ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 11 ಗಂಟೆಗೆ ಅಹಮದಾಬಾದ್‌ನಲ್ಲಿ ಸರ್ದಾರ್ಧಾಮ್ ಭವನ (Sardardham Bhavan)ವನ್ನು ಉದ್ಘಾಟಿಸಲಿದ್ದಾರೆ. ಸರ್ದಾರ್ಧಂ 2 ನೇ ಹಂತದ ಕನ್ಯಾ ಛತ್ರಾಲಯ (ಬಾಲಕಿಯರ ಹಾಸ್ಟೆಲ್)ದ ಭೂಮಿ ಪೂಜೆಯನ್ನೂ ನೆರವೇರಿಸಲಿದ್ದಾರೆ.
ಸರ್ದಾರ್ಧಾಮ್, ಶೈಕ್ಷಣಿಕ ಮತ್ತು ಸಾಮಾಜಿಕ ಪರಿವರ್ತನೆ, ಸಮಾಜದ ದುರ್ಬಲ ವರ್ಗಗಳ ಏಳಿಗೆ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.
ಅಹಮದಾಬಾದ್‌ನಲ್ಲಿ ಸ್ಥಾಪಿಸಲಾಗಿರುವ ಸರ್ದಾರ್ಧಾಮ್ ಭವನವು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. 2 ಸಾವಿರ ವಿದ್ಯಾರ್ಥಿನಿಯರು ಉಳಿದುಕೊಳ್ಳಲು ಅನುಕೂಲವಾಗುವ ಕನ್ಯಾ ಛತ್ರಾಲಯವನ್ನು ನಿರ್ಮಿಸಲಾಗುತ್ತಿದೆ.
ಇದನ್ನೂ ಓದಿ: ರಾಷ್ಟ್ರಪತಿಯಿಂದ ಯುಪಿಯಲ್ಲಿ ರಾಷ್ಟ್ರೀಯ ಕಾನೂನು ಕಾಲೇಜು, ಹೈಕೋರ್ಟ್ ಕಟ್ಟಡಗಳಿಗೆ ಶಂಕುಸ್ಥಾಪನೆ
ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡ ಭಾಗವಹಿಸಲಿದ್ದಾರೆ.