ಹೆಬ್ಬಾಗಿಲು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.