ETV Bharat / bharat

ಅಟಲ್​ ಬಿಹಾರಿ ವಾಜಪೇಯಿ 97ನೇ ಜನ್ಮದಿನ: ಗೌರವ ಸಮರ್ಪಿಸಿದ ಪಿಎಂ ಮೋದಿ

author img

By

Published : Dec 25, 2021, 3:42 PM IST

ಮಾಜಿ ಪ್ರಧಾನಮಂತ್ರಿ ಅಟಲ್​ ಬಿಹಾರಿ ವಾಜಪೇಯಿ ಅವರ 97ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

PM Modi remembers Atal Bihari Vajpayee birthday
ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನಕ್ಕೆ ಗೌರವ ಸಲ್ಲಿಸಿದ ಪಿಎಂ ಮೋದಿ

ನವದೆಹಲಿ: ಇಂದು ಮಾಜಿ ಪ್ರಧಾನಮಂತ್ರಿ ಅಟಲ್​ ಬಿಹಾರಿ ವಾಜಪೇಯಿ ಅವರ 97ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಟಲ್​ ಜೀ ಅವರನ್ನು ಸ್ಮರಿಸಿದ್ದಾರೆ.

  • आदरणीय अटल जी को उनकी जयंती पर कोटि-कोटि नमन।

    Remembering Atal Ji on his Jayanti. We are inspired by his rich service to the nation. He devoted his life towards making India strong and developed.

    His development initiatives positively impacted millions of Indians.

    — Narendra Modi (@narendramodi) December 25, 2021 " class="align-text-top noRightClick twitterSection" data=" ">

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ’’ಇಂದು ಅಟಲ್​ ಬಿಹಾರಿ ವಾಜಪೇಯಿ ಜನ್ಮ ದಿನ. ಈ ದೇಶಕ್ಕೆ ಅಟಲ್​ ಜೀ ಅವರು ಅತ್ಯಮೂಲ್ಯವಾದ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರಕ್ಕೆ ಅವರ ನೀಡಿರುವ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠಗೊಳಿಸಿ, ಅದನ್ನು ಅಭಿವೃದ್ಧಿಗೊಳಿಸುವ ಸಲುವಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಅಭಿವೃದ್ಧಿ ಉಪಕ್ರಮಗಳು ಕೋಟ್ಯಂತರ ಭಾರತೀಯರ ಮೇಲೆ ಧನಾತ್ಮಕ ಪರಿಣಾಮ ಬೀರಿವೆ’’ ಎಂದು ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ.

  • महान स्वतंत्रता सेनानी, शिक्षाविद् और समाज सुधारक महामना पंडित मदन मोहन मालवीय जी को उनकी जयंती पर कोटि-कोटि नमन।

महान स्वतंत्रता सेनानी, शिक्षाविद् और समाज सुधारक महामना पंडित मदन मोहन मालवीय जी को उनकी जयंती पर कोटि-कोटि नमन।

— Narendra Modi (@narendramodi) December 25, 2021

ಇದೇ ವೇಳೆ, ಮೋದಿಯವರು ಸ್ವಾತಂತ್ರ್ಯ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನಕ್ಕೂ ಗೌರವ ನಮನ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

Good Governance Day ಆಚರಣೆ:

ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನವನ್ನು ಕೇಂದ್ರ ಸರ್ಕಾರ ಉತ್ತಮ ಆಡಳಿತ ದಿನವನ್ನಾಗಿ ಆಚರಿಸುತ್ತದೆ. ಅಟಲ್​ ಜೀ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ 2014ರಿಂದ ಪ್ರತಿವರ್ಷವೂ ಡಿ.25ನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಸರ್ಕಾರದ ಹೊಣೆಗಾರಿಕೆ, ಜವಾಬ್ದಾರಿ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

1998-2004ರ ಅವಧಿಯಲ್ಲಿಎನ್‌ಡಿಎ ಸರ್ಕಾರದ ನೇತೃತ್ವ ವಹಿಸಿದ್ದ ವಾಜಪೇಯಿಯವರು, ಬಿಜೆಪಿಯಿಂದ ರಾಷ್ಟ್ರದ ಪ್ರಧಾನಿಯಾದ ಮೊದಲ ನಾಯಕರಾಗಿದ್ದರು. ಅವರು 1996,1998 ಮತ್ತು 2004 ರ ಅವಧಿಯಲ್ಲಿ ಮೂರು ಬಾರಿ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ದೀರ್ಘಕಾಲದ ಅನಾರೋಗ್ಯದ ಬಳಲುತ್ತಿದ್ದ ಅಟಲ್​ ಜೀಯವರು ಆಗಸ್ಟ್ 16, 2018 ರಂದು ನಿಧನರಾದರು. ವಾಜಪೇಯಿ ಅವರಿಗೆ 2015 ರಲ್ಲಿ ಭಾರತ ರತ್ನ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​​ ಸೇರಿ ವಿವಿಧ ಪಕ್ಷಗಳಿಂದ ಆಫರ್​ ಬಂದಿವೆ.. ಈವರೆಗೂ ಫೈನಲ್​ ನಿರ್ಧಾರ ಆಗಿಲ್ಲ ಎಂದ ಭಜ್ಜಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.