ETV Bharat / bharat

Doctors Day: ವೈದ್ಯರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದ ನಮೋ

ಕೋವಿಡ್​ ವಿರುದ್ಧದ ಹೋರಾಟದ ವೇಳೆ ನಮ್ಮ ನೂರಾರು ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಅವರ ಸಾವಿಗೆ ದೇಶದ ಜನರ ಪರವಾಗಿ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ನಮೋ ತಿಳಿಸಿದರು.

author img

By

Published : Jul 1, 2021, 5:46 PM IST

Updated : Jul 1, 2021, 5:52 PM IST

PM Modi
PM Modi

ನವದೆಹಲಿ: ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ದೇಶದ ಎಲ್ಲ ವೈದ್ಯರಿಗೂ ಶುಭಾಶಯ ಕೋರಿದರು. ಮಹಾಮಾರಿ ಕೊರೊನಾ ವೈರಸ್​ ಸಂದರ್ಭದಲ್ಲಿ ದೇಶದ ವೈದ್ಯರ ಸೇವೆ ಅನನ್ಯವಾಗಿದ್ದು, ಅದಕ್ಕೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ ಎಂದು ನಮೋ ತಿಳಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾದ ನಮೋ

ಭಾರತೀಯ ವೈದ್ಯಕೀಯ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ವೈದ್ಯರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ವೈದ್ಯರ ಜ್ಞಾನ ಮತ್ತು ಅನುಭವ ಕೋವಿಡ್​ ವಿರುದ್ಧದ ಹೋರಾಟದಲ್ಲಿ ನಮಗೆ ಸಹಾಯವಾಗಿದೆ. ಭಾರತದ 130 ಕೋಟಿ ಭಾರತೀಯರ ಪರವಾಗಿ ನಾನು ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ದೇಶದ ವೈದ್ಯಕೀಯ ವಲಯ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶ ಹೊಂದಲಾಗಿದೆ. ಈ ಹಿಂದಿನ ಬಜೆಟ್​ಗಳಿಗಿಂತಲೂ ಈ ಸಲ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಹಣ ಮೀಸಲಿಡಲಾಗಿದೆ. ಈ ವರ್ಷದ ಶೈಕ್ಷಣಿಕ ಸಾಲಿನ ಬಜೆಟ್​ನಲ್ಲಿ 2 ಲಕ್ಷ ಕೋಟಿ ರೂ. ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ವಿಡಿಯೋ ಕಾನ್ಪರೆನ್ಸ್​ ಮೂಲಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದೇಶದಲ್ಲಿ ಕೋವಿಡ್​​ ಅಲೆ ಶುರುಗೊಂಡಾಗಿನಿಂದಲೂ ವೈದ್ಯರು ಬಿಡುವಿಲ್ಲದ ರೀತಿಯಲ್ಲಿ ಜನರ ಸೇವೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ದೇಶದ ನೂರಾರು ವೈದ್ಯರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆಂದು ನಮೋ ತಿಳಿಸಿದರು. 2014ಕ್ಕೂ ಮೊದಲು ದೇಶದಲ್ಲಿ ಕೇವಲ ಎರಡು ಏಮ್ಸ್​ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಇದೀಗ 15 ಹೊಸ ಏಮ್ಸ್​ಗಳ ಕೆಲಸ ಶುರುವಾಗಿದೆ ಎಂದು ಹೇಳಿದರು.

ಇದನ್ನೂ ಓದಿರಿ: ತಿಂಗಳ ಹಿಂದಷ್ಟೇ ಸಪ್ತಪದಿ ತುಳಿದ ವೈದ್ಯ ಜೋಡಿ 'ವೈದ್ಯರ ದಿನವೇ' ಆತ್ಮಹತ್ಯೆಗೆ ಶರಣು!

ವೈದ್ಯರ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಬರುವ ದಿನಗಳಲ್ಲಿ ಹೊಸ ಕಾಯ್ದೆ ಜಾರಿಗೆ ತರಲು ನಾವು ಯೋಜನೆ ರೂಪಿಸುತ್ತಿದ್ದೇವೆ ಎಂದು ನಮೋ ತಿಳಿಸಿದರು. ದೇಶಾದ್ಯಂತ ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಆಚರಿಸಲಾಗುತ್ತಿದ್ದು, ವೈದ್ಯರ ಸೇವೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Last Updated : Jul 1, 2021, 5:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.