ETV Bharat / bharat

10 ಲಕ್ಷ ಜನರಿಗೆ ಉದ್ಯೋಗ ನೀಡುವ ರೋಜ್‌ಗಾರ್ ಮೇಳಕ್ಕೆ ಅ.22ರಂದು ಮೋದಿ ಚಾಲನೆ - ದೇಶದಲ್ಲಿ ನಿರುದ್ಯೋಗ

ಪ್ರಧಾನಿ ಮೋದಿಯವರ ನಿರ್ದೇಶನದ ಮೇರೆಗೆ ಕೇಂದ್ರದ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳು ಮಂಜೂರಾದ ಹುದ್ದೆಗಳಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಕಾರ್ಯದಲ್ಲಿ ತೊಡಗಿವೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ(ಪಿಎಂಒ) ಹೇಳಿದೆ.

pm-modi-to-launch-drive-to-recruit-10-lakh-people
ಅ.22ರಂದು 10 ಲಕ್ಷ ಜನರನ್ನು ಭರ್ತಿ ಮಾಡುವ ರೋಜ್‌ಗಾರ್ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ
author img

By

Published : Oct 20, 2022, 3:12 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ಲಕ್ಷ ಜನರನ್ನು ವಿವಿಧ ಹುದ್ದೆಗಳಿಗೆ ಭರ್ತಿ ಮಾಡುವ ರೋಜ್‌ಗಾರ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಸಮಾರಂಭದಲ್ಲಿ 75 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ (ಪಿಎಂಒ) ತಿಳಿಸಿದೆ.

ಈ ಕುರಿತು ಗುರುವಾರ ಪಿಎಂಒ ಹೇಳಿಕೆ ಬಿಡುಗಡೆ ಮಾಡಿದ್ದು, ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನ ಮಂತ್ರಿಯವರ ಬದ್ಧತೆಯನ್ನು ನಿರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದೆ.

ಪ್ರಧಾನಿ ಮೋದಿಯವರ ನಿರ್ದೇಶನದ ಮೇರೆಗೆ ಕೇಂದ್ರದ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳು ಮಂಜೂರಾದ ಹುದ್ದೆಗಳಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಕಾರ್ಯ ಮಾಡುತ್ತಿವೆ. ದೇಶದಾದ್ಯಂತ ಕೇಂದ್ರ ಸರ್ಕಾರದ 38 ಸಚಿವಾಲಯಗಳ ವ್ಯಾಪ್ತಿಯಲ್ಲಿರುವ ಖಾಲಿ ಹುದ್ದೆಗಳಿಗೆ ಹೊಸ ನೇಮಕಾತಿ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

ಇದರಲ್ಲಿ ಗ್ರೂಪ್ ಎ, ಬಿ (ಗೆಜೆಟೆಡ್) ಹಾಗೂ ಗ್ರೂಪ್ ಬಿ (ನಾನ್ ಗೆಜೆಟೆಡ್) ಮತ್ತು ಸಿ ಗುಂಪಿನಲ್ಲಿ ವಿವಿಧ ಹಂತ ಹುದ್ದೆಗಳಾಗಿವೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್ ಇನ್ಸ್‌ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಕ್ಲರ್ಕ್, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಹುದ್ದೆಗಳು ಸೇರಿವೆ ಎಂದು ಪಿಎಂಒ ವಿವರಿಸಿದೆ.

ಈ ನೇಮಕಾತಿಗಳನ್ನು ಸ್ವತಃ ಸಚಿವಾಲಯಗಳು ಮತ್ತು ಇಲಾಖೆಗಳು ಮಾಡಬಹುದು ಅಥವಾ ಯುಪಿಎಸ್​ಸಿ, ಎಸ್​ಎಸ್​ಸಿ ಮತ್ತು ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡಲಾಗುತ್ತದೆ. ತ್ವರಿತ ನೇಮಕಾತಿಗಾಗಿ ಆಯ್ಕೆ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ ಮತ್ತು ತಂತ್ರಜ್ಞಾನವನ್ನು ಸಕ್ರಿಯಗೊಳಿಸಲಾಗಿದೆ ಎಂದೂ ಪಿಎಂಒ ಮಾಹಿತಿ ನೀಡಿದೆ.

ಇದನ್ನೂ ಓದಿ: ಭೂಮಿ ಉಳಿಯಲು 'ಪರಿಸರಕ್ಕಾಗಿ ಜೀವನ'.. ಲೈಫ್​ ಜಾಗತಿಕ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.