ಕಚ್ (ಗುಜರಾತ್): ತಮ್ಮ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಅಲ್ಲದೇ ರೈತರನ್ನು ತಪ್ಪು ದಾರಿಗೆಳೆಯುತ್ತಿರುವ ಪ್ರತಿಪಕ್ಷಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಇಂದು ಪ್ರತಿಪಕ್ಷಗಳಲ್ಲಿ ಕುಳಿತಿರುವ ಮತ್ತು ರೈತರನ್ನು ದಾರಿ ತಪ್ಪಿಸುವ ಜನರು ತಮ್ಮ ಸರ್ಕಾರದ ಅವಧಿಯಲ್ಲಿ ಈ ಕೃಷಿ ಸುಧಾರಣೆಗಳ ಪರವಾಗಿದ್ದರು. ಆದರೆ, ತಮ್ಮ ಸರ್ಕಾರದ ಅವಧಿಯಲ್ಲಿ ಈ ಕಾನೂನುಗಳನ್ನು ಜಾರಿಗೊಳಿಸಲು ಸಾಧ್ಯವಾಗಲಿಲ್ಲ.
ಆದರೆ, ಇಂದು ನಮ್ಮ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಾಗ ಅದೇ ಕಾನೂನುಗಳನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಸಿಂಘು ಗಡಿಯಲ್ಲಿ ಪ್ರತಿಭಟಿಸುತ್ತಿದ್ದ ರೈತ ಹೃದಯಾಘಾತದಿಂದ ಸಾವು
ಭಾರತ ಸರ್ಕಾರ ಯಾವಾಗಲೂ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡುತ್ತೇವೆ ಎಂದು ಗುಜರಾತ್‌ನ ಕಚ್‌ನಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಹೇಳಿದ್ದಾರೆ.