ನವದೆಹಲಿ: ದೆಹಲಿಯಲ್ಲಿ ಜಿ20 ವಿದೇಶಾಂಗ ಸಚಿವರ ಸಭೆ ನಡೆಯುತ್ತಿದೆ. ಭಾರತ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅಧ್ಯಕ್ಷತೆ ವಹಿಸಿದ್ದಾರೆ. ವಿಶ್ವದ ಹಲವು ಗಂಭೀರ ವಿಷಯಗಳ ಕುರಿತು ಚರ್ಚಿಸಲಾಗುತ್ತಿದೆ. ರಷ್ಯಾ, ಚೀನಾ, ಸೌದಿ ಅರೇಬಿಯಾ, ಮೆಕ್ಸಿಕೋ ಸೇರಿದಂತೆ ಹಲವಾರು ರಾಷ್ಟ್ರಗಳ ಸಚಿವರು ಭಾಗವಹಿಸಿದ್ದಾರೆ.
ಇದೇ ವೇಳೆ ಸಭೆಯನ್ನುದ್ದೇಶಿಸಿ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಜಿ20 ವಿದೇಶಾಂಗ ಸಚಿವರ ಸಭೆ ಮೂಲಕ ನಾನು ನಿಮ್ಮನ್ನು ಭಾರತಕ್ಕೆ ಸ್ವಾಗತಿಸುತ್ತೇನೆ. ಇದು ಏಕತೆ, ಉದ್ದೇಶ ಮತ್ತು ಕ್ರಿಯೆಯ ಅಗತ್ಯವನ್ನು ಸಂಕೇತಿಸುತ್ತದೆ. ಇಂದಿನ ಸಭೆಯು ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮತ್ತು ಉದ್ದೇಶಗಳ ಈಡೇರಿಕೆಯನ್ನು ಪ್ರತಿಬಿಂಬಿಸುತ್ತದೆ" ಎಂದರು.
-
Addressing the Opening Segment of G20 Foreign Ministers' meeting. @g20org https://t.co/s73ypWruBf
— Narendra Modi (@narendramodi) March 2, 2023 " class="align-text-top noRightClick twitterSection" data="
">Addressing the Opening Segment of G20 Foreign Ministers' meeting. @g20org https://t.co/s73ypWruBf
— Narendra Modi (@narendramodi) March 2, 2023Addressing the Opening Segment of G20 Foreign Ministers' meeting. @g20org https://t.co/s73ypWruBf
— Narendra Modi (@narendramodi) March 2, 2023
"ಬಹುಪಕ್ಷೀಯ ಸಂಬಂಧಗಳು ಇಂದು ಇಕ್ಕಟ್ಟಿಗೆ ಸಿಲುಕಿವೆ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳಬೇಕು. ಎರಡನೆಯ ಮಹಾಯುದ್ಧದ ನಂತರ ಮಾಡಿಕೊಳ್ಳಲಾದ ಒಪ್ಪಂದಗಳು ಸ್ಪರ್ಧಾತ್ಮಕ ಹಿತಾಸಕ್ತಿಗಳನ್ನು ಕಾಪಾಡುವ ಮೂಲಕ ಭವಿಷ್ಯದ ಯುದ್ಧಗಳನ್ನು ತಡೆಗಟ್ಟುವುದಾಗಿತ್ತು. ರಾಷ್ಟ್ರಗಳ ನಡುವಿನ ಸಾಮಾನ್ಯ ಹಿತಾಸಕ್ತಿಯ ಕುರಿತು ಅಂತಾರಾಷ್ಟ್ರೀಯ ಸಹಕಾರವನ್ನು ಬೆಳೆಸುವುದಾಗಿದೆ" ಎಂದು ಪ್ರಧಾನಿ ಹೇಳಿದರು.
ಅಭಿವೃದ್ಧಿಗೆ ಅಡೆತಡೆಗಳು: "ಕಳೆದ ಕೆಲವು ವರ್ಷಗಳಿಂದ ಆರ್ಥಿಕ ಬಿಕ್ಕಟ್ಟು, ಹವಾಮಾನ ಬದಲಾವಣೆ, ಸಾಂಕ್ರಾಮಿಕ ರೋಗ, ಭಯೋತ್ಪಾದನೆ ಮತ್ತು ಯುದ್ಧವು ಜಾಗತಿಕವಾಗಿ ಕಾಡಿವೆ ಎಂಬುದು ಸ್ಪಷ್ಟ. ಇದರ ಪರಿಣಾಮಗಳನ್ನು ಅಭಿವೃದ್ಧಿಶೀಲ ರಾಷ್ಟ್ರಗಳು ಹೆಚ್ಚಾಗಿ ಎದುರಿಸುತ್ತಿವೆ. ಹಲವು ಅಡೆತಡೆಗಳ ನಂತರ ನಾವೀಗ ಅಭಿವೃದ್ಧಿಯತ್ತ ಸಾಗುತ್ತಿರುವುದಕ್ಕೂ ಅಡ್ಡಿ-ಆತಂಕಗಳಿವೆ. ಅನೇಕ ಅಭಿವೃದ್ಧಿಶೀಲ ರಾಷ್ಟ್ರಗಳು ಜನರಿಗೆ ಆಹಾರ ಮತ್ತು ಇಂಧನ ಭದ್ರತೆಯನ್ನು ಖಚಿತಪಡಿಸಲು ಪ್ರಯತ್ನಿಸುತ್ತಿದ್ದರೂ ಸಾಲದ ಭಾರದಿಂದ ಹೆಣಗಾಡುವಂತಾಗಿದೆ" ಎಂದು ಪ್ರಧಾನಿ ಅಭಿಪ್ರಾಯಪಟ್ಟರು.
