ETV Bharat / bharat

ನಾಳೆ ಸಂವಿಧಾನ ದಿನಾಚರಣೆ: ಪ್ರಧಾನಿ, ರಾಷ್ಟ್ರಪತಿ ಭಾಗಿ

1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ರಾಷ್ಟ್ರವು ನವೆಂಬರ್ 26ರಂದು ಸಂವಿಧಾನ ದಿನವನ್ನಾಗಿ ಆಚರಣೆ ಮಾಡುತ್ತದೆ.

PM Modi to participate in Constitution Day, ಸಂವಿಧಾನ ದಿನ,

author img

By

Published : Nov 25, 2021, 8:51 AM IST

ನವದೆಹಲಿ: ನಾಳೆ ದೇಶಾದ್ಯಂತ ಸಂವಿಧಾನ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಸಂಸತ್ತು ಮತ್ತು ವಿಜ್ಞಾನ ಭವನದಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಸಂಸತ್ತಿನಲ್ಲಿ ಆಯೋಜಿಸಿರುವ ಕಾರ್ಯಕ್ರಮ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಲೋಕಸಭಾ ಸ್ಪೀಕರ್ ಭಾಷಣ ಮಾಡಲಿದ್ದಾರೆ.

ತಿದ್ದುಪಡಿಗಳನ್ನ ಒಳಗೊಂಡ ನವೀಕೃತ ಆವೃತ್ತಿ ಬಿಡುಗಡೆ

ರಾಷ್ಟ್ರಪತಿಗಳ ಭಾಷಣದ ನಂತರ ಸಂವಿಧಾನದ ಪ್ರಸ್ತಾವನೆಯನ್ನು ಓದಲಾಗುತ್ತದೆ. ಈ ವೇಳೆ ರಾಷ್ಟ್ರಪತಿಯವರು ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಗಳ ಡಿಜಿಟಲ್ ಆವೃತ್ತಿಯನ್ನು ಬಿಡುಗಡೆ ಮಾಡಲಿದ್ದಾರೆ. ಇದರ ಜೊತೆಗೆ ಭಾರತದ ಸಂವಿಧಾನದಲ್ಲಿ ಈವರೆಗೆ ಆದ ತಿದ್ದುಪಡಿಗಳನ್ನು ಒಳಗೊಂಡ ನವೀಕೃತ ಆವೃತ್ತಿಯೂ ಬಿಡುಗಡೆ ಆಗಲಿದೆ.

ಕೇಂದ್ರ ಸರ್ಕಾರದ ಅಧಿಕೃತ ಹೇಳಿಕೆಯ ಪ್ರಕಾರ ಅವರು 'ಸಾಂವಿಧಾನಿಕ ಪ್ರಜಾಪ್ರಭುತ್ವದ ಆನ್‌ಲೈನ್ ರಸಪ್ರಶ್ನೆ'ಯನ್ನು ಸಹ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಉದ್ಘಾಟಿಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸುಪ್ರೀಂಕೋರ್ಟ್ ಆಯೋಜಿಸಿರುವ ಎರಡು ದಿನಗಳ ಸಂವಿಧಾನ ದಿನಾಚರಣೆಯನ್ನು ನಾಳೆ ಸಂಜೆ 5.30ಕ್ಕೆ ನವದೆಹಲಿಯ ವಿಜ್ಞಾನ ಭವನದ ಪ್ಲೀನರಿ ಹಾಲ್‌ನಲ್ಲಿ ಉದ್ಘಾಟಿಸಲಿದ್ದು, ನಂತರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಗಣ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕೃತ ಹೇಳಿಕೆ ಬಿಡುಗಡೆಯಾಗಿದೆ.

ಸುಪ್ರೀಂಕೋರ್ಟ್​ನ ಎಲ್ಲ ನ್ಯಾಯಾಧೀಶರು, ಎಲ್ಲಾ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹಿರಿಯ ನ್ಯಾಯಾಧೀಶರು, ಭಾರತದ ಸಾಲಿಸಿಟರ್ ಜನರಲ್ ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

ಸಂವಿಧಾನ ದಿನಾಚರಣೆಯ ಹಿನ್ನೆಲೆ: 1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ರಾಷ್ಟ್ರವು ನವೆಂಬರ್ 26ರಂದು ಸಂವಿಧಾನ ದಿನವನ್ನಾಗಿ ಆಚರಣೆ ಮಾಡುತ್ತದೆ. 2015ರಿಂದ ಸಂವಿಧಾನ ದಿನವನ್ನು ಆಚರಣೆ ಮಾಡಲು ಭಾರತ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: Drug war: ಮೂವರನ್ನು ಕೊಂದು, ಹೆಣಗಳನ್ನು ನೇತುಹಾಕಿದ್ದು ಯಾಕೆ ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.