ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020 (NEP 2020) ವಾರ್ಷಿಕೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ್ದು, ಈ ವೇಳೆ ಹಲವು ಯೋಜನೆಗಳಿಗೆ ಚಾಲನೆ ನೀಡಿದರು. ಪ್ರಮುಖವಾಗಿ 11 ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಶಿಕ್ಷಣ ನೀಡಲಾಗುವುದು ಎಂದು ಘೋಷಣೆ ಮಾಡಿದರು.
ವಿದ್ಯಾಪ್ರವೇಶ್ಗೆ ಚಾಲನೆ ನೀಡಿದ ಪ್ರಧಾನಿ ಮೋದಿ, ಭಾರತದ ಹೊಸ ಶಿಕ್ಷಣ ನೀತಿ ಮೂಲಕ ವಿಶೇಷ ಹೆಗ್ಗುರುತು ಆರಂಭಗೊಂಡಿದ್ದು, ಇದರಿಂದ ಹೊಸ ಬದಲಾವಣೆ ಹಾಗೂ ಹೊಸ ಹೊಸ ಯೋಜನೆ ಜಾರಿಗೆ ತರಲು ಸಹಕಾರಿಯಾಗುತ್ತದೆ ಎಂದರು. ಈ ಹಿಂದೆ ಉತ್ತಮ ಶಿಕ್ಷಣಕ್ಕೋಸ್ಕರ ಭಾರತದ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಬೇಕಾಗಿತ್ತು. ಆದರೆ ಇನ್ಮುಂದೆ ವಿದೇಶಿ ವಿದ್ಯಾರ್ಥಿಗಳು ಭಾರತಕ್ಕೆ ಬಂದು ಉನ್ನತ ಶಿಕ್ಷಣ ಕಲಿಯುತ್ತಾರೆ ಎಂದು ಹೇಳಿದರು.
-
I am happy to share that there are 14 engineering colleges in 8 states which offer education in 5 different Indian languages including Hindi-Tamil, Telugu, Marathi, and Bangla: PM Modi pic.twitter.com/TbASJuP0Ec
— ANI (@ANI) July 29, 2021 " class="align-text-top noRightClick twitterSection" data="
">I am happy to share that there are 14 engineering colleges in 8 states which offer education in 5 different Indian languages including Hindi-Tamil, Telugu, Marathi, and Bangla: PM Modi pic.twitter.com/TbASJuP0Ec
— ANI (@ANI) July 29, 2021I am happy to share that there are 14 engineering colleges in 8 states which offer education in 5 different Indian languages including Hindi-Tamil, Telugu, Marathi, and Bangla: PM Modi pic.twitter.com/TbASJuP0Ec
— ANI (@ANI) July 29, 2021
ವಿದ್ಯಾರ್ಥಿಗಳು ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಕಲಿಯುವ ಉದ್ದೇಶದಿಂದ 11 ಭಾಷೆಗಳಲ್ಲಿ ಶಿಕ್ಷಣ ನೀಡಲು ಕೇಂದ್ರ ನಿರ್ಧರಿಸಿದ್ದು, ಇದರಿಂದ ಬಡ, ದಲಿತ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ಸುಲಭವಾಗಿ ಶಿಕ್ಷಣ ಸಿಗಲಿದೆ. ಇದಕ್ಕಾಗಿ ನಾನು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮಾತೃ ಭಾಷೆಯಲ್ಲಿ ಶಿಕ್ಷಣ ಸಿಗುವುದರಿಂದ ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದ್ದು, ಹಿಂದೂಳಿದ ವರ್ಗದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
-
Addressing a programme to mark a year of the National Education Policy. #TransformingEducation https://t.co/65x9i0B0g1
— Narendra Modi (@narendramodi) July 29, 2021 " class="align-text-top noRightClick twitterSection" data="
">Addressing a programme to mark a year of the National Education Policy. #TransformingEducation https://t.co/65x9i0B0g1
— Narendra Modi (@narendramodi) July 29, 2021Addressing a programme to mark a year of the National Education Policy. #TransformingEducation https://t.co/65x9i0B0g1
— Narendra Modi (@narendramodi) July 29, 2021
ದೇಶದ ವಿವಿಧ ಹಳ್ಳಿಗಳಿಂದ ಬಂದು ಶಿಕ್ಷಣ ಕಲಿತಿರುವ ಅನೇಕರು ಇದೀಗ ಕ್ರೀಡೆ, ರೊಬೊಟಿಕ್ಸ್, ತಂತ್ರಜ್ಞಾನ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಸೌಲಭ್ಯ ವಂಚಿತರಾಗಬಾರದು ಎಂದು ನಮೋ ತಿಳಿಸಿದ್ರು.
14 ಎಂಜಿನಿಯರಿಂಗ್ ಕಾಲೇಜ್
ಇದೇ ವೇಳೆ ದೇಶದ 8 ರಾಜ್ಯಗಳಲ್ಲಿ 14 ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಮಾಹಿತಿ ಹಂಚಿಕೊಂಡಿರುವ ನಮೋ, 5 ಭಾಷೆಗಳಲ್ಲಿ ಇಲ್ಲಿ ಶಿಕ್ಷಣ ಸಿಗಲಿದೆ ಎಂದರು. ಪ್ರಮುಖವಾಗಿ ಹಿಂದಿ, ತಮಿಳು, ತೆಲುಗು, ಮರಾಠಿ ಹಾಗೂ ಬಾಂಗ್ಲಾ ಭಾಷೆಗಳಲ್ಲಿ ಶಿಕ್ಷಣ ಸಿಗಲಿದೆ ಎಂದು ತಿಳಿಸಿದರು.