ETV Bharat / bharat

PM Modi on NEP: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ 3 ವರ್ಷ.. ಕಲಿಕೆಯಲ್ಲಿ ಮಾತೃಭಾಷೆ ಪಾತ್ರ ಮಹತ್ವದ್ದು: ಪ್ರಧಾನಿ ಮೋದಿ

ರಾಷ್ಟ್ರೀಯ ಶಿಕ್ಷಣ ನೀತಿಗೆ ಮೂರು ವರ್ಷ ತುಂಬಿ ಹಿನ್ನೆಲೆಯಲ್ಲಿ, ಅದು ಸಾಧಿಸುತ್ತಿರುವ ಪ್ರಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮಕ್ಕೂ ಮೊದಲು ಮಕ್ಕಳೊಂದಿಗೆ ಸಂವಾದ ನಡೆಸಿದರು.

ಪ್ರಧಾನಿ ಮೋದಿ
ಪ್ರಧಾನಿ ಮೋದಿ
author img

By

Published : Jul 29, 2023, 1:48 PM IST

ನವದೆಹಲಿ: ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದರಿಂದ ಮಕ್ಕಳ ನೈಜ ಶಕ್ತಿ ಹೊರಬರುತ್ತದೆ. ಇದಕ್ಕೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಅಧ್ಯಯನದಿಂದ ವಿಜ್ಞಾನ ಮತ್ತು ತಂತ್ರಜ್ಞಾನದವರೆಗೆ ಪ್ರತಿಯೊಂದು ವಿಷಯವೂ ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ. ಅದಕ್ಕೆ ಕಾರಣವಾಗಿದ್ದು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ. ಮಹತ್ವದ ಯೋಜನೆ ಮೂರು ವರ್ಷ ಪೂರೈಸಿ ಯಶಸ್ವಿಯಾಗಿದೆ ಎಂದು ಹೇಳಿದರು.

ಮಾತೃಭಾಷೆಯಲ್ಲಿ ಶಿಕ್ಷಣ ಪಡೆದರೆ ವಿದ್ಯಾರ್ಥಿಯ ನಿಜವಾದ ಶಕ್ತಿ ಹೊರಬರುತ್ತದೆ. ಇದರಿಂದ ಯುವಜನತೆಗೆ ಸ್ವಾಭಾವಿಕ ನ್ಯಾಯ ಸಿಗುತ್ತದೆ. ಬಾಹ್ಯಾಕಾಶ ವಿಜ್ಞಾನ, ಸಾಫ್ಟ್‌ವೇರ್ ತಂತ್ರಜ್ಞಾನ ಮತ್ತು ಇತರೆ ಕ್ಷೇತ್ರಗಳಲ್ಲಿ ಭಾರತೀಯರು ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಇದೇ ವೇಳೆ ತಿಳಿಸಿದರು.

ಮಕ್ಕಳೊಂದಿಗೆ ಮೋದಿ ಸಂವಾದ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯಾಗಿ ಮೂರು ವರ್ಷಗಳಾದ ಹಿನ್ನೆಲೆಯಲ್ಲಿ ಇಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಶಿಕ್ಷಾ ಸಮಾಗಂ ಉದ್ಘಾಟನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು. ಎನ್​ಇಪಿಯಲ್ಲಿನ ವಿಷಯಗಳ ಬಗ್ಗೆ ಮಕ್ಕಳನ್ನು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಮೋದಿ ಅವರು ಪ್ರಧಾನಮಂತ್ರಿ ಶ್ರೀ ಯೋಜನೆಯಡಿ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ. 12 ಭಾರತೀಯ ಭಾಷೆಗಳಿಗೆ ಭಾಷಾಂತರಿಸಿದ ಶಿಕ್ಷಣ ಮತ್ತು ಕೌಶಲ್ಯ ಪಠ್ಯಕ್ರಮ ಪುಸ್ತಕಗಳನ್ನು ಪ್ರಧಾನಿ ಇದೇ ವೇಳೆ ಬಿಡುಗಡೆ ಮಾಡಲಿದ್ದಾರೆ. ಇಲ್ಲಿನ ಹಳೆ ಪ್ರಗತಿ ಮೈದಾನದಲ್ಲಿರುವ ಹೊಸದಾಗಿ ನಿರ್ಮಿಸಲಾಗಿರುವ ಭಾರತ ಮಂಟಪದಲ್ಲಿ ಎರಡು ದಿನಗಳ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಕಾರ್ಯಕ್ರಮ ನಡೆಯುತ್ತಿದೆ. ಶಾಲೆಯೊಂದಕ್ಕೆ ಪ್ರಧಾನಿ ಭೇಟಿ ನೀಡಿದ ವೇಳೆ ಅವರೊಂದಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಇದ್ದರು.

ಎನ್​​ಇಪಿ ವಿಶೇಷತೆ: ದೇಶ ಸ್ವಾತಂತ್ರ್ಯದ ಅಮೃತೋತ್ಸವ ಕಾಲದಲ್ಲಿದೆ. 5 ಟ್ರಿಲಿಯನ್ ಆರ್ಥಿಕತೆಯ ಗುರಿಯನ್ನು ಹಾಕಿಕೊಳ್ಳಲಾಗಿದೆ. ಜ್ಞಾನ- ಆಧಾರಿತ ನಾಯಕತ್ವ ಮತ್ತು ನುರಿತ ಕಾರ್ಯಪಡೆಯ ನೆರವಿನಿಂದ ಆರ್ಥಿಕತೆಯ ಎಲ್ಲಾ ಕ್ಷೇತ್ರಗಳನ್ನು ಬಲಪಡಿಸಬೇಕು. ಎನ್​ಇಪಿ 2020 ಅಂತಹ ಜವಾಬ್ದಾರಿಗಾಗಿ ಯುವಕರನ್ನು ಬೆಳೆಸಲು ಸಹಾಯ ಮಾಡುತ್ತದೆ. ಈ ಹಾದಿಯನ್ನು ಸುಗಮಗೊಳಿಸುತ್ತದೆ. ಭವಿಷ್ಯದ ಉದಯೋನ್ಮುಖ ಉದ್ಯೋಗ ಕ್ಷೇತ್ರಗಳಿಗೆ ಅವರನ್ನು ಈ ನೀತಿ ಸಿದ್ಧಪಡಿಸುತ್ತದೆ.

ವಿಮರ್ಶಾತ್ಮಕ ಚಿಂತನೆ ಮತ್ತು ಸಮಸ್ಯೆ ಪರಿಹಾರದಂತಹ ಉನ್ನತ ಅರಿವಿನ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಈ ನೀತಿಯು ಬೆಳೆಸುತ್ತದೆ. ಬುದ್ದಿಮತ್ತೆ ಮತ್ತು ಅನುಷ್ಠಾನದ ಕಾರ್ಯತಂತ್ರವನ್ನು ರೂಪಿಸಲು ಶೈಕ್ಷಣಿಕ, ನೀತಿ ತಜ್ಞರು ಮತ್ತು ಉದ್ಯಮ ತಜ್ಞರ ನಾಯಕತ್ವವು ಒಗ್ಗೂಡುವ ಅವಶ್ಯಕತೆಯಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿರುವ ಎನ್​ಸಿಪಿ ನಾಯಕ ಶರದ್​ ಪವಾರ್ : ಇಂಡಿಯಾ ಒಕ್ಕೂಟ ಅಸಮಾಧಾನ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.