ಅಹಮದಾಬಾದ್ (ಗುಜರಾತ್): ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದಾಗ, ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ವಾಹನ ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ಸ್ವಲ್ಪ ಹೊತ್ತು ನಿಂತಿತ್ತು.
ವಿಡಿಯೋದಲ್ಲಿ ಮೋದಿಯವರ ಬೆಂಗಾವಲು ಪಡೆಯ ಭಾಗವಾಗಿದ್ದ, ಕಪ್ಪು ಬಣ್ಣದ ವಾಹನವು ಅಹಮದಾಬಾದ್ - ಗಾಂಧಿನಗರ ರಸ್ತೆಯಲ್ಲಿ ಆ್ಯಂಬುಲೆನ್ಸ್ ಹೋಗಲು ರಸ್ತೆಯ ಎಡಭಾಗಕ್ಕೆ ಚಲಿಸುತ್ತಿರುವುದನ್ನು ಕಾಣಬಹುದಾಗಿದೆ. ಪ್ರಧಾನಿ ಮೋದಿ ಅಹಮದಾಬಾದ್‌ನಿಂದ ಗಾಂಧಿನಗರದ ರಾಜಭವನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
-
#WATCH | Gujarat: Prime Minister Narendra Modi, en route from Ahmedabad to Gandhinagar, stopped his convoy to give way to an ambulance pic.twitter.com/yY16G0UYjJ
— ANI (@ANI) September 30, 2022 " class="align-text-top noRightClick twitterSection" data="
">#WATCH | Gujarat: Prime Minister Narendra Modi, en route from Ahmedabad to Gandhinagar, stopped his convoy to give way to an ambulance pic.twitter.com/yY16G0UYjJ
— ANI (@ANI) September 30, 2022#WATCH | Gujarat: Prime Minister Narendra Modi, en route from Ahmedabad to Gandhinagar, stopped his convoy to give way to an ambulance pic.twitter.com/yY16G0UYjJ
— ANI (@ANI) September 30, 2022
ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರ ಬೆಂಗಾವಲು ವಾಹನ ನಿಲ್ಲಿಸಿತು ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಅಹಮದಾಬಾದ್: ದುರ್ಗಾ ದೇವಿಗೆ ಪೂಜೆ ಸಲ್ಲಿಸಿ ಗರ್ಭಾ ನೃತ್ಯ ವೀಕ್ಷಿಸಿದ ಪ್ರಧಾನಿ..