ETV Bharat / bharat

ಪಿಎಂ ಕಿಸಾನ್​ ನಿಧಿ: ರೈತರ ಬ್ಯಾಂಕ್ ಖಾತೆಗಳಿಗೆ ಇಂದು 9ನೇ ಕಂತು ಬಿಡುಗಡೆ - Prime minister Narendra Modi

ಪಿಎಂ-ಕಿಸಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ 9ನೇ ಕಂತಿನ ಎರಡು ಸಾವಿರ ರೂ. ಹಣ ಜಮೆಯಾಗಲಿದ್ದು, ಇಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.

PM-KISAN scheme
ಪಿಎಂ ಕಿಸಾನ್​ ನಿಧಿ
author img

By

Published : Aug 9, 2021, 7:36 AM IST

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಬ್ಯಾಂಕ್ ಖಾತೆಗಳಿಗೆ 9ನೇ ಕಂತಿನ ಎರಡು ಸಾವಿರ ರೂ. ಹಣ ಇಂದು ಜಮೆಯಾಗಲಿದೆ. ಈ ಆರ್ಥಿಕ ಲಾಭವನ್ನು ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪ್ರಧಾನಮಂತ್ರಿ ಕಾರ್ಯಾಲಯ, 'ಕೇಂದ್ರ ಸರ್ಕಾರ ವಾರ್ಷಿಕವಾಗಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರದಂತೆ ಒಟ್ಟು ಆರು ಸಾವಿರ ರೂಪಾಯಿಗಳನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡುತ್ತಿದೆ. ಸುಮಾರು 9 ಕೋಟಿ 75 ಲಕ್ಷ ರೈತರಿಗೆ ಎರಡು ಸಾವಿರ ರೂ ಜಮೆಯಾಗಲಿದೆ. ದೇಶದ 9 ಕೋಟಿ 75 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ 19 ಸಾವಿರದ 500 ಕೋಟಿ ರೂಪಾಯಿ ಜಮೆ ಮಾಡಲಾಗುವುದು' ಎಂದು ತಿಳಿಸಿದೆ.

ಈ ಸಂದರ್ಭದಲ್ಲಿ ಪ್ರಧಾನಿ ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸುತ್ತಾರೆ. ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪಿಎಂ-ಕಿಸಾನ್ ಯೋಜನೆಯಡಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಪ್ರಯೋಜನವನ್ನು ಒದಗಿಸಲಾಗುತ್ತಿದೆ. ಈ ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತಿದೆೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಭಾಗವಹಿಸಲಿದ್ದಾರೆ. ಈ ಹಿಂದೆ ಅಂದರೆ ಮೇ 14 ರಂದು ಪ್ರಧಾನ ಮಂತ್ರಿ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ 8 ನೇ ಕಂತಿನ ಆರ್ಥಿಕ ಲಾಭವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.