ETV Bharat / bharat

ಜಮ್ಮು- ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಬೇರುಗಳು ಆಳವಾಗಿವೆ: ಪ್ರಧಾನಿ ಮೋದಿ - ಜಮ್ಮು ಕಾಶ್ಮೀರದಲ್ಲಿ ಪ್ರಧಾನಿ ಮೋದಿ

ಜಮ್ಮು ಕಾಶ್ಮೀರಕ್ಕಿದ್ದ ಸಾಂವಿಧಾನಿಕ ವಿಶೇಷಾಧಿಕಾರವನ್ನು 2019ರಲ್ಲಿ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಣಿವೆ ನಾಡಿಗೆ ಭೇಟಿ ನೀಡಿದ್ದಾರೆ. ಪಂಚಾಯತ್​ ರಾಜ್ ದಿನದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜನರನ್ನುದ್ದೇಶಿಸಿ ಮಾತನಾಡಿದರು.

pm-modi
ಪ್ರಧಾನಿ ಮೋದಿ
author img

By

Published : Apr 24, 2022, 3:09 PM IST

Updated : Apr 24, 2022, 3:42 PM IST

ಜಮ್ಮು- ಕಾಶ್ಮೀರ: 370ನೇ ವಿಧಿ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೇಂದ್ರಾಡಳಿತ ಪ್ರದೇಶವಾದ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದರು. ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಮ್ಮು -ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಆಳವಾಗಿ ಬೇರೂರಿದೆ. ಅದನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಇಲ್ಲಿನ ಯುವಜನತೆ ಅವರ ಪೂರ್ವಿಕರು ಪಟ್ಟ ಕಷ್ಟಗಳನ್ನು ಅನುಭವಿಸಬಾರದು. ಅವರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದರು.

ಈ ಬಾರಿ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿದೆ. ಇದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಇಲ್ಲಿನ ಪ್ರಜಾಪ್ರಭುತ್ವವು ತಳಮಟ್ಟದಲ್ಲಿ ಬೆಳೆದಿದೆ ಎಂಬುದು ಹೆಮ್ಮೆಯ ವಿಷಯ. ಅದಕ್ಕಾಗಿಯೇ ನಾನು ಇಲ್ಲಿಂದಲೇ ದೇಶದಾದ್ಯಂತ ಇರುವ ಪಂಚಾಯತ್‌ಗಳೊಂದಿಗೆ ಸಂವಹನ ನಡೆಸುತ್ತಿದ್ದೇನೆ ಎಂದರು.

ಕೇಂದ್ರಾಡಳಿತ ಪ್ರದೇಶ ಅಭಿವೃದ್ಧಿಯ ಹೊಸ ಶಕೆಯನ್ನು ಬರೆಯಲು ಸಜ್ಜಾಗಿದೆ. ಸ್ವಾತಂತ್ರ್ಯ ಬಂದ 7 ದಶಕಗಳ ಅವಧಿಯಲ್ಲಿ ಇಲ್ಲಿ ಕೇವಲ 17,000 ಕೋಟಿ ರೂಪಾಯಿ ಖಾಸಗಿ ಹೂಡಿಕೆಯನ್ನು ಮಾತ್ರ ಮಾಡಲಾಗಿತ್ತು. ಇದೀಗ ಅದು 38,000 ಕೋಟಿಗೆ ತಲುಪಿದೆ. ಇದು ಇಲ್ಲಿನ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಪ್ರಧಾನಿ ಹೇಳಿದರು.

'ಏಕ್ ಭಾರತ್, ಶ್ರೇಷ್ಠ ಭಾರತ'ವು ಇಡೀ ದೇಶವನ್ನು ಒಗ್ಗೂಡಿಸುತ್ತದೆ. ಇದು ಕಾಶ್ಮೀರವನ್ನು ಒಳಗೊಂಡಂತೆ ಎಲ್ಲ ರಾಜ್ಯಗಳನ್ನೂ ಒಟ್ಟಾಗಿಸುತ್ತದೆ. ಇದೇ ನಮ್ಮ ಸರ್ಕಾರ ಗುರಿ. ಕಳೆದ 2-3 ವರ್ಷಗಳಲ್ಲಿ ಕಾಶ್ಮೀರ ಕಣಿವೆಯಲ್ಲಾದ ಬದಲಾವಣೆಗಳು ಹೊಸ ಭಾಷ್ಯ ಬರೆದಿವೆ. ಇಲ್ಲಿ ಎಲ್ಲ ಆಯಾಮಗಳಲ್ಲೂ ಅಭಿವೃದ್ಧಿ ಪರ್ವ ಶುರುವಾಗಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರು ಜಮ್ಮು- ಕಾಶ್ಮೀರ ಭೇಟಿ ಹಿನ್ನೆಲೆಯಲ್ಲಿ ಉಗ್ರರ ದಾಳಿಯ ಮಾಹಿತಿ ಲಭ್ಯವಾಗಿತ್ತು. ನಿನ್ನೆಯಷ್ಟೇ ಇಲ್ಲಿನ ಸುಂಜ್ವಾನ್​ ಎಂಬಲ್ಲಿ ನಡೆದ ಘಟನೆಯಲ್ಲಿ ಓರ್ವ ಸಿಐಎಸ್​ಎಫ್​ ಯೋಧ ಹುತಾತ್ಮರಾದರೆ, ಇಬ್ಬರು ಜೈಶ್​ ಸಂಘಟನೆಯ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: ರಾಣಾ ದಂಪತಿಗೆ 14 ದಿನಗಳ ನ್ಯಾಯಾಂಗ ಬಂಧನ

Last Updated : Apr 24, 2022, 3:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.