ETV Bharat / bharat

ಗೋವಾ ವಿಮೋಚನಾ ದಿನಾಚರಣೆ; ಪಣಜಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ - ಪಣಜಿಗೆ ಬಂದಿಳಿದ ಪ್ರಧಾನಿ ಮೋದಿ

Goa Liberation Day: ಮಧ್ಯಾಹ್ನ 3 ಗಂಟೆಗೆ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆಯಲಿರುವ ಗೋವಾ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಪಣಜಿ ವಿಮಾನ ನಿಲ್ದಾಣಕ್ಕೆ ಬಂದಿಳಿ ಪ್ರಧಾನಿ ಮೋದಿ ಅವರನ್ನು ಗೋವಾ ಸಿಎಂ ಸಾವಂತ್‌ ಸ್ವಾಗತಿಸಿದ್ದಾರೆ.

PM Narendra Modi arrives at Panaji airport; Goa CM Pramod Sawant receives him
ಗೋವಾ ವಿಮೋಚನಾ ದಿನಾಚರಣೆಯ; ಪಣಜಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
author img

By

Published : Dec 19, 2021, 2:27 PM IST

ಪಣಜಿ: ಗೋವಾ ವಿಮೋಚನಾ ದಿನಾಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪಣಜಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಪ್ರಧಾನಿ ಅವರನ್ನು ಸ್ವಾಗತಿಸಿದರು.

ಮಧ್ಯಾಹ್ನ 3 ಗಂಟೆಗೆ ಡಾ.ಶ್ಯಾಮ್​ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆಯಲಿರುವ ಗೋವಾ ವಿಮೋಚನಾ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಗೋವಾವನ್ನು ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಳಿಸಿದ ಭಾರತೀಯ ಸಶಸ್ತ್ರ ಪಡೆಗಳು ಕೈಗೊಂಡ 'ಆಪರೇಷನ್ ವಿಜಯ್' ಯಶಸ್ಸನ್ನು ಗುರುತಿಸಲು ಪ್ರತಿ ವರ್ಷ ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನವನ್ನು ಆಚರಿಸಲಾಗುತ್ತದೆ. ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ಯೋಧರನ್ನು ಪ್ರಧಾನಿ ಸನ್ಮಾನಿಸಲಿದ್ದಾರೆ.

ನವೀಕರಿಸಿದ ಫೋರ್ಟ್ ಅಗುಡಾ ಜೈಲ್ ಮ್ಯೂಸಿಯಂ, ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಬ್ಲಾಕ್, ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆ, ಮೋಪಾ ವಿಮಾನ ನಿಲ್ದಾಣದಲ್ಲಿ ಏವಿಯೇಷನ್ ​​ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್, ದಬೋಲಿಮ್-ನವೇಲಿಮ್, ಮರ್ಗೋವಾದಲ್ಲಿ ಗ್ಯಾಸ್-ಇನ್ಸುಲೇಟೆಡ್ ಸಬ್‌ಸ್ಟೇಷನ್ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: 40 ಸಾವಿರ ವರ್ಷಗಳಿಂದ ಎಲ್ಲಾ ಭಾರತೀಯರ ಡಿಎನ್‌ಎ ಒಂದೇ; ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.