"ಭಾರತದ ಜಿ20 ಅಧ್ಯಕ್ಷತೆಯು ವಿಶ್ವದ ಧ್ವನಿಯಾಗಲಿದೆ. ದೊಡ್ಡ ಜಾಗತಿಕ ವಿಭಜನೆಗಳ ಸಮಯದಲ್ಲಿ ನಾವು ಭೇಟಿಯಾಗುತ್ತಿದ್ದೇವೆ. ಇಂದಿನ ವಿದೇಶಾಂಗ ಮಂತ್ರಿಗಳ ಸಭೆಯು ಭೌಗೋಳಿಕ ಮತ್ತು ರಾಜಕೀಯ ಬಿಕ್ಕಟ್ಟುಗಳ ಮೇಲೆ ಪ್ರಭಾವ ಬೀರಬೇಕು. ಇವುಗಳನ್ನು ಹೇಗೆ ಪರಿಹರಿಸಬೇಕು ಎಂಬುದರ ಕುರಿತು ನಾವೆಲ್ಲರೂ ಚಿಂತನೆ ಮಾಡಬೇಕಿದೆ" ಎಂದರು.
ವಿಶ್ವದ ಗಮನ ಜಿ20 ಕಡೆಗಿದೆ: ಪ್ರಮುಖ ಆರ್ಥಿಕ ರಾಷ್ಟ್ರಗಳಾದ ನಾವು, ಇಲ್ಲಿ ಭಾಗವಹಿಸದ ರಾಷ್ಟ್ರಗಳಿಗೂ ಉತ್ತರದಾಯಿಗಳಾಗಿದ್ದೇವೆ. ಸುಸ್ಥಿರ ಬೆಳವಣಿಗೆ, ಅಭಿವೃದ್ಧಿ, ಆರ್ಥಿಕ ಸ್ಥಿತಿಸ್ಥಾಪಕತ್ವ, ಆರ್ಥಿಕ ಸ್ಥಿರತೆ, ಭ್ರಷ್ಟಾಚಾರ, ಭಯೋತ್ಪಾದನೆ, ಆಹಾರ ಮತ್ತು ಇಂಧನ ಭದ್ರತೆಯ ಸವಾಲುಗಳನ್ನು ಎದುರಿಸಲು ಇಡೀ ಜಗತ್ತೇ ಜಿ 20ಯತ್ತ ನೋಡುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.
ಗಾಂಧಿ ಮತ್ತು ಬುದ್ಧನ ನಾಡಿನಲ್ಲಿದ್ದೇವೆ. ಭಾರತದ ನಾಗರಿಕತೆಯು ಒಗ್ಗೂಡುವುದನ್ನು ಪ್ರತಿಪಾದಿಸುತ್ತದೆಯೇ ಹೊರತು, ವಿಭಜಿಸುವುದನ್ನು ಹೇಳುವುದಿಲ್ಲ. ಇದು ನಮಗೆಲ್ಲ ಸ್ಫೂರ್ತಿಯಾಗಬೇಕು ಎಂದು ಕೋರುವೆ ಎಂದು ಜಿ20 ವಿದೇಶಾಂಗ ಸಚಿವರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.
ಭೀಕರ ಭೂಕಂಪನಕ್ಕೆ ಸಂತಾಪ: ದೆಹಲಿಯಲ್ಲಿಂದು ಜರುಗುತ್ತಿರುವ ಜಿ20 ವಿದೇಶಾಂಗ ಸಚಿವರ ಸಭೆಯ ಆರಂಭದಲ್ಲಿ ಟರ್ಕಿ ಮತ್ತು ಸಿರಿಯಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪಗಳಲ್ಲಿ ಸಾವನ್ನಪ್ಪಿದವರಿಗೆ ಒಂದು ನಿಮಿಷ ಮೌನ ಆಚರಿಸಲಾಯಿತು. ಎಲ್ಲ ಸದಸ್ಯ ರಾಷ್ಟ್ರಗಳ ಸಚಿವರು ಮಡಿದವರ ಕುಟುಂಬಗಳಿಗೆ ಸಂತಾಪ ಸೂಚಿಸಿದರು.
ಇದನ್ನೂ ಓದಿ: ₹6,800 ಕೋಟಿ ವೆಚ್ಚದಲ್ಲಿ ಹೆಚ್‌ಎಎಲ್‌ನಿಂದ 70 ತರಬೇತಿ ವಿಮಾನ ಖರೀದಿಗೆ ಕೇಂದ್ರ ನಿರ್ಧಾರ