ETV Bharat / bharat

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು BRICS ಶೃಂಗಸಭೆ - ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ

ಇಂದು ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್​ ದೇಶಗಳ 13 ನೇ ಶೃಂಗಸಭೆ ನಡೆಯಲಿದೆ. ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

BRICS
BRICS
author img

By

Published : Sep 9, 2021, 10:01 AM IST

ನವದೆಹಲಿ: ಇಂದು ಬ್ರಿಕ್ಸ್ ದೇಶಗಳ 13ನೇ ಶೃಂಗಸಭೆ ನಡೆಯಲಿದ್ದು, ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಭಾರತ, 2021ರ ಬ್ರಿಕ್ಸ್ ದೇಶಗಳ ಸಮಾವೇಶದ ಅಧ್ಯಕ್ಷತೆ ವಹಿಸಿದೆ.

ಈ ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಪಾಲ್ಗೊಳ್ಳಲಿದ್ದಾರೆ.

ಸಮಾವೇಶದ ಅಧ್ಯಕ್ಷತೆ ವಹಿಸಿರುವ ಭಾರತ, ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಡಿಜಿಟಲ್ ಮತ್ತು ತಂತ್ರಜ್ಞಾನ ಸಾಧನಗಳ ಬಳಕೆಗೆ ಒತ್ತು ನೀಡಲಿದೆ. ಅಫ್ಘಾನಿಸ್ತಾನದ ಇತ್ತೀಚಿನ ಪರಿಸ್ಥಿತಿಯನ್ನು ಕುರಿತು ಈ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆಯಿದೆ.

ಸಭೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ನ್ಯೂ ಡೆವಲಪ್​ಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೊಸ್ ಟ್ರಾಯ್‌ಜೊ, ಬ್ರಿಕ್ಸ್ ಉದ್ಯಮ ಮಂಡಳಿ ಅಧ್ಯಕ್ಷ ಓಂಕಾರ್ ಕನ್ವರ್, ಬ್ರಿಕ್ಸ್ ಮಹಿಳಾ ಉದ್ಯಮ ಮೈತ್ರಿ ಅಧ್ಯಕ್ಷೆ ಸಂಗೀತಾ ರೆಡ್ಡಿ ಶೃಂಗಸಭೆಯಲ್ಲಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ.

ಇದನ್ನೂ ಓದಿ : ಬೆಳಗಾವಿಯಲ್ಲಿ MES ಅವನತಿ.. ಶಿವಸೇನೆ ಕಂಗಾಲು: ಬಿಜೆಪಿ ವಿರುದ್ಧ ರಾವತ್​ ಕೆಂಡಾಮಂಡಲ

ಬ್ರಿಕ್ಸ್ ಶೃಂಗಸಭೆಗೆ ಎರಡನೇ ಬಾರಿಗೆ ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. 2016 ರ ಆರಂಭದಲ್ಲಿ ಅವರು ಗೋವಾ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಬ್ರಿಕ್ಸ್‌ನ 15 ನೇ ಸಂಸ್ಥಾಪನಾ ವರ್ಷವನ್ನು ಆಚರಿಸುತ್ತಿರುವ ಈ ಸಮಯದಲ್ಲಿ ಭಾರತವು ಬ್ರಿಕ್ಸ್‌ ಸಮಾವೇಶದ ಅಧ್ಯಕ್ಷತೆ ವಹಿಸುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.