ETV Bharat / bharat

ಇಂದು ದೇಶದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ - ಪ್ರಧಾನಮಂತ್ರಿ ನರೇಂದ್ರ ಮೋದಿ

ಪ್ರಧಾನಿ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಕುರಿತು ಅವರು ನೇರ ಪ್ರತಿಕ್ರಿಯೆ ಪಡೆಯಲಿದ್ದಾರೆ.

PM Modi
ಪ್ರಧಾನಮಂತ್ರಿ ನರೇಂದ್ರ ಮೋದಿ
author img

By

Published : Jan 22, 2022, 9:41 AM IST

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಕುರಿತು ನೇರ ಪ್ರತಿಕ್ರಿಯೆ ಪಡೆಯಲು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ (DMs) ಸಂವಾದ ನಡೆಸಲಿದ್ದಾರೆ. ಇಂದು ಬೆಳಗ್ಗೆ 11:00 ಗಂಟೆಗೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.

ಪಿಎಂಒ ಪ್ರಕಾರ, ವೀಡಿಯೊ ಕಾನ್ಫರೆನ್ಸಿಂಗ್ ಸಂವಹನವು ಕಾರ್ಯ ಕ್ಷಮತೆ ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡು ಹಿಡಿಯಲು ಸಹಾಯ ಮಾಡುತ್ತದೆ. ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳು ಎಲ್ಲ ಪಾಲುದಾರರೊಂದಿಗೆ ಮಿಷನ್ ಮೋಡ್‌ನಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಇದರ ಉದ್ದೇಶವಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ದೇಶಾದ್ಯಂತ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿನ ಅಸಮಾನತೆ ಹೋಗಲಾಡಿಸಲು ನಿರಂತರವಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದು ಎಲ್ಲ ನಾಗರಿಕರ ಜೀವನಮಟ್ಟ ಹೆಚ್ಚಿಸಲು ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಬದ್ಧತೆಗೆ ಅನುಗುಣವಾಗಿದೆ ಎಂದು ಪಿಎಂಒ ಹೇಳಿದೆ.

ಇದೇ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು(ಜ.22) ತ್ರಿಪುರಾ ಸ್ಥಾಪನೆಯ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಬಂಡಾಯ ಶಾಸಕಿಗೆ ಬಿಜೆಪಿ ಟಿಕೆಟ್​​.. ರಾಯ್​ಬರೇಲಿ ಕ್ಷೇತ್ರದಿಂದ ಅದಿತಿ ಸ್ಪರ್ಧೆ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.