ನವದೆಹಲಿ: ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರ ಮುಗಿಸಿ, ಹಿಂದಿರುಗಿದ ತಕ್ಷಣ ಸಭೆಯ ಅಧ್ಯಕ್ಷತೆ ವಹಿಸುವ ನಿರೀಕ್ಷೆಯಿದೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ನಂತರ ಸಾವಿರಾರು ವಿದ್ಯಾರ್ಥಿಗಳು ಅಲ್ಲಿ ಸಿಲುಕಿಕೊಂಡಿದ್ದಾರೆ. ಭಾರತವು ಅವರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ ಮತ್ತು ಶನಿವಾರದಿಂದ 900 ಕ್ಕೂ ಹೆಚ್ಚು ಜನರನ್ನು ಮರಳಿ ಕರೆತರಲಾಗಿದೆ.
ಇದನ್ನೂ ಓದಿ: ಶಾಂತಿ ಮಾತುಕತೆ ನಡೆಸಲು ಸಿದ್ಧವಾದ ಉಕ್ರೇನ್ - ರಷ್ಯಾ: ಸ್ಥಳ ನಿಗದಿ
ಖಾರ್ಕೀವ್, ಸುಮಿ ಮತ್ತು ಕೀವ್ ನಗರಗಳಲ್ಲಿನ ಜನರು ರೈಲ್ವೆ ನಿಲ್ದಾಣಗಳ ಕಡೆಗೆ ಹೋಗದಂತೆ ಅಥವಾ ಹೊರಗೆ ಹೋಗದಂತೆ ಕೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು ಎರಡನೇ ಸಲಹೆಯನ್ನು ನೀಡಿದೆ.
ಈಗಾಗಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ನಾಯಕ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮೋದಿ ಮಾತನಾಡಿದ್ದು, ಮಾತುಕತೆ ಮೂಲಕ ಬಿಕ್ಕಟ್ಟನ್ನು ಶಮನಗೊಳಿಸುವಂತೆ ಮನವಿ ಮಾಡಿದ್ದಾರೆ.