ETV Bharat / bharat

'ಒಂದು ರಾಷ್ಟ್ರ ಒಂದು ಚುನಾವಣೆ' ದೇಶಕ್ಕೆ ಅತ್ಯಗತ್ಯ: ಪ್ರಧಾನಿ ಮೋದಿ - 80ನೇ ಅಖಿಲ ಭಾರತ ಅಧಿಕಾರಿಗಳ ಸಮ್ಮೇಳನ'

ಅಭಿವೃದ್ಧಿಯ ದೃಷ್ಟಿಯಿಂದ ಒಂದು ರಾಷ್ಟ್ರ ಒಂದು ಚುನಾವಣೆಯ ಕಲ್ಪನೆ ದೇಶದ ಅತ್ಯಗತ್ಯವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

pm modi
ಪ್ರಧಾನಿ ಮೋದಿ
author img

By

Published : Nov 26, 2020, 4:28 PM IST

ನವದೆಹಲಿ: ಪ್ರತಿ ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುತ್ತಿರುವ ಕಾರಣದಿಂದ ದೇಶಕ್ಕೆ 'ಒಂದು ರಾಷ್ಟ್ರ, ಒಂದು ಚುನಾವಣೆ'ಯ ಪರಿಕಲ್ಪನೆ ಅತ್ಯಗತ್ಯವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

80ನೇ ಅಖಿಲ ಭಾರತ ಅಧಿಕಾರಿಗಳ ಸಮ್ಮೇಳನದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತುತ ಭಾರತಕ್ಕೆ ಅವಶ್ಯಕತೆಯಿದೆ. ಕೇವಲ ಚರ್ಚೆಯ ವಿಷಯವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮರಡೋನಾ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಪ್ರತಿ ತಿಂಗಳು ಒಂದಲ್ಲಾ ಒಂದು ರೀತಿಯ ಚುನಾವಣೆಗಳು ನಡೆಯುತ್ತಿದ್ದು, ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಇದೇ ಕಾರಣದಿಂದ 'ಒಂದು ರಾಷ್ಟ್ರ ಒಂದು ಚುನಾವಣೆ' ಪರಿಕಲ್ಪನೆ ಬಗ್ಗೆ ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವ ಅವಶ್ಯಕತೆಯಿದೆ ಎಂದಿದ್ದಾರೆ.

ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನು ಇರಬೇಕೆಂದು ಬಯಸಿದ ಅವರು, ಪ್ರತ್ಯೇಕ ಪಟ್ಟಿರುವುದು ವ್ಯರ್ಥ್ಯ ಎಂದು ಈ ವೇಳೆ ಪ್ರತಿಪಾದಿಸಿದ್ದಾರೆ.

'ಮುಂಬೈ ಭಯೋತ್ಪಾದಕ ದಾಳಿ ಮರೆಯಲು ಸಾಧ್ಯವಿಲ್ಲ'

ಇದೇ ವೇಳೆ ಮುಂಬೈ ಮೇಲೆ ಭಯೋತ್ಪಾದಕರ ದಾಳಿಯನ್ನು ಭಾರತದ ಮೇಲಿನ ಅತಿದೊಡ್ಡ ಭಯೋತ್ಪಾದಕ ದಾಳಿ ಎಂದ ಪ್ರಧಾನಿ ಈ ದಾಳಿಯನ್ನು ಭಾರತ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಮುಂಬೈ ದಾಳಿಗೆ 12 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಿದರು. ಇದರ ಜೊತೆಗೆ ಹೊಸ ನೀತಿಗಳೊಂದಿಗೆ ದೇಶ ಭಯೋತ್ಪಾದನೆ ವಿರುದ್ಧ ಹೋರಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.