ETV Bharat / bharat

ಯಡಿಯೂರಪ್ಪ ಸೇರಿ ದಕ್ಷಿಣ ರಾಜ್ಯಗಳ ಸಿಎಂಗಳೊಂದಿಗೆ ಮೋದಿ ಚರ್ಚೆ

ದೇಶದಲ್ಲಿ ಮೂರನೇ ಹಂತದ ಕೋವಿಡ್ ಅಲೆ ಭೀತಿ ಕಾರಣ, ಪ್ರಧಾನಿ ಮೋದಿ ವಿವಿಧ ರಾಜ್ಯದ ಸಿಎಂಗಳೊಂದಿಗೆ ಸಭೆ ನಡೆಸುತ್ತಿದ್ದು, ಇಂದು ಕೂಡ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

PM Modi video conversation
PM Modi video conversation
author img

By

Published : Jul 16, 2021, 5:52 AM IST

ನವದೆಹಲಿ: ಮುಖ್ಯಮಂತ್ರಿ ಬಿಎಸ್​ ಯಡಿಯುರಪ್ಪ ಸೇರಿದಂತೆ ದಕ್ಷಿಣ ರಾಜ್ಯಗಳ ಆರು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಹಾಗೂ ಲಸಿಕೆ ಹಂಚಿಕೆ ಹಾಗೂ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಒಡಿಶಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮೋದಿ ಸಭೆಯಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿನ ಕೋವಿಡ್​ ಪರಿಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಪ್ರಮುಖವಾಗಿ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಹಾವಳಿ ಜೋರಾಗಿದ್ದು, ಮತ್ತಷ್ಟು ಸೂಚನೆ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕೇರಳದಲ್ಲಿ ಝಿಕಾ ವೈರಸ್​ ಹಾವಳಿ ಕಂಡು ಬಂದಿರುವ ಕಾರಣ ಮೋದಿ ಮಹತ್ವದ ವಿಷಯ ಹಂಚಿಕೊಳ್ಳುವ ನಿರೀಕ್ಷೆ ಇದೆ.

ಬೆಳಗ್ಗೆ 11 ಗಂಟೆಗೆ ಸಭೆ ಆಯೋಜನೆಗೊಂಡಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರೂ ಇದರಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಕೊರೊನಾ ವೈರಸ್​ ಹತೋಟಿ ಬಗ್ಗೆ ತೆಗೆದುಕೊಂಡಿರುವ ನಿರ್ಧಾರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿರಿ: ಕೃನಾಲ್​ ಪಾಂಡ್ಯಾ ಜತೆ ಕಿರಿಕ್​:ಬರೋಡಾ ತಂಡಕ್ಕೆ ಗುಡ್​ಬೈ ಹೇಳಿ ರಾಜಸ್ಥಾನ ಸೇರಿದ ದೀಪಕ್ ಹೂಡಾ!

ರಾಜ್ಯದಲ್ಲಿ ಮೂರನೇ ಹಂತದ ಕೋವಿಡ್ ಲಗ್ಗೆ ಹಾಕಲಿದೆ ಎಂದು ಈಗಾಗಲೇ ತಜ್ಞರು ಸೂಚನೆ ನೀಡಿರುವ ಕಾರಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಹೀಗಾಗಿ ಮೋದಿ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.