ನವದೆಹಲಿ: ಯುದ್ಧ ಪೀಡಿತ ಉಕ್ರೇನ್ ದೇಶದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ರಷ್ಯಾ ಯುದ್ಧ ಸಾರಿರುವುದರಿಂದ ಉಕ್ರೇನ್ ನಲುಗಿದೆ. ಇದರಿಂದ ಉಕ್ರೇನ್ನಲ್ಲಿ ಭಾರತೀಯರು ಸಿಲುಕಿದ್ದು, ಈಗಾಗಲೇ ಬಹುಪಾಲು ವಿದ್ಯಾರ್ಥಿಗಳನ್ನು ಭಾರತಕ್ಕೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ: ಸಂಧಾನಕ್ಕೆ ಇಸ್ರೇಲ್ ಪ್ರಯತ್ನ
ಇನ್ನು, ಯುದ್ಧ ಆರಂಭವಾದ ಬಳಿಕ ಎರಡನೇ ಬಾರಿಗೆ ಉಕ್ರೇನ್ ಅಧ್ಯಕ್ಷರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ಮಾತನಾಡಲಿದ್ದಾರೆ. ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೂ ಪ್ರಧಾನಿ ಮೋದಿ ಮಾತನಾಡಿದ್ದರು.