ETV Bharat / bharat

ಮೋದಿಗೆ ಭದ್ರತಾ ಲೋಪ.. ಫಿರೋಜ್‌ಪುರ ASP ಕರ್ತವ್ಯ ನಿರ್ವಹಿಸುವಲ್ಲಿ ವಿಫಲ - ಫಿರೋಜ್‌ಪುರ ಪೊಲೀಸ್ ಅಧೀಕ್ಷಕರು

ಪ್ರಧಾನಿ ಮೋದಿ ಪಂಜಾಬ್​ ಭೇಟಿ ವೇಳೆ ನಡೆದ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ವಿಚಾರಣೆ ನಡೆಸಿತು. ಈ ವೇಳೆ ಫಿರೋಜ್‌ಪುರ ಹಿರಿಯ ಪೊಲೀಸ್ ಅಧೀಕ್ಷಕರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

Supreme Court
ಸುಪ್ರೀಂಕೋರ್ಟ್
author img

By

Published : Aug 25, 2022, 1:42 PM IST

ನವದೆಹಲಿ: ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪದ ಕುರಿತು ಇಂದು ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ತಮ್ಮ ಕರ್ತವ್ಯವನ್ನು ನಿರ್ವಹಿಸುವಲ್ಲಿ ಫಿರೋಜ್‌ಪುರ ಹಿರಿಯ ಪೊಲೀಸ್ ಅಧೀಕ್ಷಕರು ವಿಫಲರಾಗಿದ್ದಾರೆ ಎಂದು ಐವರು ಸದಸ್ಯರ ಸಮಿತಿ ವರದಿ ತಿಳಿಸಿದೆ ಅಂತಾ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿತು.

ನಿವೃತ್ತ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಮಲ್ಹೋತ್ರಾ ನೇತೃತ್ವದಲ್ಲಿ ಐವರು ಸದಸ್ಯರ ಸಮಿತಿಯನ್ನು ಜನವರಿ 12 ರಂದು ರಚಿಸಲಾಗಿತ್ತು. ಈ ಸಮಿತಿಯು ಫಿರೋಜ್​ಪುರದ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಮಾಹಿತಿ ನೀಡಿದೆ. 'ಫಿರೋಜ್‌ಪುರ ಎಸ್‌ಎಸ್‌ಪಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಸಾಕಷ್ಟು ಬಲ ಲಭ್ಯವಿದ್ದರೂ ಹಾಗೂ ಪ್ರಧಾನಿ ಆ ಮಾರ್ಗವನ್ನು ಪ್ರವೇಶಿಸುತ್ತಾರೆ ಎಂದು ಎರಡು ಗಂಟೆಗಳ ಮೊದಲು ಅವರಿಗೆ ತಿಳಿಸಿದ್ದರೂ ಸಹ, ಅವರು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾಗಿದ್ದಾರೆ. ಮಲ್ಹೋತ್ರಾ ಸಮಿತಿಯ ವರದಿಯನ್ನು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಹೇಳಿತು.

ಏನಿದು ಪ್ರಕರಣ: ಪ್ರಧಾನಿ ಮೋದಿ ಜನವರಿ 5 ರಂದು ಪಂಜಾಬ್‌ನ ಹುಸೇನಿವಾಲಾ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರಿಂದ ಬೆಂಗಾವಲು ಪಡೆ ಫ್ಲೈಓವರ್‌ನಲ್ಲಿಯೇ ಸಿಲುಕಿಕೊಂಡಿತ್ತು. ಆ ನಂತರ ಮೋದಿ ಫಿರೋಜ್​ ಪುರಕ್ಕೆ ಭೇಟಿ ನೀಡುವುದನ್ನು ಸ್ಥಗಿತಗೊಳಿಸಿದ್ದರು. ಈ ಘಟನೆಯ ಭಾರಿ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: Pm Security Breach: ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.